Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:10 - ಕನ್ನಡ ಸಮಕಾಲಿಕ ಅನುವಾದ

10 ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಪರಿಶುದ್ಧ ಪಟ್ಟಣವಾದ ಯೆರೂಸಲೇಮು ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದು ಬರುವುದನ್ನು ನನಗೆ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇವರಾತ್ಮನಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ನಾನು ಪವಿತ್ರಾತ್ಮವಶನಾದೆ. ಆ ದೇವದೂತನು ನನ್ನನ್ನು ಎತ್ತರವಾದ ಬೆಟ್ಟದ ಮೇಲೆ ಕೊಂಡೊಯ್ದನು. ಅಲ್ಲಿ ನನಗೆ ಪವಿತ್ರನಗರವಾದ ಜೆರುಸಲೇಮನ್ನು ತೋರಿಸಿದನು. ಅದು ಸ್ವರ್ಗದಲ್ಲಿರುವ ದೇವರ ಬಳಿಯಿಂದ ಕೆಳಗಿಳಿದು ಬರುತ್ತಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10-11 ದೇವರಾತ್ಮವಶನಾದ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ದೇವರ ತೇಜಸ್ಸುಳ್ಳದ್ದಾಗಿ ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದುಬರುವದನ್ನು ನನಗೆ ತೋರಿಸಿದನು. ಪಟ್ಟಣದ ಪ್ರಕಾಶವು ಅಮೂಲ್ಯರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಥಳಥಳಿಸುವ ವಜ್ರವೋ ಎಂಬಂತೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ದೇವದೂತನು ಪವಿತ್ರಾತ್ಮವಶನಾದ ನನ್ನನ್ನು ಬಹಳ ದೊಡ್ಡದಾದ ಮತ್ತು ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದನು. ದೇವದೂತನು ನನಗೆ ಪವಿತ್ರ ನಗರವಾದ ಜೆರುಸಲೇಮನ್ನು ತೋರಿಸಿದನು. ಆ ನಗರವು ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದುಬರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಪವಿತ್ರ್ ಆತ್ಮ್ಯಾನ್ ಮಾಕಾ ಅಪ್ನಾಚ್ಯಾ ತಾಬೆತ್ ಕರುನ್ ಘೆಟ್ಲ್ಯಾನ್, ಅನಿ ದೆವಾಚ್ಯಾ ದುತಾನ್ ಮಾಕಾ ಎಕ್ ಲೈ ಉಪ್ಪರ್ಲ್ಯಾ ಮಡ್ಡಿ ವರ್ತಿ ಘೆವ್ನ್ ಗೆಲ್ಯಾನ್ ತೆನಿ ಮಾಕಾ ಪವಿತ್ರ್ ಶಾರ್ ಜೆರುಜಲೆಮ್ ದೆವಾಕ್ನಾ ಸರ್‍ಗಾ ವೈನಾ ಉತ್ರುನ್ ಯೆತಲೆ ದಾಕ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:10
17 ತಿಳಿವುಗಳ ಹೋಲಿಕೆ  

ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು.


ಅನಂತರ ದೇವರಾತ್ಮರು, ದೇವರ ಆತ್ಮರಿಂದಾದ ದರ್ಶನದಲ್ಲಿ ನನ್ನನ್ನು ಬಾಬಿಲೋನಿಯರ ದೇಶಕ್ಕೆ ಸೆರೆಯವರ ಬಳಿಗೆ ಎತ್ತಿಕೊಂಡು ಹೋದರು. ಆಗ ನಾನು ನೋಡಿದ ದರ್ಶನವು ನನ್ನಿಂದ ಮೇಲೆ ಹೋಯಿತು.


ಅನಂತರ ಅವನು ನನ್ನನ್ನು ಆತ್ಮನಲ್ಲಿ ಅರಣ್ಯಕ್ಕೆ ಒಯ್ದನು. ಅಲ್ಲಿ ಒಬ್ಬ ಸ್ತ್ರೀಯು, ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದು, ದೇವದೂಷಣೆಯ ಹೆಸರುಗಳಿಂದ ತುಂಬಿರುವ ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿರುವುದನ್ನು ಕಂಡೆನು.


ನಾನು ಕರ್ತ ಯೇಸುವಿನ ದಿನದಲ್ಲಿ ಆತ್ಮಭರಿತನಾಗಿರಲು ನನ್ನ ಹಿಂದೆ ತುತೂರಿಯ ಶಬ್ದದಂತಿರುವ ಮಹಾಧ್ವನಿಯನ್ನು ಕೇಳಿದೆನು.


ಅವರು ನೀರಿನಿಂದ ಹೊರಗೆ ಬಂದಾಗ, ತಕ್ಷಣವೇ ಕರ್ತದೇವರ ಆತ್ಮರು ಫಿಲಿಪ್ಪನನ್ನು ತೆಗೆದುಕೊಂಡು ಹೋದರು. ಆಮೇಲೆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಕಂಚುಕಿಯು ಸಂತೋಷಪಡುತ್ತಾ ತನ್ನ ಮಾರ್ಗದಲ್ಲಿ ಹೊರಟುಹೋದನು.


ಆಮೇಲೆ ದೇವರಾತ್ಮರು ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವ ದೇವರ ಆಲಯದ ಪೂರ್ವದಿಕ್ಕಿನ ಬಾಗಿಲಿಗೆ, ನನ್ನನ್ನು ಎತ್ತಿಕೊಂಡು ಹೋದರು. ಪ್ರವೇಶದ್ವಾರದಲ್ಲಿ ಇಪ್ಪತ್ತೈದು ಮಂದಿ ಮನುಷ್ಯರು ಇದ್ದರು. ಅವರೊಳಗೆ ನಾನು ಜನರ ಪ್ರಧಾನರಾದ ಅಜ್ಜೂರನ ಮಗ ಯಾಜನ್ಯನನ್ನೂ, ಬೆನಾಯನ ಮಗ ಪೆಲಟೀಯನನ್ನೂ ನೋಡಿದೆನು.


ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿದನು. ಆಗ ದೇವರಾತ್ಮರು ದೇವದರ್ಶನದಲ್ಲಿ ಯೆರೂಸಲೇಮಿನ ಉತ್ತರದ ಕಡೆಗೆ ಎದುರಾಗಿರುವ ಒಳ ಅಂಗಳದ ಕಡೆಗೆ, ರೋಷಗೊಳಿಸುವ ವಿಗ್ರಹವು ಇದ್ದಲ್ಲಿಗೆ ನನ್ನನ್ನು ಎತ್ತಿಕೊಂಡು ಹೋದರು.


ಕೂಡಲೇ ನಾನು ಆತ್ಮವಶನಾದೆನು. ಆಗ ನನ್ನೆದುರಿನಲ್ಲಿ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬರು ಕುಳಿತಿದ್ದರು.


ಹೀಗೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ನಾನು ಕಹಿತನ ಮತ್ತು ಕೋಪದ ಆತ್ಮದಿಂದ ಮುನ್ನಡೆದೆನು. ಆದರೆ ಯೆಹೋವ ದೇವರ ಕೈ ನನ್ನ ಮೇಲೆ ಬಲವಾಗಿತ್ತು.


ನಾನು ನಿನ್ನನ್ನು ಬಿಟ್ಟು ಹೋಗುವಾಗ, ಯೆಹೋವ ದೇವರ ಆತ್ಮರು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯುವರು. ನಾನು ಬಂದು ಅಹಾಬನಿಗೆ ತಿಳಿಸಿದಾಗ, ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕುವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕಂದಿನಿಂದ ಯೆಹೋವ ದೇವರನ್ನು ಆರಾಧಿಸುತ್ತೇನೆ.


ಇದಲ್ಲದೆ ಅವರು ಅವನಿಗೆ, “ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ. ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಆಗಲಿ. ಒಂದು ವೇಳೆ ಯೆಹೋವ ದೇವರ ಆತ್ಮರು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ, ತಗ್ಗಿನಲ್ಲಾದರೂ ಇಟ್ಟಿರಬಹುದು,” ಎಂದರು. ಅದಕ್ಕೆ ಅವನು, “ಕಳುಹಿಸಬೇಡಿರಿ,” ಎಂದನು.


ಆದರೆ ಸ್ವರ್ಗೀಯ ಯೆರೂಸಲೇಮ್ ಸ್ವತಂತ್ರಳು. ಈಕೆಯೇ ನಮ್ಮ ತಾಯಿ.


ಯಾರು ಜಯ ಹೊಂದುತ್ತಾರೋ, ಅವರನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಸ್ಥಾಪಿಸುವೆನು. ಅವರು ಎಂದಿಗೂ ಅದರೊಳಗಿಂದ ಹೊರಗೆ ಹೋಗುವುದಿಲ್ಲ. ನಾನು ನನ್ನ ದೇವರ ಹೆಸರನ್ನು ಪರಲೋಕದಲ್ಲಿರುವ ನನ್ನ ದೇವರಿಂದ ಇಳಿದು ಬರುವ ಹೊಸ ಯೆರೂಸಲೇಮಿನ ಹೆಸರನ್ನೂ ಹಾಗೂ ನನ್ನ ಹೊಸ ಹೆಸರನ್ನೂ ಅವರ ಮೇಲೆ ಬರೆಯುವೆನು.


ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು. ಏಕೆಂದರೆ ಅದು ಯೆಹೂದ್ಯರಲ್ಲದವರಿಗಾಗಿ ಬಿಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು