Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:10 - ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಅವನು, “ನನಗೆ ಈ ಪುಸ್ತಕದಲ್ಲಿರುವ ಪ್ರವಾದನಾ ವಾಕ್ಯಗಳಿಗೆ ಮುದ್ರೆ ಹಾಕಬೇಡ. ಏಕೆಂದರೆ ಸಮಯವು ಸಮೀಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ಅವನು ನನಗೆ ಈ ಪುಸ್ತಕದಲ್ಲಿರುವ “ಪ್ರವಾದನಾ ವಾಕ್ಯಗಳಿಗೆ ಮುದ್ರೆಹಾಕಬೇಡ. ಏಕೆಂದರೆ ಇವು ನೆರವೇರುವ ಕಾಲವು ಸಮೀಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದಲ್ಲದೆ ಆತನು ನನಗೆ, “ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳಿಗೆ ಮುದ್ರೆಹಾಕಿ ಮುಚ್ಚಿಡಬೇಡ; ಇವು ನೆರವೇರುವ ಕಾಲವು ಸಮೀಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ಅವನು ನನಗೆ - ಈ ಪುಸ್ತಕದಲ್ಲಿರುವ ಪ್ರವಾದನವಾಕ್ಯಗಳನ್ನು ಗುಪ್ತವಾಗಿಡಬೇಡ; ಇವು ನೆರವೇರುವ ಸಮಯವು ಸಮೀಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬಳಿಕ ದೇವದೂತನು ನನಗೆ, “ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳನ್ನು ರಹಸ್ಯವಾಗಿಡಬೇಡ. ಇವುಗಳೆಲ್ಲವೂ ಸಂಭವಿಸುವ ಕಾಲ ಸಮೀಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅನಿ ತೆನಿ ಮಾಕಾ, “ಹ್ಯಾ ಪುಸ್ತಕಾತ್ಲ್ಯಾ ಪ್ರವಾದ್ ಕರುನ್ ಸಾಂಗಲ್ಲ್ಯಾ ಗೊಸ್ಟಿಯಾ ಘುಟಾನ್ ಧಾಪುನ್ ಥವ್‍ನಕೊ, ಕಶ್ಯಾಕ್ ಮಟ್ಲ್ಯಾರ್ ಹೆ ಸಗ್ಳೆ ಹೊತಲೊ ಎಳ್ ಜಗ್ಗೊಳ್ ಯೆಲ್ಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:10
21 ತಿಳಿವುಗಳ ಹೋಲಿಕೆ  

“ನಿಮಗೆ ನೀಡಲಾದ ಸಂಜೆ ಮತ್ತು ಮುಂಜಾನೆಗಳ ದರ್ಶನವು ಸತ್ಯವಾದದ್ದು. ಆದರೆ ಆ ದರ್ಶನವು ಗುಟ್ಟಾಗಿರಲಿ. ಏಕೆಂದರೆ ಅದು ಬಹು ದೂರದ ಭವಿಷ್ಯಕ್ಕೆ ಸಂಬಂಧಿಸಿದ್ದು.”


ಈ ಪ್ರವಾದನೆಯ ವಾಕ್ಯಗಳನ್ನು ಓದುವಂಥವರೂ ಕೇಳುವಂಥವರೂ ಈ ಪ್ರವಾದನೆಯ ವಾಕ್ಯಗಳಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವಂಥವರೂ ಧನ್ಯರು. ಏಕೆಂದರೆ ಸಮಯವು ಸಮೀಪವಾಗಿದೆ.


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.


ಏಳು ಗುಡುಗುಗಳು ಮಾತನಾಡಿದಾಗ, ನಾನು ಬರೆಯಬೇಕೆಂದಿದ್ದೆನು. ಆದರೆ ಪರಲೋಕದಿಂದ ಬಂದ ಶಬ್ದವು, “ನೀನು ಆ ಏಳು ಗುಡುಗುಗಳು ಹೇಳಿರುವುದನ್ನು ಮುದ್ರೆಹಾಕಿ ಮುಚ್ಚಿಡು. ಅದನ್ನು ಬರೆಯಬೇಡ,” ಎಂದು ಹೇಳುವುದನ್ನು ಕೇಳಿದೆನು.


ನಾನು ನಿಮಗೆ ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ. ನೀವು ಕಿವಿಯಲ್ಲಿ ಕೇಳುವುದನ್ನು ಮಾಳಿಗೆಯ ಮೇಲೆ ಸಾರಿರಿ.


ಆಗ ಅವನು, “ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು, ಏಕೆಂದರೆ ಈ ಮಾತುಗಳು ಅಂತ್ಯಕಾಲದವರೆಗೂ ಮುಚ್ಚಿ, ಮುದ್ರಿತವಾಗಿವೆ.


ಆದರೆ ದಾನಿಯೇಲನೇ ನೀನು, ಅಂತ್ಯಕಾಲದವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆದಿರುವ ಆ ಗ್ರಂಥಕ್ಕೆ ಮುದ್ರೆ ಹಾಕು. ಅನೇಕರು ಅತ್ತಿತ್ತ ಓಡಾಡುವರು, ಜ್ಞಾನವು ಹೆಚ್ಚಾಗುವುದು,” ಎಂದು ಹೇಳಿದನು.


ಆದ್ದರಿಂದ ಅವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನಾನು ಈ ಗಾದೆಯನ್ನು ನಿಲ್ಲಿಸುತ್ತೇನೆ. ಅದನ್ನು ಇನ್ನು ಮೇಲೆ ಇಸ್ರಾಯೇಲಿನಲ್ಲಿ ಗಾದೆಯಂತೆ ಉಪಯೋಗಿಸುವುದಿಲ್ಲ. ದಿನಗಳು ಹತ್ತಿರವಾಗಿವೆ. ಪ್ರತಿದರ್ಶನವು ನೆರವೇರಲಿದೆ’ ಎಂದು ಅವರಿಗೆ ಹೇಳು.


ರಾತ್ರಿಯು ಬಹಳಷ್ಟು ಕಳೆದು ಹಗಲು ಸಮೀಪಿಸಿದೆ. ಆದ್ದರಿಂದ ನಾವು ಕತ್ತಲೆಯ ಕೃತ್ಯಗಳನ್ನು ಎಸೆದು ಬೆಳಕಿನ ಆಯುಧಗಳನ್ನು ಧರಿಸಿಕೊಳ್ಳೋಣ.


“ಯೇಸುವೆಂಬ ನಾನು ನಮ್ಮ ಸಭೆಗಳಲ್ಲಿ ಈ ಸಂಗತಿಗಳ ವಿಷಯವಾಗಿ ನಿಮಗೆ ಸಾಕ್ಷಿ ನೀಡುವಂತೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶದ ಕುಡಿ, ಅವನ ಸಂತತಿಯೂ ಉದಯದ ಪ್ರಕಾಶಮಾನ ತಾರೆಯೂ ಆಗಿದ್ದೇನೆ!” ಎಂದರು.


ಸಿಂಹಾಸನದ ಮೇಲೆ ಕುಳಿತಿದ್ದವರ ಬಲಗೈಯಲ್ಲಿ ಒಂದು ಚರ್ಮದ ಸುರುಳಿಯನ್ನು ಕಂಡೆನು. ಅದರ ಒಳಗೂ ಹಿಂಭಾಗದಲ್ಲಿಯೂ ಬರೆಯಲಾಗಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.


ನಿಮ್ಮನ್ನು ಯಾರೂ ಯಾವ ವಿಧದಲ್ಲಿಯೂ ವಂಚಿಸದಿರಲಿ. ಏಕೆಂದರೆ ವಿಶ್ವಾಸದಿಂದ ಬಿದ್ದುಹೋಗುವಿಕೆಯು ಸಂಭವಿಸಿ, ನಾಶಕ್ಕೆ ನೇಮಕವಾಗಿರುವ ನಿಯಮ ಮೀರುವ ಮನುಷ್ಯನು ಬರುವುದಕ್ಕೆ ಮುಂಚೆ ಕರ್ತ ಯೇಸುವಿನ ದಿನವು ಬರುವುದಿಲ್ಲ!


ನೀವು ಗೋಳಾಡಿರಿ. ಏಕೆಂದರೆ, ಯೆಹೋವ ದೇವರ ದಿನವು ಸಮೀಪವಾಯಿತು. ಅದು ಸರ್ವಶಕ್ತರಿಂದ ನಾಶರೂಪವಾಗಿ ಬರುವುದು.


ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ದೇವರ ಶಿಕ್ಷಣವನ್ನು ಮುದ್ರಿಸು.


ಈ ವಿಷಯಗಳಲ್ಲಿ ಸಾಕ್ಷಿ ನೀಡುವವರು, “ಹೌದು, ನಾನು ಬೇಗ ಬರುತ್ತೇನೆ!” ಎಂದು ಹೇಳುತ್ತಾರೆ. ಆಮೆನ್. ಕರ್ತ ಯೇಸುವೇ ಬಾ.


ಈಗಿನ ಕಾಲವನ್ನು ತಿಳಿದು ಇದನ್ನೆಲ್ಲಾ ಮಾಡಿರಿ. ನೀವು ನಿದ್ರೆಯಿಂದ ಎಚ್ಚರಗೊಳ್ಳುವ ಗಳಿಗೆಯಾಗಿದೆ. ಏಕೆಂದರೆ, ನಮ್ಮ ರಕ್ಷಣೆಯು ನಾವು ಮೊದಲು ವಿಶ್ವಾಸವಿಟ್ಟಿದಕ್ಕಿಂತ ಈಗ ಹತ್ತಿರವಾಗಿರುತ್ತದೆ.


ಅದು, “ಕಾಣುತ್ತಿರುವುದನ್ನು ಸುರುಳಿಯಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯದಲ್ಲಿರುವ ಏಳು ಸಭೆಗಳಿಗೆ ಕಳುಹಿಸಬೇಕು,” ಎಂದು ನುಡಿಯಿತು.


ಆಗ, “ಇಗೋ, ಬೇಗನೆ ಬರುತ್ತೇನೆ! ಈ ಗ್ರಂಥದ ಪ್ರವಾದನಾ ವಾಕ್ಯಗಳನ್ನು ಕೈಗೊಂಡು ನಡೆಯುವವರು ಧನ್ಯರು,” ಎಂದು ಕರ್ತ ಆಗಿರುವ ಯೇಸು ಹೇಳಿದರು.


ಅವನು ನನಗೆ, “ನೋಡು, ನೀನು ಹಾಗೆ ಮಾಡಬೇಡ. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಳ್ಳುವವರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು!” ಎಂದು ಹೇಳಿದನು.


ಈ ಗ್ರಂಥದ ಪ್ರವಾದನೆಯನ್ನು ಕೇಳುವ ಪ್ರತಿಯೊಬ್ಬರಿಗೂ ನಾನು ಸಾಕ್ಷಿ ಕೊಡುವುದೇನೆಂದರೆ: ಯಾರಾದರೂ ಹೆಚ್ಚು ಮಾತುಗಳನ್ನು ಇವುಗಳಿಗೆ ಕೂಡಿಸಿದರೆ, ದೇವರು ಅವರ ಮೇಲೆ ಈ ಗ್ರಂಥದಲ್ಲಿ ಬರೆದಿರುವ ಉಪದ್ರವಗಳನ್ನು ಕೂಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು