Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 20:8 - ಕನ್ನಡ ಸಮಕಾಲಿಕ ಅನುವಾದ

8 ಅವನು ಹೊರಗೆ ಬಂದು ಭೂಮಿಯ ನಾಲ್ಕುದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ರಾಷ್ಟ್ರಗಳನ್ನು ಮೋಸಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು. ಅವರ ಸಂಖ್ಯೆಯು ಸಮುದ್ರತೀರದ ಮರಳಿನಷ್ಟಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನು ಬಂದು ಭೂಮಿಯ ಅಷ್ಟದಿಕ್ಕುಗಳಲ್ಲಿರುವ ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸುವನು. ಯುದ್ಧಮಾಡುವುದಕ್ಕಾಗಿ ಅವರನ್ನು ಒಟ್ಟುಗೂಡಿಸುವನು. ಅವರ ಸಂಖ್ಯೆ ಸಮುದ್ರತೀರದ ಮರಳಿನಷ್ಟಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಹೊರಗೆ ಬಂದು ಭೂವಿುಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸೈತಾನನು ಗೋಗ್ ಮತ್ತು ಮಾಗೋಗ್ ಜನಾಂಗಗಳನ್ನು ಮರುಳುಗೊಳಿಸಲು ಭೂಲೋಕದಲ್ಲೆಲ್ಲಾ ಹೋಗಿ ಆ ಜನರನ್ನು ಯುದ್ಧಕ್ಕೆ ಒಟ್ಟುಗೂಡಿಸುತ್ತಾನೆ. ಅವರು ಸಮುದ್ರ ತೀರದ ಮರಳಿನ ಕಣಗಳಂತೆ ಅಸಂಖ್ಯಾತವಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅನಿ ತೊ ಭಾಯ್ರ್ ಪಡುನ್ ಸಗ್ಳ್ಯಾ ಜಗಾತ್ ಫಿರ್ತಾ, ಅನಿ ಗೊಗ್ ಅನಿ ಮಾಗೊಗ್ ಮನ್ತಲ್ಯಾ ಲೊಕಾಕ್ನಿ ಪಸ್ವುನ್ ಅಪ್ನಾಕ್ಡೆ ಕರುನ್ ಘೆತಾ. ಮಾನಾ ಸೈತಾನ್ ತೆಂಕಾ ಮಾರಾಮಾರಿಕ್ ಮನುನ್ ಘೆವ್ನ್ ಯೆತಾ. ತ್ಯಾ ಲೊಕಾಂಚಿ ಜನ್‍ಸಂಖಿ ಸಮುಂದರಾಚ್ಯಾ ದಂಡೆಕ್ ಅಸಲ್ಲ್ಯಾ ರಿತಿಚ್ಯಾ ದಾನ್ಯಾಂಚ್ಯಾ ತವ್ಡಿ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 20:8
17 ತಿಳಿವುಗಳ ಹೋಲಿಕೆ  

ಅವು ಸೂಚಕಕಾರ್ಯಗಳನ್ನು ನಡೆಸುವ ದೆವ್ವಗಳ ಆತ್ಮಗಳಾಗಿದ್ದು, ಭೂಲೋಕದ ರಾಜರುಗಳನ್ನು ಸರ್ವಶಕ್ತರಾದ ದೇವರ ಮಹಾದಿನದ ಯುದ್ಧಕ್ಕಾಗಿ ಕೂಡಿಸುವುದಕ್ಕಾಗಿ ಹೊರಟವು.


ಯೆಹೋವ ದೇವರ ವಾಕ್ಯವು ನನಗೆ ಬಂದಿತು,


ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


ಆ ಸಾವಿರ ವರ್ಷ ತೀರುವ ತನಕ ಅವನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೂತನು ಅವನನ್ನು ಅಧೋಲೋಕದಲ್ಲಿ ತಳ್ಳಿ, ಬಾಗಿಲು ಮುಚ್ಚಿ ಅದಕ್ಕೆ ಮುದ್ರೆ ಹಾಕಿದನು. ಇವುಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆಯಾಗತಕ್ಕದ್ದು.


ಆದ್ದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಮರಳಿನಂತೆ ಅಸಂಖ್ಯವಾಗಿಯೂ ಸಂತತಿಯವರು ಹುಟ್ಟಿದರು.


ಆದರೆ ನನ್ನ ದಾಸ ದಾವೀದನ ಸಂತಾನವನ್ನೂ ನನ್ನ ಪರಿಚಾರಕರಾದ ಲೇವಿಯರನ್ನೂ ಅಸಂಖ್ಯಾತ ನಕ್ಷತ್ರಗಣದಷ್ಟು ಮತ್ತು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕಗೊಳಿಸುವೆನು.’ ”


ತಮ್ಮ ಜನರಾದ ಇಸ್ರಾಯೇಲರು ಸಮುದ್ರದ ಉಸುಬಿನಂತಿದ್ದರೂ, ಅವರಲ್ಲಿ ಉಳಿದವರು ಮಾತ್ರ ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು; ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.


ಆಗ ಇಸ್ರಾಯೇಲರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ, ಆರು ಸಾವಿರ ಕುದುರೆ ಸವಾರರೂ, ಸಮುದ್ರತೀರದ ಮರಳಷ್ಟು ಜನರೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳಿದುಕೊಂಡರು.


ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಮಲಗಿದ್ದರು. ಅವರ ಒಂಟೆಗಳು ಸಮುದ್ರದ ಮರಳಿನ ಹಾಗೆ ಅಸಂಖ್ಯವಾಗಿದ್ದವು.


ಯೆಹೂದ ಮತ್ತು ಇಸ್ರಾಯೇಲಿನ ಜನರು ಸಮುದ್ರದ ಮರಳಿನ ಹಾಗೆ ಅಸಂಖ್ಯಾತರಾದರು. ಅವರು ಉಂಡು ಕುಡಿದು ಸುಖದಿಂದ ಇದ್ದರು.


“ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಇಸ್ರಾಯೇಲ್ ದೇಶಕ್ಕೆ ಹೀಗೆ ಹೇಳುತ್ತಾರೆ: “ ‘ಅಂತ್ಯವು ಬಂದಿದೆ! ಈ ದೇಶದ ನಾಲ್ಕು ಮೂಲೆಗಳಲ್ಲಿಯೂ ಅಂತ್ಯವು ಬಂದಿದೆ!


“ಓ ಮನುಷ್ಯಪುತ್ರನೇ, ರೋಷ್, ಮೆಷೆಕ್ ಮತ್ತು ತೂಬಲ್‌ನ ಮುಖ್ಯ ರಾಜಕುಮಾರನಾದ ಮಾಗೋಗ್ ದೇಶದ ಗೋಗನ ಕಡೆಗೆ ನಿನ್ನ ಮುಖವನ್ನು ತಿರುಗಿಸು; ಮತ್ತು ಅವನ ವಿರುದ್ಧವಾಗಿ ಪ್ರವಾದಿಸು.


“ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆಂದು ಹೇಳು, ರೋಷ್, ಮೆಷೆಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಿನಗೆ ನಾನು ವಿರೋಧವಾಗಿದ್ದೇನೆ.


ನಾನು ಮಾಗೋಗ್ ಮತ್ತು ಅವರೊಂದಿಗೆ ದ್ವೀಪಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ, ಅವರು ನಾನೇ ಯೆಹೋವ ದೇವರೆಂದು ತಿಳಿಯುವರು.


ಇದಾದನಂತರ ನಾಲ್ಕು ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತಿರುವುದನ್ನು ಕಂಡೆನು. ಅವರು ಭೂಮಿಯ ಮೇಲಾಗಲಿ, ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿಯನ್ನು ತಡೆಹಿಡಿದಿದ್ದರು.


ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


“ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಯೆಹೋವ ದೇವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ, ಹೊರಟುಹೋಗಿ ಹಾಗೆ ಮಾಡು,’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು