Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:22 - ಕನ್ನಡ ಸಮಕಾಲಿಕ ಅನುವಾದ

22 ಪಟ್ಟಣದಲ್ಲಿ ನಾನು ಆಲಯವನ್ನೇ ಕಾಣಲಿಲ್ಲ. ಏಕೆಂದರೆ ಕರ್ತ ಆಗಿರುವ ಸರ್ವಶಕ್ತ ದೇವರೂ, ಕುರಿಮರಿಯಾಗಿರುವವರೂ ಆಲಯವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ. ಏಕೆಂದರೆ ಸರ್ವಶಕ್ತನಾಗಿರುವ ದೇವರಾದ ಕರ್ತನೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆ ನಗರದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ; ಏಕೆಂದರೆ, ಸರ್ವಶಕ್ತ ದೇವರಾದ ಪ್ರಭುವೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿರುವ ಕರ್ತನೂ ಯಜ್ಞದ ಕುರಿಯಾದಾತನೂ ಅದರ ದೇವಾಲಯವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ನಗರದಲ್ಲಿ ಒಂದು ಆಲಯವನ್ನೂ ನೋಡಲಿಲ್ಲ. ಸರ್ವಶಕ್ತನಾದ ದೇವರಾದ ಪ್ರಭು ಮತ್ತು ಕುರಿಮರಿಯಾದಾತನು (ಯೇಸು) ನಗರದ ಆಲಯವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಶಾರಾತ್ ಮಾಕಾ ಎಕ್‍ಬಿ ದೆವಾಚಿ ಗುಡಿ ದಿಸುಕ್ ನಾ, ಕಶ್ಯಾಕ್ ಮಟ್ಲ್ಯಾರ್ ಸರ್ವೆಸ್ವರ್ ಸಗ್ಳ್ಯಾನ್ ಮೊಟೊ ದೆವ್ ಅನಿ ಬೊಕ್ಡುಚ್ ತ್ಯಾ ಶಾರಾಚಿ ದೆವಾಚಿ ಗುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:22
25 ತಿಳಿವುಗಳ ಹೋಲಿಕೆ  

ಆದರೆ ನಿಜವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ. ಏಕೆಂದರೆ ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾರೆ.


ಆದರೆ ಅವರಿಗೋಸ್ಕರ ಆಲಯವನ್ನು ಕಟ್ಟಿಸಲು ಸಮರ್ಥನಾದವನು ಯಾರು? ಆಕಾಶವೂ ಉನ್ನತೋನ್ನತ ಆಕಾಶವೂ ಅವರಿಗೆ ಸಾಲದು. ಅವರ ಸನ್ನಿಧಿಯಲ್ಲಿ ಯಜ್ಞವನ್ನು ಅರ್ಪಿಸುವುದಕ್ಕೆ ಒಂದು ಆಲಯವನ್ನು ಕಟ್ಟಬಹುದೇ ಹೊರತು ಅವರಿಗೆ ಆಲಯವನ್ನು ಕಟ್ಟಿಸಲು ನಾನು ಎಷ್ಟರವನು?


“ಆದರೆ ದೇವರು ನಿಜವಾಗಿ ಭೂಮಿಯ ಮೇಲೆ ವಾಸವಾಗಿರುವರೋ? ಇಗೋ, ಆಕಾಶವೂ ಉನ್ನತೋನ್ನತ ಆಕಾಶವೂ ನಿಮಗೆ ಸಾಲದು. ಹಾಗಾದರೆ, ನಾನು ಕಟ್ಟಿಸಿದ ಈ ಆಲಯವು ನಿಮಗೆ ಸಾಲುವುದು ಹೇಗೆ?


“ನಾನೇ ಆದಿಯೂ ಅಂತ್ಯವೂ ಗತಕಾಲ, ವರ್ತಮಾನ, ಭವಿಷ್ಯತ್ಕಾಲಗಳಲ್ಲಿರುವವನೂ ಮತ್ತು ಸರ್ವಶಕ್ತನೂ ಆಗಿದ್ದೇನೆ,” ಎಂದು ಕರ್ತದೇವರು ಹೇಳುತ್ತಾರೆ.


ಆಗ ಬಲಿಪೀಠವು ಹೀಗೆ ಮಾತನಾಡುವುದನ್ನು ಕೇಳಿದೆನು: “ಕರ್ತಾ, ಸರ್ವಶಕ್ತರಾದ ದೇವರೇ, ನಿಮ್ಮ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ.”


ಆಗ ನಾನು, ಸಿಂಹಾಸನದ ಮಧ್ಯದಲ್ಲಿಯೂ ನಾಲ್ಕು ಜೀವಿಗಳು ಮತ್ತು ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ಬಲಿಗೋಸ್ಕರ ವಧೆಯಾಗಿದ್ದಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಭೂಮಿಯ ಮೇಲೆಲ್ಲಾ ಕಳುಹಿಸಲಾದ ದೇವರ ಏಳು ಆತ್ಮಗಳು.


ಏಕೆಂದರೆ ದೇವರ ಸರ್ವಸಂಪೂರ್ಣತೆಯು ಮಾನವ ದೇಹವಾಗಿ ಕ್ರಿಸ್ತ ಯೇಸುವಿನಲ್ಲಿಯೇ ವಾಸಮಾಡಿದೆ.


ಯೇಸು ಆಕೆಗೆ, “ಅಮ್ಮಾ, ನನ್ನನ್ನು ನಂಬು, ಈ ಬೆಟ್ಟದಲ್ಲಿಯಾಗಲಿ ಯೆರೂಸಲೇಮಿನಲ್ಲಾಗಲಿ ನೀವು ತಂದೆಯನ್ನು ಆರಾಧಿಸದೆ ಇರುವ ಕಾಲ ಬರುತ್ತದೆ.


ಯೆಹೋವ ದೇವರು ಹೇಳುವುದೇನೆಂದರೆ: “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ, ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?


ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.


ಹೀಗೆ ಹೇಳಿದರು: “ಕರ್ತ ಆಗಿರುವ, ಸರ್ವಶಕ್ತರಾದ ದೇವರೇ, ಮೊದಲು ಇದ್ದು ಈಗಲೂ ಇರುವವರೂ, ನೀವು ನಿಮ್ಮ ಮಹಾ ಅಧಿಕಾರವನ್ನು ಪಡೆದು ಆಳಿದ್ದರಿಂದ ನಿಮಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇವೆ.


ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಆ ಜೀವಿಗಳ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ ಹೀಗೆ ಹೇಳುತ್ತಿದ್ದವು: “ ‘ದೇವರು ಆಗಿರುವ ಕರ್ತ ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು, ಅವರು ಸರ್ವಶಕ್ತರು,’ ಗತಕಾಲ, ವರ್ತಮಾನ ಭವಿಷ್ಯತ್ಕಾಲಗಳಲ್ಲಿ ಇರುವವರು.”


ಏಕೆಂದರೆ ದೇವರು ಕ್ರಿಸ್ತ ಯೇಸುವಿನಲ್ಲಿ ಸರ್ವಸಂಪೂರ್ಣತೆಯು ವಾಸವಾಗಿರಲು ಬಯಸಿದರು.


ನಾನು ಮತ್ತು ನನ್ನ ತಂದೆ ಒಂದೇ ಆಗಿದ್ದೇವೆ,” ಎಂದು ಉತ್ತರಕೊಟ್ಟರು.


“ಆದರೆ ದೇವರು ನಿಜವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವರೋ? ಇಗೋ, ಆಕಾಶವೂ, ಉನ್ನತೋನ್ನತ ಆಕಾಶವೂ ನಿಮಗೆ ಸಾಲದು. ಹಾಗಾದರೆ, ನಾನು ಕಟ್ಟಿಸಿದ ಈ ಆಲಯವು ನಿಮಗೆ ಸಾಲುವುದು ಹೇಗೆ?


ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. “ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು.” ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ.


ಅವು ಸೂಚಕಕಾರ್ಯಗಳನ್ನು ನಡೆಸುವ ದೆವ್ವಗಳ ಆತ್ಮಗಳಾಗಿದ್ದು, ಭೂಲೋಕದ ರಾಜರುಗಳನ್ನು ಸರ್ವಶಕ್ತರಾದ ದೇವರ ಮಹಾದಿನದ ಯುದ್ಧಕ್ಕಾಗಿ ಕೂಡಿಸುವುದಕ್ಕಾಗಿ ಹೊರಟವು.


ಆಗ ಯೇಸು ಅವರಿಗೆ, “ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲಾಗುವವು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.


ಆದ್ದರಿಂದ, “ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು, ದೇವರ ಆಲಯದಲ್ಲಿ ಹಗಲಿರುಳೂ ದೇವರನ್ನು ಸೇವೆಮಾಡುವರು. ಸಿಂಹಾಸನದ ಮೇಲೆ ಕೂತಿದ್ದವರು ಅವರನ್ನು ಆವರಿಸಿ ಸಂರಕ್ಷಿಸಿದರು.


ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿ ಆಗಿರುವವರು ಇವರನ್ನು ಮೇಯಿಸಿ; ‘ಜೀವಜಲದ ಒರತೆಗಳ ಬಳಿ ನಡೆಸುವರು.’ ‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’” ಎಂದು ಹೇಳಿದನು.


ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ. ಏಕೆಂದರೆ ಇವರು ಕನ್ಯೆಯರಂತೆ ನಿಷ್ಕಳಂಕರು. ಕುರಿಮರಿ ಆಗಿರುವವರು ಹೋದಡೆಯಲ್ಲೆಲ್ಲಾ ಅವರ ಹಿಂದೆ ಹೋಗುವವರು ಇವರೇ. ಇವರು ಮನುಷ್ಯರೊಳಗಿಂದ ಕೊಂಡುಕೊಳ್ಳಲಾಗಿ ದೇವರಿಗೂ ಕುರಿಮರಿಯಾಗಿರುವವರಿಗೂ ಪ್ರಥಮಫಲದಂತಾದರು.


ದೇವರು ಮನುಷ್ಯಪುತ್ರನಾದ ನನ್ನಲ್ಲಿ ಮಹಿಮೆ ಪಟ್ಟರೆ, ದೇವರು ಸಹ ಮನುಷ್ಯಪುತ್ರನಾದ ನನ್ನನ್ನು ತಮ್ಮಲ್ಲಿ ಮಹಿಮೆಪಡಿಸುವರು ಮತ್ತು ತಕ್ಷಣವೇ ಮಹಿಮೆಪಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು