Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:20 - ಕನ್ನಡ ಸಮಕಾಲಿಕ ಅನುವಾದ

20 ಈ ವಿಷಯಗಳಲ್ಲಿ ಸಾಕ್ಷಿ ನೀಡುವವರು, “ಹೌದು, ನಾನು ಬೇಗ ಬರುತ್ತೇನೆ!” ಎಂದು ಹೇಳುತ್ತಾರೆ. ಆಮೆನ್. ಕರ್ತ ಯೇಸುವೇ ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, “ಹೌದು ನಾನು ನಿಜವಾಗಿ ಬೇಗನೇ ಬರುತ್ತೇನೆ!” ಎಂದು ಹೇಳುತ್ತಾನೆ. ಆಮೆನ್. ಕರ್ತನಾದ ಯೇಸುವೇ ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದಕ್ಕೆಲ್ಲಾ ಸಾಕ್ಷಿಯಾಗಿರುವಾತನು, “ಹೌದು, ನಾನು ಬೇಗನೆ ಬರುತ್ತೇನೆ,” ಎಂದು ಹೇಳುತ್ತಾನೆ. ಆಮೆನ್, ಪ್ರಭು ಯೇಸುವೇ, ಬನ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಈ ವಿಷಯಗಳಲ್ಲಿ ಸಾಕ್ಷಿಹೇಳುವವನು - ನಿಜವಾಗಿ ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇವುಗಳೆಲ್ಲಾ ನಿಜವೆಂದು ಹೇಳುವಾತನು ಯೇಸುವೇ. ಈಗ ಆತನು, “ಹೌದು, ನಾನು ಬೇಗನೆ ಬರುತ್ತೇನೆ” ಎಂದು ಹೇಳುತ್ತಾನೆ. ಆಮೆನ್! ಪ್ರಭು ಯೇಸುವೇ, ಬಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜೊ ಕೊನ್ ಹ್ಯಾ ಸಗ್ಳ್ಯಾ ಗೊಸ್ಟಿಯಾಕ್ನಿ ಸಾಕ್ಷಿ ದಿತಾ ತೊ, “ಹೊಯ್ ಖರೆಚ್! ಮಿಯಾ ಲಗ್ಗುನಾಚ್ ಯೆವ್ಲಾ!” ಮನ್ತಾ. ಆಮೆನ್! ಧನಿಯಾ ಜೆಜು ಯೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:20
15 ತಿಳಿವುಗಳ ಹೋಲಿಕೆ  

ಆಗ, “ಇಗೋ, ಬೇಗನೆ ಬರುತ್ತೇನೆ! ಈ ಗ್ರಂಥದ ಪ್ರವಾದನಾ ವಾಕ್ಯಗಳನ್ನು ಕೈಗೊಂಡು ನಡೆಯುವವರು ಧನ್ಯರು,” ಎಂದು ಕರ್ತ ಆಗಿರುವ ಯೇಸು ಹೇಳಿದರು.


ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.


ಆಗ ಕರ್ತ ಯೇಸು, “ಇಗೋ, ನಾನು ಬೇಗ ಬರುತ್ತೇನೆ. ಪ್ರತಿಯೊಬ್ಬರಿಗೂ ಅವರವರ ಕೆಲಸಕ್ಕೆ ತಕ್ಕಂತೆ ಕೊಡುವ ಪ್ರತಿಫಲವು ನನ್ನಲ್ಲಿದೆ.


ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು.


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ, ಅವನು ಶಾಪಗ್ರಸ್ತನಾಗಲಿ! ಕರ್ತನೇ, ಬಾ!


ಇದಲ್ಲದೆ ಅವನು, “ನನಗೆ ಈ ಪುಸ್ತಕದಲ್ಲಿರುವ ಪ್ರವಾದನಾ ವಾಕ್ಯಗಳಿಗೆ ಮುದ್ರೆ ಹಾಕಬೇಡ. ಏಕೆಂದರೆ ಸಮಯವು ಸಮೀಪವಾಗಿದೆ.


ಆ ದಿನದಲ್ಲಿ ಜನರು, “ಇಗೋ, ಇವರೇ ನಮ್ಮ ದೇವರು, ನಾವು ಇವರನ್ನೇ ನಂಬಿದ್ದೇವೆ. ಇವರೇ ನಮ್ಮನ್ನು ರಕ್ಷಿಸುವರು. ಇವರೇ ಯೆಹೋವ ದೇವರು, ನಾವು ಇವರನ್ನೇ ನಂಬಿದ್ದೇವೆ, ನಾವು ಇವರ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷಪಡುವೆವು,” ಎಂದು ಹೇಳುವರು.


ಯೋಹಾನನು ತಾನು ಕಂಡ ಎಲ್ಲಾ ಸಂಗತಿಗಳನ್ನು ಅಂದರೆ ದೇವರ ವಾಕ್ಯದ ವಿಷಯವಾಗಿಯೂ ಕ್ರಿಸ್ತ ಯೇಸುವಿನ ವಿಷಯವಾಗಿಯೂ ತಿಳಿಸಿ ಸಾಕ್ಷಿಕೊಟ್ಟನು.


ಈ ಗ್ರಂಥದ ಪ್ರವಾದನೆಯನ್ನು ಕೇಳುವ ಪ್ರತಿಯೊಬ್ಬರಿಗೂ ನಾನು ಸಾಕ್ಷಿ ಕೊಡುವುದೇನೆಂದರೆ: ಯಾರಾದರೂ ಹೆಚ್ಚು ಮಾತುಗಳನ್ನು ಇವುಗಳಿಗೆ ಕೂಡಿಸಿದರೆ, ದೇವರು ಅವರ ಮೇಲೆ ಈ ಗ್ರಂಥದಲ್ಲಿ ಬರೆದಿರುವ ಉಪದ್ರವಗಳನ್ನು ಕೂಡಿಸುವರು.


ಇದಲ್ಲದೆ ಯೇಸು ಮಾಡಿದ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನು ಒಂದೊಂದಾಗಿ ಬರೆಯುವುದಾದರೆ, ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಸಾಕಾಗುವುದಿಲ್ಲ ಎಂದು ನಾನು ನೆನಸುತ್ತೇನೆ.


ಸದಾ ಜೀವಿಸುವವನೂ ಆಗಿದ್ದೇನೆ. ಮರಣ ಹೊಂದಿದ್ದೆನು, ಇಗೋ, ಯುಗಯುಗಾಂತರಗಳಲ್ಲಿಯೂ ನಾನು ಬದುಕುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನ ಬಳಿ ಇವೆ.


ನನ್ನ ಪ್ರಿಯನೇ, ಸುಗಂಧ ಸಸ್ಯ ಪರ್ವತಗಳ ಮೇಲಿರುವ ಜಿಂಕೆಯಂತೆಯೂ, ಪ್ರಾಯದ ಹುಲ್ಲೆಯಂತೆಯೂ ನೀನು ಬೇಗ ಬಾ.


ಏಕೆಂದರೆ, “ಇನ್ನು ಸ್ವಲ್ಪ ಸಮಯದಲ್ಲಿಯೇ, ಬರಲಿರುವ ಒಬ್ಬರು ಬಂದೇ ಬರುವರು. ಅವರು ತಡಮಾಡುವುದಿಲ್ಲ.”


ಆದ್ದರಿಂದ ನೀನು ದೇವರ ಕಡೆಗೆ ತಿರುಗಿಕೋ! ಇಲ್ಲದಿದ್ದರೆ ನಾನು ಶೀಘ್ರವೇ ನಿನ್ನ ಬಳಿಗೆ ಬಂದು ನನ್ನ ಇಬ್ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು