Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:4 - ಕನ್ನಡ ಸಮಕಾಲಿಕ ಅನುವಾದ

4 ‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಒರಸುವನಾತ ಅವರ ಕಂಬನಿಯನೆಲ್ಲಾ ಇರದಿನ್ನು ಸಾವುನೋವು ಅವರಿಗೆಲ್ಲಾ; ಇರವು ಶೋಕ ದುಃಖಗಳಾವುವು ಮರೆಯಾಗಿ ಹೋದವು ಹಿಂದಿನದೆಲ್ಲವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣವಿರುವದಿಲ್ಲ, ಇನ್ನು ದುಃಖವಾಗಲಿ ಗೋಳಾಟವಾಗಲಿ ಕಷ್ಟವಾಗಲಿ ಇರುವದಿಲ್ಲ; ಮೊದಲಿದ್ದದ್ದೆಲ್ಲಾ ಇಲ್ಲದೆ ಹೋಯಿತು ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರು ಅವರ ಕಣ್ಣೀರನ್ನೆಲ್ಲ ಒರಸಿ ಬಿಡುವನು. ಅಲ್ಲಿ ಇನ್ನು ಮರಣವಿರುವುದಿಲ್ಲ, ದುಃಖವಿರುವುದಿಲ್ಲ, ಗೋಳಾಟವಿರುವುದಿಲ್ಲ ಮತ್ತು ನೋವಿರುವುದಿಲ್ಲ. ಹಳೆಯ ಮಾರ್ಗಗಳೆಲ್ಲ ಹೋಗಿಬಿಟ್ಟವು” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೊ ತೆಂಚ್ಯಾ ಡೊಳ್ಯಾನಿತ್ಲಿ ದುಕ್ಕಾ ಪುಸುನ್ ಕಾಡ್ತಾ. ಅನಿಫಿಡೆ ಮರಾನ್ ಹೊಂವ್ದಿತ್, ಕಸ್ಟ್ ಹೊಂವ್ದಿತ್ ರಡ್ತಲೆ ಹೊಂವ್ದಿತ್, ದುಕ್ತಲೆ ಹೊಂವ್ದಿತ್ ರ್‍ಹಾಯ್ನಾ, ಅದ್ದಿ ಹೊತ್ತೆ ಸಗ್ಳೆ ನಾಪತ್ತೊ ಹೊವ್ನ್ ಜಾತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:4
26 ತಿಳಿವುಗಳ ಹೋಲಿಕೆ  

ಅವರು ಮರಣವನ್ನು ಜಯದಲ್ಲಿ ನುಂಗಿಬಿಡುವರು. ಸಾರ್ವಭೌಮ ಯೆಹೋವ ದೇವರು ಎಲ್ಲಾ ಮುಖಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವರು. ತಮ್ಮ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕುವರು. ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.


ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿ ಆಗಿರುವವರು ಇವರನ್ನು ಮೇಯಿಸಿ; ‘ಜೀವಜಲದ ಒರತೆಗಳ ಬಳಿ ನಡೆಸುವರು.’ ‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’” ಎಂದು ಹೇಳಿದನು.


ಕೊನೆಯದಾಗಿ, ನಿರ್ಮೂಲವಾಗುವ ವೈರಿ ಮರಣವೇ.


ನಿನ್ನ ಸೂರ್ಯನು ಅಸ್ತಮಿಸುವುದಿಲ್ಲ. ನಿನ್ನ ಚಂದ್ರನು ಕಾಣದೆ ಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು. ನೀನು ದುಃಖಿಸುವ ದಿನಗಳು ಸಮಾಪ್ತಿಯಾಗುವುದು.


ಯೆಹೋವ ದೇವರು ವಿಮೋಚಿಸಿದವರು ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ಲೋಕವೂ ಲೋಕದ ಆಶೆಗಳೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಜೀವಿಸುವನು.


ಆದಕಾರಣ ಯೆಹೋವ ದೇವರು ವಿಮೋಚಿಸಿದವರು, ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ಆಗ ಕನ್ನಿಕೆಯರೂ, ಪ್ರಾಯದವರೂ, ವೃದ್ಧರ ಸಹಿತವಾಗಿ ನಾಟ್ಯವಾಡುತ್ತಾ ಹರ್ಷಿಸುವರು. ಏಕೆಂದರೆ ನಾನು ಅವರ ದುಃಖವನ್ನು ಆನಂದಕ್ಕೆ ಬದಲಾಯಿಸುವೆನು. ನಾನು ಅವರನ್ನು ಆಧರಿಸಿ, ಅವರ ದುಃಖದಿಂದ ಬಿಡಿಸಿ, ಅವರಿಗೆ ಸಂತೋಷವನ್ನುಂಟು ಮಾಡುವೆನು.


ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.


ಏಕೆಂದರೆ, ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳಬೇಕಾಗಿಲ್ಲ. ನೀವು ಕೂಗಿ ದುಃಖಿಸಿದ ಶಬ್ದವನ್ನು ದೇವರು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವರು. ದೇವರು ನಿಮ್ಮ ಸ್ವರವನ್ನು ಕೇಳಿದ ಕೂಡಲೇ ಸದುತ್ತರವನ್ನು ದಯಪಾಲಿಸುವರು.


ತರುವಾಯ, “ನೂತನ ಆಕಾಶವನ್ನೂ ನೂತನ ಭೂಮಿಯನ್ನೂ” ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಇಲ್ಲದಂತಾದವು. ಇನ್ನು ಸಮುದ್ರವು ಇರಲಿಲ್ಲ.


ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲಾದವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.


ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.


ಇನ್ನು ಯಾವ ಶಾಪವೂ ಇರುವುದಿಲ್ಲ. ಅದರಲ್ಲಿ ದೇವರ ಮತ್ತು ಕುರಿಮರಿಯಾದವರ ಸಿಂಹಾಸನವಿರುವುದು. ದೇವರ ದಾಸರು ಅವರಿಗೆ ಸೇವೆಮಾಡುವರು.


ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.


ಲೋಕದ ವಸ್ತುಗಳನ್ನು ಉಪಯೋಗಿಸುವವರು ಅದರಲ್ಲಿಯೇ ಮಗ್ನರಾಗದಿರಲಿ. ಏಕೆಂದರೆ ಈಗಿರುವ ಪ್ರಪಂಚ ಗತಿಸಿಹೋಗುತ್ತಿದೆ.


“ಸಮಾಧಿಯ ಶಕ್ತಿಯಿಂದ ಅವರನ್ನು ಕ್ರಯಕೊಟ್ಟು ವಿಮೋಚಿಸುವೆನು. ಮರಣದಿಂದ ಅವರನ್ನು ಬಿಡಿಸುವೆನು. ಮರಣವೇ ನಿನ್ನ ಉಪದ್ರವ ಎಲ್ಲಿ? ಪಾತಾಳವೇ ನಿನ್ನ ವಿನಾಶವೆಲ್ಲಿ? “ಅನುಕಂಪವು ನನ್ನಿಂದ ದೂರವಾಗಿದೆ.


ಮನುಷ್ಯನು ಕೇವಲ ಉಸಿರಿನಂತಿದ್ದಾನೆ; ಅವನ ದಿವಸಗಳು ಅಳಿದು ಹೋಗುವ ನೆರಳಿನ ಹಾಗಿವೆ.


ಆದ್ದರಿಂದ, “ಅವರ ನಡುವೆಯಿಂದ ಹೊರಟುಬಂದು ಪ್ರತ್ಯೇಕವಾಗಿರಿ. ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ನಾನು ನಿಮ್ಮನ್ನು ಸ್ವೀಕರಿಸುವೆನು ಎಂದು ಕರ್ತದೇವರು ಹೇಳುತ್ತಾರೆ.”


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವ ದೇವರು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದಂತೆ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಮುಂದೆ ದುಃಖಪಡುವುದಿಲ್ಲ.


ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು.


“ಇನ್ನೂ ಒಂದು ಸಾರಿ,” ಎಂಬ ಮಾತು ನಿರ್ಮಿತವಾಗಿರುವ ಕದಲುವ ವಸ್ತುಗಳು ತೆಗೆದುಹಾಕಲಾಗುವುದು ಎಂದೂ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿರುವುದು ಎಂಬುದನ್ನು ಸೂಚಿಸುತ್ತದೆ.


ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವು, ಪಾತಾಳವು ತಮ್ಮಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕ್ರಿಯೆಗಳ ಪ್ರಕಾರ ನ್ಯಾಯತೀರ್ಪಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು