Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:24 - ಕನ್ನಡ ಸಮಕಾಲಿಕ ಅನುವಾದ

24 ಥುವತೈರದಲ್ಲಿರುವ ಉಳಿದವರಿಗೆ ನಾನು ಹೇಳುವುದೇನಂದರೆ: ಅವಳ ಬೋಧನೆಯನ್ನು ನೀವು ಅವಲಂಬಿಸಲಿಲ್ಲ. ಸೈತಾನನ ಆಳವಾದ ರಹಸ್ಯ ಬೋಧನೆಗಳು ಎಂದು ಹೇಳುವ ಬೋಧನೆಯನ್ನು ನೀವು ಅವಲಂಬಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯ ಆಳವನ್ನು ಯಾರಾರು ತಿಳಿಯದೆಯೂ ಅದನ್ನು ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವುದೇನಂದರೆ, ನಾನು ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ: ಈ ದುರ್ಬೋಧನೆಯನ್ನು ನೀವು ಅವಲಂಬಿಸಲಿಲ್ಲ. ‘ಸೈತಾನನ ಗೂಢ ರಹಸ್ಯಗಳು’ ಎನ್ನಲಾಗುವ ಈ ವಿಷಯಗಳನ್ನು ನೀವು ಅರಿತುಕೊಳ್ಳಲಿಲ್ಲ. ನಿಮ್ಮ ಮೇಲೆ ಹೆಚ್ಚಿನ ಹೊರೆಯನ್ನು ಹೊರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಅಗಾಧ ಬೋಧೆಯೆಂದು ಹೇಳಿಸಿಕೊಂಡಿರುವ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯನ್ನು ನಿಮ್ಮಲ್ಲಿ ಯಾರಾರು ತಿಳಿಯದೆಯೂ ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ, ನೀವು ಆಕೆಯ ಬೋಧನೆಗಳನ್ನು ಅನುಸರಿಸಲಿಲ್ಲ, ‘ಸೈತಾನನ ಅಗಾಧವಾದ ರಹಸ್ಯಗಳು’ ಎಂದು ಅವರು ಹೇಳುವ ಸಂಗತಿಗಳನ್ನು ನೀವು ಕಲಿತುಕೊಂಡಿಲ್ಲ. ಆದ್ದರಿಂದ ನಾನು ಬೇರೊಂದು ಹೊರೆಯನ್ನು ನಿಮ್ಮ ಮೇಲೆ ಹೊರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತಸೆ ಹೊಲ್ಯಾರ್ ಥೈಟಿರಾತ್ಲ್ಯಾ ಲೊಕಾಕ್ನಿ ಮಿಯಾ ಸಾಂಗ್ತಲೆ ಕಾಯ್ ಮಟ್ಲ್ಯಾರ್ ತುಮಿ ತಿಚಿ ಶಿಕ್ಪಾ ಸಾರ್ಕೆ ಚಲುಕ್ನಾಸಿ ಸೈತಾನಾಚ್ಯಾ ಖೊಲ್ ಹೊತ್ತಿ ಗುಟ್ ಅನಿ ತೆನಿ ಸಾಂಗಲ್ಲಿ ಸಂಗ್ತಿಯಾ ತುಮಿ ಆಯ್ಕಿನ್ಯಾಸಿ , ತಸೆ ಹೊವ್ನ್ ಅನಿಎಕ್ ವಜ್ಜೆ ಮಿಯಾ ತುಮ್ಚ್ಯಾ ವೈರ್ ಘಾಲಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:24
15 ತಿಳಿವುಗಳ ಹೋಲಿಕೆ  

ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿಬಿದ್ದು, ಹೇಗೆ ಮೋಸ ಹೋದಳೋ, ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತ ಯೇಸುವಿನ ಮೇಲಿರಬೇಕಾದ ಯಥಾರ್ಥತೆಯನ್ನೂ ಶುದ್ಧ ಭಕ್ತಿಯನ್ನೂ ಬಿಟ್ಟುಹೋದೀತೆಂಬ ಭಯ ನನಗುಂಟು.


ಸೈತಾನನು ನಮ್ಮನ್ನು ವಂಚಿಸಲು ಅವಕಾಶ ಕೊಡಬಾರದು. ಅವನ ಕುತಂತ್ರಗಳನ್ನು ನಾವು ಅರಿತವರಲ್ಲವೇ?


ಈ ಅಗತ್ಯವಾದವುಗಳನ್ನು ಬಿಟ್ಟು ಬೇರೆಯವುಗಳನ್ನು ನಿಮ್ಮ ಮೇಲೆ ಹೊರೆಯಾಗಿ ಹಾಕಬಾರದೆಂಬುದು, ಪವಿತ್ರಾತ್ಮರಿಗೂ ನಮಗೂ ಒಳ್ಳೆಯದೆಂದು ತೋಚಿತು.


ಆ ಮೊದಲನೆಯ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವನ್ನು ಕೊಡಲಾಗಿದ್ದರಿಂದ ಭೂನಿವಾಸಿಗಳನ್ನು ಮೋಸಗೊಳಿಸುತ್ತದೆ. ಭೂಮಿಯ ಮೇಲೆ ವಾಸಿಸುವವರು, ಕತ್ತಿಯಿಂದ ಗಾಯಹೊಂದಿ, ಸಾಯದೆ ಬದುಕಿದ ಮೃಗದ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಹೇಳುತ್ತದೆ.


ನಮಗಾದರೋ ದೇವರು ತಮ್ಮ ಪವಿತ್ರಾತ್ಮರ ಮೂಲಕ ಇವುಗಳನ್ನು ಪ್ರಕಟಿಸಿದ್ದಾರೆ. ಪವಿತ್ರಾತ್ಮರು ಎಲ್ಲಾ ವಿಷಯಗಳನ್ನು ಹಾಗೂ ದೇವರ ಆಳವಾದ ರಹಸ್ಯಗಳನ್ನು ಪರಿಶೋಧಿಸುವವರಾಗಿದ್ದಾರೆ.


ಅವರಲ್ಲಿ ಒಬ್ಬ ಮಹಿಳೆಯ ಹೆಸರು ಲುದ್ಯ ಎಂದಿತ್ತು. ಆಕೆ ಥುವತೈರ ಊರಿನವಳೂ ಕೆನ್ನೀಲಿ ಬಣ್ಣದ ಬಟ್ಟೆಗಳ ವ್ಯಾಪಾರಿಯೂ ದೇವರನ್ನು ಆರಾಧಿಸುವವಳೂ ಆಗಿದ್ದಳು. ಪೌಲನು ಹೇಳಿದ್ದನ್ನು ಲಕ್ಷ್ಯಕೊಡುವಂತೆ ಕರ್ತ ಯೇಸು ಆಕೆಯ ಹೃದಯವನ್ನು ತೆರೆದರು.


ಅಂಥ ಜ್ಞಾನವು ದೈವಿಕ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು. ಅದು ಆತ್ಮಿಕವಾದದ್ದಲ್ಲ. ಅದು ದೆವ್ವಗಳಿಗೆ ಸಂಬಂಧಪಟ್ಟದ್ದು.


ಅದು, “ಕಾಣುತ್ತಿರುವುದನ್ನು ಸುರುಳಿಯಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯದಲ್ಲಿರುವ ಏಳು ಸಭೆಗಳಿಗೆ ಕಳುಹಿಸಬೇಕು,” ಎಂದು ನುಡಿಯಿತು.


ನಾನು ನಿನ್ನ ಸಂಕಟವನ್ನೂ ನಿನ್ನ ದಾರಿದ್ರ್ಯವನ್ನೂ ಬಲ್ಲೆನು. ಆದರೂ ನೀನು ಸಿರಿವಂತನೇ! ಮಾತ್ರವಲ್ಲದೇ ಅವರು ಯೆಹೂದ್ಯರಲ್ಲದಿದ್ದರೂ ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನೂ ಬಲ್ಲೆನು. ಅವರು ಸೈತಾನನ ಸಭಾಮಂದಿರದವರಾಗಿದ್ದಾರೆ.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು, ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ. ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನನ್ನು ಕೊಲ್ಲಲಾದ ದಿನಗಳಲ್ಲಿಯೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಅಲ್ಲಗಳೆಯಲಿಲ್ಲ.


“ಥುವತೈರದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಪುತ್ರ ಆಗಿರುವವರು ಹೇಳುವುದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು