Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 20:2 - ಕನ್ನಡ ಸಮಕಾಲಿಕ ಅನುವಾದ

2 ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪಿಶಾಚಿಯೂ ಸೈತಾನನೂ ಆಗಿರುವ ಘಟಸರ್ಪವನ್ನು, ಅಂದರೆ ಪುರಾತನ ಸರ್ಪವನ್ನು, ಆತನು ಹಿಡಿದು ಒಂದು ಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನಸರ್ಪನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧನದಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ದೇವದೂತನು ಪುರಾತನ ಘಟಸರ್ಪವನ್ನು ಹಿಡಿದನು. ಆ ಘಟಸರ್ಪವೇ ಸೈತಾನ. ದೇವದೂತನು ಅವನನ್ನು ಸರಪಣಿಗಳಿಂದ ಕಟ್ಟಿ ಒಂದುಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೆನಿ ತ್ಯಾ ಭಯಾನಕ್ ಸಾಪಾಕ್, ತ್ಯಾ ಅದ್ಲ್ಯಾ ಕಾಲಾತ್ಲ್ಯಾ ಸಾಪಾಕ್, ತೊಚ್ ತೊ ಗಿರೊ ನಾಹೊಲ್ಯಾರ್ ಸೈತಾನ್. ತೆಕಾ ಧರ್‍ಲ್ಯಾನ್ ಅನಿ ಎಕ್ ಹಜಾರ್ ವರ್ಸಾಂಚ್ಯಾಸಾಟ್ನಿ ತೆಕಾ ಸರ್‍ಪೊಳ್ಯಾನಿ ಘಟ್ ಭಾಂದ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 20:2
31 ತಿಳಿವುಗಳ ಹೋಲಿಕೆ  

ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕೆ ಬಂಧಿಸಿ, ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದರು.


ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ಅವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿಟ್ಟಿದ್ದಾರೆ.


ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಇಹಲೋಕದ ಅಧಿಪತಿಯನ್ನು ಈಗ ಹೊರಗೆ ಹಾಕಲಾಗುವುದು.


ಆ ದಿನದಲ್ಲಿ ಯೆಹೋವ ದೇವರು, ತಮ್ಮ ಬಲವಾದ ಭೀಕರ ಖಡ್ಗದಿಂದ ವೇಗವಾಗಿ ಓಡುವ ಲೆವಿಯಾತಾನ ಸರ್ಪವನ್ನೂ, ಡೊಂಕಾಗಿ ಹರಿಯುವ ಲೆವಿಯಾತಾನ ಸರ್ಪವನ್ನೂ ದಂಡಿಸಿ, ಸಮುದ್ರದಲ್ಲಿರುವ ಘಟಸರ್ಪವನ್ನೂ ಕೊಂದುಹಾಕುವರು.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ


ಆಗ ಸಮಾಧಾನದ ದೇವರು ಬೇಗನೆ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ಜಜ್ಜಿಬಿಡುವನು. ನಮ್ಮ ಕರ್ತ ಆಗಿರುವ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.


ಇಹಲೋಕಾಧಿಪತಿಗೆ ನ್ಯಾಯತೀರ್ಪಾದ ಕಾರಣದಿಂದ ನ್ಯಾಯತೀರ್ಪಿನ ವಿಷಯವಾಗಿಯೂ ಮನವರಿಕೆ ಮಾಡುವರು.


ನಾನು ಕಂಡ ಮೃಗವು ಚಿರತೆಯಂತಿತ್ತು. ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ತನ್ನ ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು.


ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹುಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಎಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು, ಯೇಸುವಿನ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟನು.


ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಬಿಟ್ಟನು.


ಘಟಸರ್ಪನು ತಾನು ಭೂಮಿಗೆ ತಳ್ಳಲಾಗಿರುವುದನ್ನು ಕಂಡಾಗ, ಅವನು ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಅಟ್ಟಿಸಿಕೊಂಡು ಹೋದನು.


ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು.


ಆಗ ಅವರು, “ದೇವಪುತ್ರನೇ, ನಮ್ಮ ಗೊಡವೆ ನಿಮಗೆ ಏಕೆ? ಸಮಯಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಇಲ್ಲಿಗೆ ಬಂದೆಯಾ?” ಎಂದು ಕೂಗಿ ಹೇಳಿದರು.


ಯೆಹೋವ ದೇವರು ಸೈತಾನನಿಗೆ, “ನೀನು ಎಲ್ಲಿಂದ ಬಂದೆ?” ಎಂದು ಕೇಳಿದರು. ಸೈತಾನನು ಯೆಹೋವ ದೇವರಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗಾಡುತ್ತಾ ಇದ್ದು ಬಂದೆನು,” ಎಂದನು.


ಜನರು ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟಿದ್ದರಿಂದ, ಆ ಘಟಸರ್ಪನನ್ನು ಆರಾಧಿಸಿದರು. ಇದಲ್ಲದೆ ಆ ಮೃಗವನ್ನೂ ಆರಾಧಿಸಿ, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದರು.


ಹೀಬ್ರೂ ಭಾಷೆಯಲ್ಲಿ, ಅಬದ್ದೋನ್ ಎಂದೂ ಗ್ರೀಕ್ ಭಾಷೆಯಲ್ಲಿ, ಅಪೊಲ್ಲುವೋನ್ ಎಂಬ ಹೆಸರಿನ ಪಾತಾಳ ಲೋಕದ ದೂತನು ಅವರ ಅರಸನು.


ತನ್ನ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ, ನನ್ನ ಹೆಸರಿನ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಪಡೆದುಕೊಳ್ಳುವನು ಮತ್ತು ನಿತ್ಯಜೀವಕ್ಕೆ ಬಾಧ್ಯನಾಗುವನು.


ಯೆಹೋವ ದೇವರು ಸೃಷ್ಟಿಸಿದ ಅಡವಿಯ ಎಲ್ಲಾ ಕಾಡುಮೃಗಗಳಿಗಿಂತ ಸರ್ಪವು ಬಹು ಯುಕ್ತಿಯುಳ್ಳದ್ದಾಗಿತ್ತು. ಅದು ಸ್ತ್ರೀಗೆ, “ನೀವು ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ?” ಎಂದು ಕೇಳಿತು.


ನೆಲಮಾಳಿಗೆಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಬಹಳ ದಿನಗಳಿದ್ದ ತರುವಾಯ ದಂಡನೆಗೆ ಗುರಿಯಾಗುವರು.


ಕೆಲವರು ದಾರಿಯ ಪಕ್ಕದಲ್ಲಿ ಬಿದ್ದ ಬೀಜದಂತಿದ್ದಾರೆ. ಅವರು ವಾಕ್ಯ ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ದೇವರ ವಾಕ್ಯವನ್ನು ತೆಗೆದುಬಿಡುತ್ತಾನೆ.


ಪರಲೋಕದಲ್ಲಿ ಮತ್ತೊಂದು ಸೂಚನೆಯು ಕಾಣಿಸಿತು. ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಅದರ ತಲೆಯ ಮೇಲೆ ಏಳು ಮುಕುಟಗಳಿದ್ದವು.


ಅದು ತನ್ನ ಬಾಲದಿಂದ ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಚೆಲ್ಲಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ, ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.


ಆ ಸಾವಿರ ವರ್ಷಗಳು ಗತಿಸಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವುದು.


ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂಥ ನದಿಯಾಗಿತ್ತು. ಏಕೆಂದರೆ ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು