ಪ್ರಕಟನೆ 2:23 - ಕನ್ನಡ ಸಮಕಾಲಿಕ ಅನುವಾದ23 ಅವಳ ಮಕ್ಕಳನ್ನು ಮರಣಕ್ಕೆ ಒಪ್ಪಿಸುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ತಿಳಿದುಬರುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಮಿಯಾ ತಿಚ್ಯಾ ವಾಂಗ್ಡಿಯಾಕ್ನಿ ಮಾರುನ್ ಟಾಕ್ತಾ ತನ್ನಾ ಸಗ್ಳ್ಯಾ ಲೊಕಾಕ್ನಿ ತಾಂಡ್ಯಾಕ್ನಿ ಕಳುನ್ ಯೆತಾ ಮಿಯಾ ತೆಂಚಿ ಮನಾ ಕಳ್ವುನ್ ಘೆತಾ ಅನಿ . ಮಿಯಾ ತುಮ್ಚ್ಯಾ ಕಾಮಾಂಚ್ಯಾ ಪರ್ಕಾರ್ ಮಜುರಿ ದಿತಾ. ಅಧ್ಯಾಯವನ್ನು ನೋಡಿ |
“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.
ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.