Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:26 - ಕನ್ನಡ ಸಮಕಾಲಿಕ ಅನುವಾದ

26 ಯಾರು ಜಯಶಾಲಿಯಾಗಿದ್ದು, ನನ್ನ ಚಿತ್ತವನ್ನು ಅಂತ್ಯದವರೆಗೂ ಯಾರು ನಡೆಸುತ್ತಾರೋ, ಅವರಿಗೆ ನಾನು ರಾಷ್ಟ್ರಗಳ ಮೇಲೆ ಅಧಿಕಾರವನ್ನು ನೀಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26-28 ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನು ಕಡೆಯವರೆಗೂ ನಡಿಸುತ್ತಾನೋ, ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು. ‘ಅವನು ಕಬ್ಬಿಣದ ಕೋಲಿನಿಂದ ಅವರನ್ನು ಆಳುವನು, ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆ ಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26-28 ನಾನು ನನ್ನ ಪಿತನಿಂದ ಅಧಿಕಾರ ಪಡೆದಿರುವಂತೆಯೇ, ಜಯಹೊಂದುವವನಿಗೆ ಹಾಗು ನಾನು ಮೆಚ್ಚುವ ಕಾರ್ಯಗಳನ್ನು ಕೊನೆಯವರೆಗೂ ಮುಂದುವರಿಸಿಕೊಂಡು ಹೋಗುವವನಿಗೆ, ‘ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು ಅವನು ಅವುಗಳನ್ನು ಕಬ್ಬಿಣದ ದಂಡದಿಂದ ಆಳುವನು ಮಣ್ಣಿನ ಮಡಕೆಯಂತೆ ಅವುಗಳನ್ನು ನುಚ್ಚುನೂರು ಮಾಡುವನು.’ ಅಂಥವನಿಗೆ ಉದಯ ತಾರೆಯನ್ನು ನೀಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯಾವನು ಜಯಶಾಲಿಯಾಗಿದ್ದು ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನು ಕಡೇವರೆಗೂ ನಡಿಸುತ್ತಾನೋ ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಜಯಗಳಿಸುವವನಿಗೆ ಮತ್ತು ನಾನು ಅಪೇಕ್ಷಿಸುವುದನ್ನು ಕೊನೆಯವರೆಗೆ ಮಾಡುವವನಿಗೆ ಜನಾಂಗಗಳ ಮೇಲಿನ ಅಧಿಕಾರವನ್ನು ನೀಡುತ್ತೇನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಜೆ ಕೊನ್ ಜಯ್ ಹೊವ್ನ್ ರ್‍ಹಾತಾ. ಮಾಜಿ ಬರಿ ಕಾಮಾ ಧರುನ್ ಘೆವ್ನ್ ಆಕ್ರಿ ಪತರ್ ತಿ ಕರಿತ್ ರ್‍ಹಾತಾ, ತೆಕಾ ಮಿಯಾ ದೆಶಾಂಚ್ಯಾ ವರ್ತಿ ಅಧಿಕಾರ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:26
32 ತಿಳಿವುಗಳ ಹೋಲಿಕೆ  

ನಾನು ಜಯಹೊಂದಿ, ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆ, ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ರಾಜ್ಯವೂ, ದೊರೆತನವೂ, ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತೂ ಮಹೋನ್ನತನ ಪರಿಶುದ್ಧವಾದ ಜನರಿಗೆ ದೊರಕುವುದು. ಆತನ ರಾಜ್ಯವು ನಿತ್ಯವಾದ ರಾಜ್ಯ. ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವುವು ಮತ್ತು ವಿಧೇಯವಾಗಿರುವುವು.’


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು, ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ದೇವರ ಪರಲೋಕದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನಲು ಕೊಡುವೆನು.


ನನ್ನನ್ನು ಕೇಳು, ಆಗ ನಾನು ರಾಷ್ಟ್ರಗಳನ್ನು ನಿನ್ನ ವಾರಸಾಗಿಯೂ, ಭೂಮಿಯ ಕಟ್ಟಕಡೆಯವರೆಗೂ ಇರುವ ದೇಶಗಳನ್ನೂ ನಿಮ್ಮ ಸೊತ್ತಾಗಿಯೂ ಕೊಡುವೆನು.


ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ಯೇಸುವು ದೇವಪುತ್ರ ಎಂದು ನಂಬಿದವರೇ ಹೊರತು ಲೋಕವನ್ನು ಜಯಿಸುವವರು ಯಾರು?


ಯೇಸು ಅವರಿಗೆ, “ದೇವರು ಕಳುಹಿಸಿದ ನನ್ನನ್ನು ನೀವು ನಂಬುವುದೇ ದೇವರು ಮೆಚ್ಚುವ ಕಾರ್ಯ,” ಎಂದರು.


ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.


ಪುರಾತನ ಮನುಷ್ಯನು ಬಂದು ಮಹೋನ್ನತನ ಪರಿಶುದ್ಧರಿಗೆ ನ್ಯಾಯತೀರ್ಪು ಕೊಡುವವರೆಗೂ, ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದವರೆಗೂ ಅವರ ಮೇಲೆ ಜಯವನ್ನು ಹೊಂದಿತು.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


ಯಾರು ಜಯ ಹೊಂದುತ್ತಾರೋ, ಅವರನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಸ್ಥಾಪಿಸುವೆನು. ಅವರು ಎಂದಿಗೂ ಅದರೊಳಗಿಂದ ಹೊರಗೆ ಹೋಗುವುದಿಲ್ಲ. ನಾನು ನನ್ನ ದೇವರ ಹೆಸರನ್ನು ಪರಲೋಕದಲ್ಲಿರುವ ನನ್ನ ದೇವರಿಂದ ಇಳಿದು ಬರುವ ಹೊಸ ಯೆರೂಸಲೇಮಿನ ಹೆಸರನ್ನೂ ಹಾಗೂ ನನ್ನ ಹೊಸ ಹೆಸರನ್ನೂ ಅವರ ಮೇಲೆ ಬರೆಯುವೆನು.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು.


ನಾವು ದೇವರ ಪುತ್ರ ಆಗಿರುವ ಯೇಸುಕ್ರಿಸ್ತರ ಹೆಸರನ್ನು ನಂಬಿ, ಅವರು ನಮಗೆ ಆಜ್ಞಾಪಿಸಿದ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ದೇವರ ಆಜ್ಞೆಯಾಗಿರುತ್ತದೆ.


ಮೂರ್ಖನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಪ್ರಮಾಣಗಳು ಬೇಕೋ?


ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ.


ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು.


ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು, ಅದನ್ನು ಎಂದಿಗೂ ಎಂದೆಂದಿಗೂ ವಶಪಡಿಸಿಕೊಳ್ಳುವರು.’


ಜಯಹೊಂದುವವರು ಇವುಗಳಿಗೆ ಬಾಧ್ಯನಾಗುವರು. ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಮಕ್ಕಳಾಗಿರುವರು.


ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.


ಯೇಸು ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸಮಸ್ತವೂ ನವೀಕರಣವಾಗುವಾಗ, ಮನುಷ್ಯಪುತ್ರನಾದ ನಾನು ನನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಂಡಿರಲು, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯತೀರಿಸುವಿರಿ.


ಅವರು ಕುರಿಗಳಂತೆ ಸಾಯಲು ನೇಮಕವಾಗಿದ್ದಾರೆ. ಮರಣವೇ ಅವರ ಕುರುಬ; ಅವರ ವೈಭವ ನಿವಾಸದಿಂದ ದೂರ ಸಮಾಧಿಯಲ್ಲಿರುವುದು ಅವರ ರೂಪ ಕ್ಷಯವಾಗುವುದು. ಆದರೆ ಯಥಾರ್ಥರು ಬೆಳಿಗ್ಗೆ ಅವರನ್ನು ಬಿಟ್ಟು ಸಾಗುತ್ತಿರುವರು.


ಜಯಹೊಂದುವವರಿಗೆ ಹೀಗೆ ಬಿಳಿಯ ವಸ್ತ್ರಗಳನ್ನು ಹೊದಿಸಲಾಗುವುದು. ಅವರ ಹೆಸರನ್ನು ಜೀವಬಾಧ್ಯರ ಪಟ್ಟಿಯಿಂದ ನಾನು ಅಳಿಸಿಬಿಡದೆ, ಅವರ ಹೆಸರನ್ನು ನನ್ನ ತಂದೆಯ ಮುಂದೆಯೂ ಅವರ ದೂತರ ಮುಂದೆಯೂ ಅರಿಕೆ ಮಾಡುವೆನು.


ಅವರು ನಮ್ಮಿಂದ ಹೊರಟು ಹೋದರು. ಆದರೆ ಅವರು ನಮ್ಮವರಾಗಿರಲಿಲ್ಲ. ಏಕೆಂದರೆ ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ತೋರಿಬಂತು.


ಈ ಕಾರಣದಿಂದ, ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಶೋಧಿಸುವನೋ ಎಂಬ ಭಯದ ದೆಸೆಯಿಂದ, ನಾನು ಸಹ ಸಹಿಸಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳಿದುಕೊಳ್ಳುವುದಕ್ಕೆ ತಿಮೊಥೆಯನನ್ನು ಕಳುಹಿಸಿದೆನು.


ಕಬ್ಬಿಣದ ಗದೆಯಿಂದ ನೀನು ಅವರನ್ನು ದಂಡಿಸಿ, ಮಣ್ಣಿನ ಮಡಕೆಯಂತೆ ಚೂರುಚೂರಾಗಿ ಅವರನ್ನು ಒಡೆದುಹಾಕುವೆ.”


ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು