ಪ್ರಕಟನೆ 20:4 - ಕನ್ನಡ ಸಮಕಾಲಿಕ ಅನುವಾದ4 ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತನ್ನಾ ಸಿವಾಸನಾಂಚ್ಯಾ ವರ್ತಿ ಬಸಲ್ಲ್ಯಾಕ್ನಿ ಝಡ್ತಿ ಕರ್ತಲೊ ಅಧಿಕಾರ್ ದಿವ್ನ್ ಹೊಲ್ಲೆ ಮಿಯಾ ಬಗಟ್ಲೊ, ಅನಿ ಜೆಜುನ್ ದಾಕ್ವುನ್ ದಿಲ್ಲೆ ಅನಿ ದೆವಾಚ್ಯಾ ಗೊಸ್ಟಿಯಾನಿ ದಾಕ್ವುನ್ ದಿಲ್ಲೆ ಖರೆ ಲೊಕಾಕ್ನಿ ಸಾಂಗಲ್ಲ್ಯಾಸಾಟ್ನಿ ಚೆಂಡಾ ತೊಡುನ್ ಹೊಲ್ಲ್ಯಾಂಚೆ ಆತ್ಮೆಬಿ ಮಿಯಾ ಬಗಟ್ಲೊ, ತೆನಿ ತ್ಯಾ ಭಯಾನಕ್ ಜನಾವಾರಾಚೆ ಹೊಂವ್ದಿತ್, ತ್ಯೆಚ್ಯಾ ಮುರ್ತಿಚೆ ಹೊಂವ್ದಿತ್ ಆರಾದನ್ ಕರುಕ್ನ್ಯಾತ್, ನಾಹೊಲ್ಯಾರ್ ತೆಂಚ್ಯಾ ಕಪಾಳಾ ವೈನಿ ಹೊಂವ್ದಿತ್, ಹಾತಾ ವೈನಿ ಹೊಂವ್ದಿತ್ ತ್ಯಾ ಭಯಾನಕ್ ಜನಾವಾರಾಚಿ ವಳಕ್ ಕರುನ್ ಘೆವನಸಲ್ಲ್ಯಾನಿ. ತೆನಿ ಝಿತ್ತೆ ಹೊವ್ನ್ ಉಟ್ಲೆ, ಅನಿ ಎಕ್ ಹಜಾರ್ ವರ್ಸಾ ಕ್ರಿಸ್ತಾಚ್ಯಾ ವಾಂಗ್ಡಾ ರಾಜಾಂಚ್ಯಾ ಸರ್ಕೆ ರಾಜ್ ಚಾಲ್ವುಲ್ಯಾನಿ. ಅಧ್ಯಾಯವನ್ನು ನೋಡಿ |