Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:5 - ಕನ್ನಡ ಸಮಕಾಲಿಕ ಅನುವಾದ

5 ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ರಾತ್ರಿ ಎಂಬುದೇ ಅಲ್ಲಿ ಇರದು; ದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದು; ದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರು. ಯುಗಯುಗಾಂತರಕ್ಕೂ ಅವರು ರಾಜ್ಯವಾಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗುವದಿಲ್ಲ; ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು; ಅವರು ಯುಗಯುಗಾಂತರಗಳಲ್ಲಿಯೂ ಆಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಥೈ ಅನಿಫಿಡೆ ರಾತ್ ಮನ್ತಲಿ ರ್‍ಹಾಯ್ನಾ, ತೆಂಕಾ ದಿವ್ಯಾಂಚೊ ನಾಹೊಲ್ಯಾರ್ ದಿಸಾಚೊ ಉಜ್ವೊಡ್ ಪಾಜೆ ಮನುನ್ ನಾ, ಕಶ್ಯಾಕ್ ಮಟ್ಲ್ಯಾರ್ ಸರ್ವೆಸ್ವರ್ ದೆವುಚ್ ತೆಂಚೊ ಉಜ್ವೊಡ್ ಹೊವ್ನ್ ರ್‍ಹಾತಾ, ಅನಿ ತೆನಿ ಸದಾ ಸರ್ವತಾಕ್ ರಾಜಾಂಚ್ಯಾ ಸರ್ಕೆ ರಾಜ್ ಚಾಲ್ವುತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:5
22 ತಿಳಿವುಗಳ ಹೋಲಿಕೆ  

ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.


ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು, ಅದನ್ನು ಎಂದಿಗೂ ಎಂದೆಂದಿಗೂ ವಶಪಡಿಸಿಕೊಳ್ಳುವರು.’


ರಾಜ್ಯವೂ, ದೊರೆತನವೂ, ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತೂ ಮಹೋನ್ನತನ ಪರಿಶುದ್ಧವಾದ ಜನರಿಗೆ ದೊರಕುವುದು. ಆತನ ರಾಜ್ಯವು ನಿತ್ಯವಾದ ರಾಜ್ಯ. ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವುವು ಮತ್ತು ವಿಧೇಯವಾಗಿರುವುವು.’


ಒಬ್ಬ ಮನುಷ್ಯನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ಮುಖಾಂತರ ಮರಣವು ಆಳುವುದಾದರೆ, ದೇವರ ಧಾರಾಳವಾದ ಕೃಪೆಯನ್ನೂ ನೀತಿಯ ವರವನ್ನೂ ಹೊಂದಿದವರಾಗಿ ಕ್ರಿಸ್ತ ಯೇಸುವೆಂಬ ಒಬ್ಬಾತನ ಮೂಲಕ ಜೀವದಲ್ಲಿ ಆಳುವುದು ಇನ್ನೂ ಹೆಚ್ಚಾದದ್ದಲ್ಲವೆ!


ಏಕೆಂದರೆ ನಿಮ್ಮ ಬಳಿಯಲ್ಲಿ ಜೀವದ ಬುಗ್ಗೆ ಉಂಟು; ನಿಮ್ಮ ಬೆಳಕಿನಲ್ಲಿ ನಾವು ಬೆಳಕನ್ನು ಕಾಣುವೆವು.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ನಾನು ಜಯಹೊಂದಿ, ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆ, ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ನಾವು ಸಹಿಸಿಕೊಳ್ಳುವವರಾಗಿದ್ದರೆ ಕ್ರಿಸ್ತ ಯೇಸುವಿನ ಜೊತೆಯಲ್ಲಿ ನಾವು ಸಹ ಆಳುವೆವು. ಅವರನ್ನು ನಿರಾಕರಿಸಿದರೆ ಅವರು ಸಹ ನಮ್ಮನ್ನು ನಿರಾಕರಿಸುವರು.


“ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ.


ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.


ದೀಪದ ಬೆಳಕು ನಿನ್ನಲ್ಲಿ ಎಂದೂ ಪ್ರಕಾಶಿಸದು. ವಧೂವರರ ಸ್ವರವು ಮತ್ತೆ ನಿನ್ನಲ್ಲಿ ಎಂದೂ ಕೇಳಿಬರದು. ಏಕೆಂದರೆ ನಿನ್ನ ವರ್ತಕರು ಭೂಮಿಯ ಮಹಾ ಪುರುಷರಾಗಿದ್ದು, ನಿನ್ನ ಮಾಂತ್ರಿಕ ಶಕ್ತಿಯ ದೆಸೆಯಿಂದ ಎಲ್ಲಾ ದೇಶಗಳವರು ವಂಚಿತರಾದರು.


“ಹೀಗೆ ಇವರು ನಿತ್ಯವಾದ ಶಿಕ್ಷೆಗೆ ಒಳಗಾಗುವರು. ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು,” ಎಂದು ಹೇಳುವೆನು.


ಆಮೇಲೆ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಹಿರಿಯರ ಮುಂದೆ ಮಹಿಮೆಯಿಂದ ಆಳುವಾಗ, ಚಂದ್ರನಿಗೆ ಅವಮಾನವಾಗುವುದು, ಸೂರ್ಯನು ನಾಚಿಕೆ ಪಡುವನು.


ಇಷ್ಟೇ ಅಲ್ಲದೆ ಯೆಹೋವ ದೇವರು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ, ಏಳು ದಿನಗಳ ಬೆಳಕಿನಂತಾಗುವುದು.


ಆದರೆ ಅದು ಒಂದು ವಿಶಿಷ್ಟ ದಿವಸವಾಗಿರುವುದು. ಯೆಹೋವ ದೇವರಿಗೆ ಮಾತ್ರ ತಿಳಿದಿರುವ ಒಂದು ದಿನ ಇರುವುದು. ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ. ಆದರೆ, ಸಾಯಂಕಾಲದ ಸಮಯದಲ್ಲಿ ಬೆಳಕು ಇರುವುದು.


ಯೇಸು ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸಮಸ್ತವೂ ನವೀಕರಣವಾಗುವಾಗ, ಮನುಷ್ಯಪುತ್ರನಾದ ನಾನು ನನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಂಡಿರಲು, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯತೀರಿಸುವಿರಿ.


ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಧನ್ಯರೂ ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಯೇಸುಕ್ರಿಸ್ತರೊಂದಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷಗಳ ಕಾಲ ಆಳುವರು.


ಅದು ದೇವರ ಮಹಿಮೆಯಿಂದ ಕೂಡಿತ್ತು. ಪಟ್ಟಣದ ಪ್ರಕಾಶವು ಸೂರ್ಯಕಾಂತದಂತೆ ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು. ಅದು ಸ್ವಚ್ಛವಾದ ಸ್ಪಟಿಕದಂತೆ ಕಾಣಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು