Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:16 - ಕನ್ನಡ ಸಮಕಾಲಿಕ ಅನುವಾದ

16 “ಯೇಸುವೆಂಬ ನಾನು ನಮ್ಮ ಸಭೆಗಳಲ್ಲಿ ಈ ಸಂಗತಿಗಳ ವಿಷಯವಾಗಿ ನಿಮಗೆ ಸಾಕ್ಷಿ ನೀಡುವಂತೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶದ ಕುಡಿ, ಅವನ ಸಂತತಿಯೂ ಉದಯದ ಪ್ರಕಾಶಮಾನ ತಾರೆಯೂ ಆಗಿದ್ದೇನೆ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಯೇಸುವೆಂಬ ನಾನು ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ ಅವನ ಸಂತತಿಯೂ ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಯೇಸುವೆಂಬ ನಾನೇ ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ನಿಮಗೆ ಸಾಕ್ಷಿನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ನಾನು ದಾವೀದಕುಲಪುತ್ರ. ಅದೇ ವಂಶದ ಕುಡಿ; ಉದಯಕಾಲದ ಉಜ್ವಲ ನಕ್ಷತ್ರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೇಸುವೆಂಬ ನಾನು ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ವಿಷಯದಲ್ಲಿ ನಿಮಗೆ ಸಾಕ್ಷಿಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದವಂಶವೆಂಬ ಬುಡದಿಂದ ಹುಟ್ಟಿದ ಚಿಗುರೂ ಅವನ ಸಂತತಿಯೂ ಉದಯಸೂಚಕವಾದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಯೇಸುವೆಂಬ ನಾನೇ, ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ಸಾಕ್ಷಿ ನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ದಾವೀದನ ವಂಶದಲ್ಲಿ ಹುಟ್ಟಿದವನೂ ಪ್ರಕಾಶಮಾನವಾದ ಉದಯನಕ್ಷತ್ರವೂ ಆಗಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಮಿಯಾ ಜೆಜು ಮಾಜ್ಯಾ ದೆವಾಚ್ಯಾ ದುತಾನ್ ಸಗ್ಳಿ ಹಿ ವಿಶಯಾ ಮಾಜ್ಯಾ ವರ್ತಿ ವಿಶ್ವಾಸ್, ಕರ್ತಲ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಸಾಂಗುಸಾಟ್ನಿ ಮನುನ್ ಧಾಡುನ್ ದಿಲಾ.ಮಿಯಾಚ್ ಮುಳ್ ಮಿಯಾಚ್ ದಾವಿದಾಚ್ಯಾ ಘರಾನಾಚೊ ; ಮಿಯಾ ಉಜ್ವೊಡಾನ್ ಭರಲ್ಲಿ ಸಕ್ಕಾಳ್ಚಿ ಚಿಕ್ಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:16
30 ತಿಳಿವುಗಳ ಹೋಲಿಕೆ  

ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜರೂ ಆಗಿರುವವರು ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನು ಬಿಚ್ಚುವುದಕ್ಕೆ ಜಯವೀರರಾಗಿದ್ದಾರೆ,” ಎಂದು ಹೇಳಿದನು.


ಮಾತ್ರವಲ್ಲದೆ ನಮಗೆ ಬಹು ನಿಶ್ಚಯವಾದ ಪ್ರವಾದನೆಯ ವಾಕ್ಯಗಳಿವೆ. ಉದಯ ನಕ್ಷತ್ರವಾಗಿರುವ ಕ್ರಿಸ್ತ ಯೇಸು ನಿಮ್ಮ ಹೃದಯಗಳಲ್ಲಿ ಉದಯಿಸುವಾಗ ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪದಂತೆ ಎಣಿಸಿ, ನೀವು ಆ ಪ್ರವಾದನಾ ವಾಕ್ಯಗಳಿಗೆ ಲಕ್ಷ್ಯಕೊಡುವುದು ಒಳ್ಳೆಯದು.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಕೊಂಬೆಯು ಫಲಕೊಡುವುದು.


ಯೋಹಾನನು, ಅಂದಿನ ಏಷ್ಯಾ ಪ್ರಾಂತದಲ್ಲಿರುವ ಏಳು ಸಭೆಗಳಿಗೆ ಬರೆಯುವುದೇನೆಂದರೆ, ಗತಕಾಲ, ವರ್ತಮಾನ, ಭವಿಷ್ಯತ್ ಕಾಲಗಳಲ್ಲಿರುವ ದೇವರಿಂದ ಮತ್ತು ತಮ್ಮ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ,


ಈ ವಿಷಯಗಳಲ್ಲಿ ಸಾಕ್ಷಿ ನೀಡುವವರು, “ಹೌದು, ನಾನು ಬೇಗ ಬರುತ್ತೇನೆ!” ಎಂದು ಹೇಳುತ್ತಾರೆ. ಆಮೆನ್. ಕರ್ತ ಯೇಸುವೇ ಬಾ.


“ಕ್ರಿಸ್ತನ ವಿಷಯವಾಗಿ ನಿಮ್ಮ ಅಭಿಪ್ರಾಯವೇನು? ಆತನು ಯಾರ ಪುತ್ರನು?” ಎಂದು ಕೇಳಿದ್ದಕ್ಕೆ ಅವರು ಯೇಸುವಿಗೆ, “ದಾವೀದನ ಪುತ್ರನು,” ಎಂದರು.


ಆಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ!” ಎಂದನು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನು ನೀಡುವ ಕರ್ತದೇವರು ಬೇಗನೆ ಸಂಭವಿಸತಕ್ಕ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿಯೇ ತಮ್ಮ ದೇವದೂತನನ್ನು ಕಳುಹಿಸಿದರು.


ಇದು ಕ್ರಿಸ್ತ ಯೇಸುವಿನ ಪ್ರಕಟನೆ. ಶೀಘ್ರವೇ ಸಂಭವಿಸಲಿಕ್ಕಿರುವ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದರು. ಇದಲ್ಲದೆ ದೇವರು ತಮ್ಮ ದೇವದೂತನನ್ನು ಕಳುಹಿಸಿ, ಅವನ ಮುಖಾಂತರ ಆ ಸಂಗತಿಗಳನ್ನು ತಮ್ಮ ದಾಸನಾದ ಯೋಹಾನನಿಗೆ ತಿಳಿಸಿದರು.


“ಯೆಹೂದ್ಯರ ಅರಸರಾಗಿ ಹುಟ್ಟಿದವರು ಎಲ್ಲಿ? ನಾವು ಅವರನ್ನು ಸೂಚಿಸುವ ನಕ್ಷತ್ರವನ್ನು ಪೂರ್ವದೇಶದಲ್ಲಿ ಕಂಡು ಅವರನ್ನು ಆರಾಧಿಸಲು ಬಂದಿದ್ದೇವೆ,” ಎಂದರು.


ಅವನಿಗೆ ಹೇಳತಕ್ಕದ್ದೇನೆಂದರೆ: ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ರೆಂಬೆ,’ ಎಂದು ಹೆಸರುಳ್ಳ ಮನುಷ್ಯನು, ತನ್ನ ಸ್ಥಳದೊಳಗಿಂದ ರೆಂಬೆಯನ್ನು ತೆಗೆದುಹಾಕಿ, ಯೆಹೋವ ದೇವರ ಆಲಯವನ್ನು ಕಟ್ಟುವನು.


“ನಾನು ಅವನನ್ನು ನೋಡುವೆನು, ಈಗಲ್ಲ. ಅವನನ್ನು ದೃಷ್ಟಿಸುವೆನು, ಸಮೀಪದಲ್ಲಿ ಅಲ್ಲ. ಯಾಕೋಬನಿಂದ ನಕ್ಷತ್ರ ಉದಯಿಸುವುದು. ಇಸ್ರಾಯೇಲನಿಂದ ರಾಜದಂಡ ಏಳುವುದು. ಅದು ಮೋವಾಬಿನ ಮೂಲೆಗಳನ್ನು ಹೊಡೆದು, ಸೇಥನ ಎಲ್ಲಾ ಮಕ್ಕಳನ್ನು ಸಂಹರಿಸುವುದು.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.”


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.


ನಮ್ಮ ಪಿತೃಗಳು ಅವರಿಗೆ ಸೇರಿದವರು. ಕ್ರಿಸ್ತ ಯೇಸುವು ಮನುಷ್ಯರಾಗಿ ಹುಟ್ಟಿದ್ದು ಅವರ ವಂಶದಲ್ಲಿಯೇ; ಈ ಕ್ರಿಸ್ತ ಯೇಸುವೇ ಎಲ್ಲರ ಮೇಲಿರುವ ದೇವರೂ ಎಂದೆಂದಿಗೂ ಸ್ತುತಿಹೊಂದತಕ್ಕವರೂ ಆಗಿದ್ದಾರೆ! ಆಮೆನ್.


ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ, ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆ ಮಾಡಿಕೊಳ್ಳಲಿ. ನೀತಿವಂತನು ಇನ್ನೂ ನೀತಿಯನ್ನು ಮಾಡಲಿ. ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ!” ಎಂದನು.


ಆಮೇಲೆ ದೂತನು ಸ್ಪಟಿಕದಂತೆ ಹೊಳೆಯುವ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಕುರಿಮರಿಯಾದವರ ಸಿಂಹಾಸನದಿಂದ ಹೊರಟು,


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು.


ನಮ್ಮ ದೇವರ ಮಮತೆಯ ಕರುಣೆಯಿಂದಲೇ, ಸ್ವರ್ಗದಿಂದ ನಮಗೆ ಅರುಣೋದಯವು ಉಂಟಾಗಿ


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು, ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ದೇವರ ಪರಲೋಕದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನಲು ಕೊಡುವೆನು.


ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರೇ’ ಎಂದು ಕರೆಯುವುದಾದರೆ, ಆತನು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದನು.


ಕ್ರಿಸ್ತ ಯೇಸುವಿನ ವಂಶಾವಳಿಯ ದಾಖಲೆ. ಯೇಸು ದಾವೀದನ ವಂಶದವರು, ದಾವೀದನು ಅಬ್ರಹಾಮನ ವಂಶದವನು:


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


ಮುಂಜಾನೆಯ ನಕ್ಷತ್ರವೇ, ಉದಯ ಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಬಿದ್ದೆ?


ಪುನಃ ಪ್ರವಾದಿ ಯೆಶಾಯನು ಹೇಳುವುದೇನೆಂದರೆ: “ಇಷಯನ ವಂಶದಿಂದ ಬೇರು ಒಂದು ಚಿಗುರುವುದು, ಜನಾಂಗಗಳನ್ನು ಆಳುವವರಾಗಿ ಅವರು ಉದಯಿಸುವರು. ಯೆಹೂದ್ಯರಲ್ಲದವರು ಆತನಲ್ಲಿ ನಿರೀಕ್ಷೆ ಇಡುವರು.”


ಅದು, “ಕಾಣುತ್ತಿರುವುದನ್ನು ಸುರುಳಿಯಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯದಲ್ಲಿರುವ ಏಳು ಸಭೆಗಳಿಗೆ ಕಳುಹಿಸಬೇಕು,” ಎಂದು ನುಡಿಯಿತು.


ಆದಕಾರಣ ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರು,’ ಎಂದು ಕರೆಯುವಾಗ, ಅವರು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು