Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 20:15 - ಕನ್ನಡ ಸಮಕಾಲಿಕ ಅನುವಾದ

15 ಯಾರ ಹೆಸರು ಜೀವ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವರನ್ನು ಬೆಂಕಿಯ ಕೆರೆಗೆ ದೊಬ್ಬಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯಾವನ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರು ಬರೆಯಲ್ಪಟ್ಟಿಲ್ಲವೋ ಆ ವ್ಯಕ್ತಿಯನ್ನು ಬೆಂಕಿಯ ಕೆರೆಗೆ ಎಸೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜೆ ಕೊನಾಚಿ ನಾವಾ ಝಿತ್ತ್ಯಾಂಚ್ಯಾ ಪುಸ್ತಕಾತ್ ಲಿವಲ್ಲಿನಾತ್ ತೆಂಕಾ ಆಗಿಚ್ಯಾ ನರ್ಕಾತ್ ಟಾಕುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 20:15
19 ತಿಳಿವುಗಳ ಹೋಲಿಕೆ  

ಯಾರು ದೇವಪುತ್ರ ಆಗಿರುವವರನ್ನು ನಂಬುವರೋ ಅವರು ನಿತ್ಯಜೀವ ಪಡೆದಿರುತ್ತಾರೆ. ದೇವಪುತ್ರ ಆಗಿರುವವರನ್ನು ನಂಬದವರು ನಿತ್ಯಜೀವವನ್ನು ಕಾಣುವುದಿಲ್ಲ. ಆದರೆ ದೇವರ ಕೋಪಾಗ್ನಿಯು ಅವರ ಮೇಲೆ ನೆಲೆಗೊಂಡಿರುವುದು,” ಎಂದು ಹೇಳಿದನು.


ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ,” ಎಂದನು.


ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ಅವರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು,” ಎಂದು ಹೇಳಿದರು.


“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ದೂತರು ಅವರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು.


ಜೀವಪುಸ್ತಕದೊಳಗಿಂದ ಅವರ ಹೆಸರು ಅಳಿದು ಹೋಗಲಿ. ನೀತಿವಂತರ ಸಂಗಡ ಅವರ ಹೆಸರು ಬರೆಯದೆ ಇರಲಿ.


ಹೀಗಿದ್ದರೂ, ದೆವ್ವಗಳು ನಿಮಗೆ ಅಧೀನವಾಗಿವೆ ಎಂದು ಸಂತೋಷ ಪಡಬೇಡಿರಿ, ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಲಿಖಿತವಾಗಿವೆ ಎಂದು ಸಂತೋಷಿಸಿರಿ,” ಎಂದರು.


ಜಯಹೊಂದುವವರಿಗೆ ಹೀಗೆ ಬಿಳಿಯ ವಸ್ತ್ರಗಳನ್ನು ಹೊದಿಸಲಾಗುವುದು. ಅವರ ಹೆಸರನ್ನು ಜೀವಬಾಧ್ಯರ ಪಟ್ಟಿಯಿಂದ ನಾನು ಅಳಿಸಿಬಿಡದೆ, ಅವರ ಹೆಸರನ್ನು ನನ್ನ ತಂದೆಯ ಮುಂದೆಯೂ ಅವರ ದೂತರ ಮುಂದೆಯೂ ಅರಿಕೆ ಮಾಡುವೆನು.


ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲಾದವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು