Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:11 - ಕನ್ನಡ ಸಮಕಾಲಿಕ ಅನುವಾದ

11 ಅದು ದೇವರ ಮಹಿಮೆಯಿಂದ ಕೂಡಿತ್ತು. ಪಟ್ಟಣದ ಪ್ರಕಾಶವು ಸೂರ್ಯಕಾಂತದಂತೆ ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು. ಅದು ಸ್ವಚ್ಛವಾದ ಸ್ಪಟಿಕದಂತೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದು ದೇವರ ತೇಜಸ್ಸಿನಿಂದ ಕೂಡಿತ್ತು. ಪಟ್ಟಣವು ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದೇವರ ತೇಜಸ್ಸಿನಿಂದ ಕೂಡಿತ್ತು; ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು; ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ನಗರವು ದೇವರ ಪ್ರಭಾವದಿಂದ ಪ್ರಕಾಶಿಸುತ್ತಿತ್ತು. ಅದು ಬಹು ಬೆಲೆಬಾಳುವ ವಜ್ರದಂತೆ ಪ್ರಕಾಶಿಸುತ್ತಿತ್ತು. ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆ ದೆವಾಚ್ಯಾ ವೈಭವಾನ್ ಹೊಳ್ವಳುಲಾಗಲ್ಲೆ, ತೆ ಶಾರ್ ಲೈ ಕಿಮ್ತಿಚ್ಯಾ ಪೊಡ್ಯಾಂಚೆ ಸರ್ಕೆ ಝಳ್-ಝಳ್ತಲ್ಯಾ ವಜ್ರಾಚ್ಯಾ ಸರ್ಕೆ ಹೊಳ್ವಳುಲಾಗಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:11
17 ತಿಳಿವುಗಳ ಹೋಲಿಕೆ  

ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ಇದಲ್ಲದೆ ಸಿಂಹಾಸನದ ಮುಂದೆ ಸ್ಪಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ, ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.


ಆಮೇಲೆ ದೂತನು ಸ್ಪಟಿಕದಂತೆ ಹೊಳೆಯುವ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಕುರಿಮರಿಯಾದವರ ಸಿಂಹಾಸನದಿಂದ ಹೊರಟು,


ಜೀವಿಯ ತಲೆಗಳ ಮೇಲೆ ಗಗನ ಮಂಡಲ ವಿಶಾಲ ರೂಪವು ವಜ್ರದಂತಿತ್ತು. ಮತ್ತು ಅದು ಅದ್ಭುತವಾಗಿತ್ತು.


ಆಸೀನರಾದವರು ಸೂರ್ಯಕಾಂತ, ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದರು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆಬಿಲ್ಲು ಹೊಳೆಯುತ್ತಿತ್ತು.


“ಸುತ್ತಲೂ ಹದಿನೆಂಟು ಸಾವಿರ ಅಳತೆಗಳು. “ಆ ದಿನದಿಂದ ಆ ಪಟ್ಟಣದ ಹೆಸರು, ‘ಯೆಹೋವ ದೇವರ ನೆಲೆ’ ” ಎಂಬುದೇ ಆಗಿರುವುದು.


ಅವುಗಳ ತಲೆಗಳ ಮೇಲಿರುವ ಗಗನ ಮಂಡಲದ ಮೇಲ್ಭಾಗದಲ್ಲಿ ನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.


ಆಗ ಯೆಹೋವ ದೇವರು ಚೀಯೋನ್ ಪರ್ವತದ ಪ್ರತಿಯೊಂದು ನಿವಾಸದ ಮೇಲೂ, ಅದರ ಸಭೆಗಳ ಮೇಲೂ, ಹಗಲಿನಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಿನಲ್ಲಿ ಪ್ರಜ್ವಲಿಸುವ ಅಗ್ನಿಪ್ರಕಾಶವನ್ನು ಉಂಟುಮಾಡುವರು. ಏಕೆಂದರೆ ದೇವರ ಮಹಿಮೆ ಎಲ್ಲದರ ಮೇಲೆ ಚಪ್ಪರದಂತೆಯೂ ಆವರಿಸುವುದು.


ಬಂಗಾರವೂ, ಸ್ಪಟಿಕವೂ ಜ್ಞಾನಕ್ಕೆ ಸಮವಾಗಿರುವುದಿಲ್ಲ; ಬಂಗಾರದ ಆಭರಣಗಳು ಸಹ ಜ್ಞಾನಕ್ಕೆ ಸಮವಲ್ಲ.


ದೇವರ ಮಹಿಮೆಯಿಂದಲೂ ಅವರ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ದೇವಾಲಯವು ಆವರಿಸಿದ ಕಾರಣ, ಆ ಏಳುಮಂದಿ ದೇವದೂತರ ಏಳು ಉಪದ್ರವಗಳು ತೀರುವ ತನಕ, ಆ ದೇವಾಲಯದೊಳಗೆ ಪ್ರವೇಶಿಸುವುದಕ್ಕೆ ಯಾರಿಗೂ ಆಗಲಿಲ್ಲ.


ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವಮಾರ್ಗವಾಗಿ ಬಂದಿತು ಮತ್ತು ಅವರ ಧ್ವನಿಯು ಹರಿಯುವ ನೀರಿನ ಘರ್ಜನೆಯಂತಿತ್ತು; ಭೂಮಿಯು ಅವರ ಮಹಿಮೆಯಿಂದ ಪ್ರಕಾಶಿಸುತ್ತಿತ್ತು.


ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಹಿಂಸಾಚಾರವು ತುಂಬಿ ನೀನು ಪಾಪಿಯಾದೆ; ಆದ್ದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ತಳ್ಳಿಬಿಟ್ಟೆನು. ಓ ರಕ್ಷಕ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು