Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:5 - ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ, ಅದನ್ನು ಜ್ಞಾಪಿಸಿಕೊಂಡು ಪಶ್ಚಾತ್ತಾಪಪಡು. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನಿನ್ನ ಮನಸ್ಸು ಪರಿವರ್ತನೆ ಹೊಂದದಿದ್ದರೆ, ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆ ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದುದರಿಂದ ನೀನು ಹೇಗೆ ಪತನಹೊಂದಿದೆ ಎಂಬುದನ್ನು ಜ್ಞಾಪಿಸಿಕೋ. ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಮೊದಲು ಮಾಡಿದ ಸುಕೃತ್ಯಗಳನ್ನು ಸಾಧಿಸು. ನೀನು ಪಾಪಕ್ಕೆ ವಿಮುಖನಾಗದೆಹೋದರೆ, ನಾನು ನಿನ್ನ ಬಳಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ದೇವರ ಕಡೆಗೆ ತಿರುಗಿಕೋ. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ದೇವರ ಕಡಗೆ ತಿರುಗಿಕೊಳ್ಳದೆ ಹೋದರೆ ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀ ಎಂಬುದನ್ನು ನೆನಪು ಮಾಡಿಕೊ; ಮನಸ್ಸನ್ನು ಪರಿವರ್ತಿಸಿಕೊ. ನೀನು ಮೊದಲು ಮಾಡಿದ ಕಾರ್ಯಗಳನ್ನು ಮಾಡು. ನೀನು ಪರಿವರ್ತನೆಗೊಳ್ಳದಿದ್ದರೆ ನಾನು ನಿನ್ನಲ್ಲಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತಿಯಾ ಕವ್ಡ್ಯಾ ಫಾಟಿ ಪಡ್ಲೆ ಮನುನ್ ತಿಯಾಚ್ ಯವ್ಜುನ್ ಬಗ್! ತಿಯಾ ಪಾಪ್ ಕರ್ತಲೆ ಸೊಡುನ್ ಸೊಡ್ ಅನಿ ತಿಯಾ ಪಯ್ಲೆ ಕಸೆ ಕರಲ್ಲೆ ತಸೆಚ್ ಕರ್. ತಿಯಾ ಪಾಪ್ ಕರ್ತಲೆ ಸೊಡಿನಸ್ಲ್ಯಾರ್ ಮಿಯಾ ತುಜೆಕ್ಡೆ ಯೆತಾ ಅನಿ ತುಜೊ ದಿವ್ಯಾಚೊ ಖಾಂಬೊ ತ್ಯೆಚ್ಯಾ ಜಾಗ್ಯಾ ವೈನಾ ಕಾಡುನ್ ಘೆವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:5
34 ತಿಳಿವುಗಳ ಹೋಲಿಕೆ  

ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.


ಆದ್ದರಿಂದ ನೀನು ದೇವರ ಕಡೆಗೆ ತಿರುಗಿಕೋ! ಇಲ್ಲದಿದ್ದರೆ ನಾನು ಶೀಘ್ರವೇ ನಿನ್ನ ಬಳಿಗೆ ಬಂದು ನನ್ನ ಇಬ್ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧಮಾಡುವೆನು.


ಇಸ್ರಾಯೇಲೇ, ನಿನ್ನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೋ. ಏಕೆಂದರೆ ನಿನ್ನ ಪಾಪಗಳೇ, ನಿನ್ನ ಬೀಳುವಿಕೆಗೆ ಕಾರಣ.


ನಾನು ನಿನ್ನ ಕ್ರಿಯೆಗಳನ್ನೂ ನಿನ್ನ ಪ್ರೀತಿಯನ್ನೂ ನಂಬಿಕೆಯನ್ನೂ ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ನೀನು ಮೊದಲು ಮಾಡಿದ್ದಕ್ಕಿಂತಲೂ ಈಗ ಹೆಚ್ಚಾಗಿ ಮಾಡುತ್ತಿರುವೆ.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯ ಏನೆಂದರೆ: ಆ ಏಳು ನಕ್ಷತ್ರಗಳು, ಆ ಏಳು ಸಭೆಗಳ ಸಂದೇಶಕರು, ಆ ಏಳು ದೀಪಸ್ತಂಭಗಳು, ಆ ಏಳು ಸಭೆಗಳಾಗಿರುತ್ತವೆ.


ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು, ನೀವು ಯಾವ ಸಂಗತಿಗಳಿಂದ ಅಶುದ್ಧವಾಗಿದ್ದೀರೋ, ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕ ಮಾಡಿಕೊಳ್ಳುವಿರಿ. ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿಯಲ್ಲಿಯೇ ನೀವು ಅಸಹ್ಯರಾಗುವಿರಿ.


ಅವನು ತಂದೆಯರ ಹೃದಯಗಳನ್ನು ಮಕ್ಕಳ ಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತ ದೇವರಿಗೋಸ್ಕರ ಜನರನ್ನು ಸಿದ್ಧಮಾಡುವುದಕ್ಕೆ ಎಲೀಯನ ಆತ್ಮದಿಂದಲೂ ಶಕ್ತಿಯಿಂದಲೂ ಕರ್ತದೇವರ ಮುಂದೆ ಹೋಗುವನು,” ಎಂದು ಹೇಳಿದನು.


ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಯರ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಯರ ಕಡೆಗೂ ತಿರುಗಿಸುವನು.”


ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ, ನಿನ್ನ ಆಲೋಚನಾಪರರನ್ನು ಪ್ರಾರಂಭದಲ್ಲಿದ್ದ ಹಾಗೆಯೂ ತಿರುಗಿ ಒದಗಿಸಿ ಕೊಡುವೆನು. ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ, ನಂಬಿಗಸ್ತಿಕೆಯ ಪಟ್ಟಣವೆಂದೂ ಎನಿಸಿಕೊಳ್ಳುವೆ.”


ಅವನು ಬಂದು ಆ ಗೇಣಿಗೆದಾರರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಒಪ್ಪಿಸುವನು,” ಎಂದರು. ಜನರು ಇದನ್ನು ಕೇಳಿದಾಗ, “ಹಾಗೆ ಎಂದಿಗೂ ಆಗಬಾರದು!” ಎಂದರು.


“ಹಾಗಾದರೆ ದ್ರಾಕ್ಷಿತೋಟದ ಯಜಮಾನನು ಅವರಿಗೆ ಏನು ಮಾಡುವನು? ಅವನು ಬಂದು ಆ ರೈತರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಕೊಡುವನು.


ಆಮೇಲೆ ನೀವು ನಿಮ್ಮ ನಿಮ್ಮ ದುರ್ಮಾರ್ಗಗಳನ್ನೂ ದುರಾಚಾರಗಳನ್ನೂ ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.


ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ಪ್ರಯಾಸ, ಸಹನೆಯನ್ನು ಬಲ್ಲೆನು. ನೀನು ದುಷ್ಟರನ್ನು ಸಹಿಸಲಾರೆ. ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.


ನೀವು ನಿಯಮದ ಮೂಲಕ ನೀತಿವಂತರಾಗಬೇಕೆಂದು ಪ್ರಯತ್ನಿಸುವವರು, ಕ್ರಿಸ್ತ ಯೇಸುವಿನಿಂದ ಬೇರ್ಪಟ್ಟಿದ್ದೀರಿ. ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.


ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಪೂರ್ವದಿನಗಳಲ್ಲಿ ಪುರಾತನ ಕಾಲದಲ್ಲಿ ಇದ್ದಂತೆ ಯೆಹೋವ ದೇವರಿಗೆ ಮೆಚ್ಚಿಕೆಯಾಗಿರುವುದು.


ಮುಂಜಾನೆಯ ನಕ್ಷತ್ರವೇ, ಉದಯ ಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಬಿದ್ದೆ?


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವುದಕ್ಕೂ ತಮ್ಮ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ಅತ್ಯಂತ ಹರ್ಷದೊಡನೆ ನಿರ್ದೋಷಿಗಳನ್ನಾಗಿ ನಿಲ್ಲಿಸುವುದಕ್ಕೂ ಶಕ್ತರಾಗಿರುವ


ಆದರೆ ನೀವು ಬೆಳಕನ್ನು ಹೊಂದಿದ ಮೇಲೆ ಬಾಧೆಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪುಮಾಡಿಕೊಳ್ಳಿರಿ.


“ನಾನು ಮರುಭೂಮಿಯಲ್ಲಿ ದ್ರಾಕ್ಷಾಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು. ಆದರೆ ಅವರು ಬಾಳ್ ಪೆಯೋರನ ಹತ್ತಿರ ಬಂದು ನಾಚಿಕೆಯ ವಿಗ್ರಹಕ್ಕೆ ತಮ್ಮನ್ನು ಪ್ರತ್ಯೇಕಿಸಿಕೊಂಡರು. ಅವರು ಪ್ರೀತಿಸಿದ ವಿಗ್ರಹಗಳ ಹಾಗೆ ಅಸಹ್ಯರಾದರು.


ಮನುಷ್ಯರು ಬಲವಾದ ಕಾವಿನಿಂದ ಕಂದಿ ಹೋದಾಗ್ಯೂ, ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದರು. ಆದರೆ ಅವರು ದೇವರಿಗೆ ಮಹಿಮೆಯನ್ನು ಸಲ್ಲಿಸುವ ಹಾಗೆ ಪಶ್ಚಾತ್ತಾಪ ಪಡಲಿಲ್ಲ.


“ನೀವು ಲೋಕಕ್ಕೆ ಬೆಳಕಾಗಿದ್ದೀರಿ; ಬೆಟ್ಟದ ಮೇಲಿರುವ ಊರು ಮರೆಯಾಗಿರಲಾರದು.


ದೀಪವನ್ನು ಹಚ್ಚಿ ಯಾರೂ ಅಳೆಯುವ ಪಾತ್ರೆಯೊಳಗೆ ಇಡುವುದಿಲ್ಲ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುತ್ತದೆ.


ಹೀಗೆ ನೀವು ನಿಂದಾರಹಿತರೂ ದೋಷವಿಲ್ಲದವರೂ, “ನಿಷ್ಕಳಂಕರಾದ ದೇವರ ಮಕ್ಕಳಾಗಿ, ವಕ್ರವಾದ ದುಷ್ಟ ಜನಾಂಗದ ಮಧ್ಯದಲ್ಲಿ,” ಜೀವವಾಕ್ಯವನ್ನು ಹಿಡಿದುಕೊಂಡು, ಲೋಕದಲ್ಲಿ ನಕ್ಷತ್ರಗಳಂತೆ ಹೊಳೆಯುವವರಾಗಿರುವಿರಿ.


ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವುದರಿಂದ ನಿಯಮರಹಿತರ ಸೆಳೆಯುವಿಕೆಗೆ ಮರುಳಾಗಿ ನಿಮ್ಮ ಸ್ಥಿರತೆಯಿಂದ ಬಿದ್ದುಹೋಗದಂತೆ ಎಚ್ಚರಿಕೆಯಿಂದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು