Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:6 - ಕನ್ನಡ ಸಮಕಾಲಿಕ ಅನುವಾದ

6 ಆಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ!” ಎಂದನು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನು ನೀಡುವ ಕರ್ತದೇವರು ಬೇಗನೆ ಸಂಭವಿಸತಕ್ಕ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿಯೇ ತಮ್ಮ ದೇವದೂತನನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ತನ್ನ ದೇವದೂತನನ್ನು ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅನಂತರ ಆ ದೇವದೂತನು ನನಗೆ, “ಈ ಮಾತುಗಳು ಸತ್ಯವಾದುವು, ನಂಬಲರ್ಹವಾದುವು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತನನ್ನೇ ಕಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಮೇಲೆ ಅವನು ನನಗೆ - ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ; ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತಿಳಿಯಪಡಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ದೇವದೂತನು ನನಗೆ, “ಈ ವಾಕ್ಯಗಳು ಸತ್ಯವಾದವುಗಳೂ ನಂಬತಕ್ಕವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳಿಗೆ ಪ್ರಭುವೇ ದೇವರಾಗಿದ್ದಾನೆ. ಬೇಗನೆ ಸಂಭವಿಸಲಿರುವ ಸಂಗತಿಗಳನ್ನು ತನ್ನ ಸೇವಕರಿಗೆ ತೋರಿಸಲು ದೇವರು ತನ್ನ ದೂತನನ್ನು ಕಳುಹಿಸಿದ್ದಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತನ್ನಾ ದೆವಾಚ್ಯಾ ದುತಾನ್ ಮಾಕಾ,“ಹ್ಯಾ ಗೊಸ್ಟಿಯಾ ಖರ್‍ಯಾ ಅನಿ ಬರೊಸೊ ಕರುಕ್ ಯೊಗ್ಯ್ ಹಾತ್. ಸರ್ವೆಸ್ವರ್ ದೆವಾನ್ ಪ್ರವಾದ್ಯಾಕ್ನಿ ಪವಿತ್ರ್ ಆತ್ಮೊ ದಿಲ್ಲ್ಯಾನ್, ಅಪ್ನಾಚ್ಯಾ ಸೆವಕಾಕ್ನಿ ಲಗ್ಗುನಾಚ್ ಕಾಯ್ ಘಡ್ನಾರ್ ಹಾಯ್ ಮನುನ್ ದಾಕ್ವುಸಾಟ್ನಿ ಅಪ್ನಾಚ್ಯಾ ದೆವ್‍ದುತಾಕ್ ಧಾಡುನ್ ದಿಲ್ಯಾನಾಯ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:6
26 ತಿಳಿವುಗಳ ಹೋಲಿಕೆ  

ಇದು ಕ್ರಿಸ್ತ ಯೇಸುವಿನ ಪ್ರಕಟನೆ. ಶೀಘ್ರವೇ ಸಂಭವಿಸಲಿಕ್ಕಿರುವ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದರು. ಇದಲ್ಲದೆ ದೇವರು ತಮ್ಮ ದೇವದೂತನನ್ನು ಕಳುಹಿಸಿ, ಅವನ ಮುಖಾಂತರ ಆ ಸಂಗತಿಗಳನ್ನು ತಮ್ಮ ದಾಸನಾದ ಯೋಹಾನನಿಗೆ ತಿಳಿಸಿದರು.


ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಇಗೋ, ನಾನು ಎಲ್ಲವನ್ನೂ ನೂತನಗೊಳಿಸುತ್ತೇನೆ!” ಎಂದರು ಮತ್ತು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ ಸತ್ಯವಾದವೂ ಆಗಿವೆ!” ಎಂದು ಹೇಳಿದನು.


ಇದಲ್ಲದೆ ಅವನು ನನಗೆ, “ಕುರಿಮರಿ ಆಗಿರುವವರ ವಿವಾಹದ ಔತಣಕ್ಕೆ ಕರೆಯಲಾದವರು ಧನ್ಯರು ಮತ್ತು ಅವರು ಹೀಗೆ ಹೇಳಿದರು, ದೇವರ ಈ ಮಾತುಗಳು ಸತ್ಯವಾಗಿವೆ!” ಎಂದನು.


ಯಾವ ಪ್ರವಾದನೆಯೂ ಎಂದೂ ಮನುಷ್ಯನ ಚಿತ್ತದಿಂದ ಬರಲಿಲ್ಲ, ಆದರೆ ಪ್ರವಾದಿಗಳು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಪಡೆದುಕೊಂಡಿದ್ದನ್ನೇ ಮಾತನಾಡಿದರು.


ಆದರೆ ತಮ್ಮ ಕ್ರಿಸ್ತ ಯೇಸು ಹಿಂಸೆಗೊಳಗಾಗಬೇಕೆಂದು, ಎಲ್ಲಾ ಪ್ರವಾದಿಗಳ ಬಾಯಿಯ ಮುಖಾಂತರ ದೇವರು ಮುಂತಿಳಿಸಿದ್ದನ್ನು ಈ ರೀತಿ ನೆರವೇರಿಸಿದರು.


“ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”


ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ನಮಗೆ ಕರ್ತ ಹಾಗೂ ರಕ್ಷಕ ಆಗಿರುವವರು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ಬಯಸುತ್ತೇನೆ.


ಇದು ಮಾತ್ರವಲ್ಲದೆ, ನಮ್ಮನ್ನು ಶಿಕ್ಷಿಸಿದ ಇಹಲೋಕದ ಶಾರೀರಿಕ ತಂದೆಗಳನ್ನು ನಾವು ಸನ್ಮಾನಿಸಿದೆವಷ್ಟೆ. ಆತ್ಮಗಳಿಗೆ ತಂದೆಯಾದ ದೇವರಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?


ದೇವರು ಮುಂಚಿತವಾಗಿ ಪವಿತ್ರ ವೇದಗಳಲ್ಲಿ ತಮ್ಮ ಪ್ರವಾದಿಗಳ ಮೂಲಕ ವಾಗ್ದಾನಮಾಡಿದ,


ಆಗ, “ಇಗೋ, ಬೇಗನೆ ಬರುತ್ತೇನೆ! ಈ ಗ್ರಂಥದ ಪ್ರವಾದನಾ ವಾಕ್ಯಗಳನ್ನು ಕೈಗೊಂಡು ನಡೆಯುವವರು ಧನ್ಯರು,” ಎಂದು ಕರ್ತ ಆಗಿರುವ ಯೇಸು ಹೇಳಿದರು.


ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿವೆ.


ಮನುಷ್ಯಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಪಾಪಕ್ಕೆ ಆತಂಕವಾದ ಎಲ್ಲವನ್ನೂ, ಕೇಡುಮಾಡುವ ಎಲ್ಲರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ,


ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದುದರಿಂದ, ಆ ಕಾರ್ಯವು ದೇವರಿಂದ ಸ್ಥಿರಪಡಿಸಲಾಗಿದೆ. ಆದ್ದರಿಂದ ದೇವರು ಅದನ್ನು ಬೇಗನೆ ನೆರವೇರಿಸುವರು.


“ಮೋಶೆಯ ನಿಯಮವೂ ಪ್ರವಾದನೆಗಳೂ ಯೋಹಾನನವರೆಗೆ ಇದ್ದವು. ಅಂದಿನಿಂದ, ದೇವರ ರಾಜ್ಯವು ಸಾರಲಾಗಿದೆ. ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಿದ್ದಾನೆ.


ನನ್ನ ದೇವರು ತಮ್ಮ ದೂತನನ್ನು ಕಳುಹಿಸಿ, ನನಗೆ ಯಾವ ಹಾನಿಯೂ ಆಗದಂತೆ ಸಿಂಹಗಳ ಬಾಯಿಗಳನ್ನು ಮುಚ್ಚಿಹಾಕಿದ್ದಾರೆ. ಏಕೆಂದರೆ ಅವರ ಮುಂದೆ ನಾನು ಯಥಾರ್ಥನೆಂದು ಗೋಚರವಾಗಿದ್ದೇನೆ. ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ತಪ್ಪನ್ನು ಮಾಡಲಿಲ್ಲ,” ಎಂದು ಹೇಳಿದನು.


ನೆಬೂಕದ್ನೆಚ್ಚರನು ಮಾತನಾಡಿ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ದೂತನನ್ನು ಕಳುಹಿಸಿ, ತಮ್ಮ ಸೇವಕರನ್ನು ರಕ್ಷಿಸಿದ್ದಾರೆ. ಅವರು ದೇವರಲ್ಲಿ ನಂಬಿಕೆ ಇಟ್ಟರು. ಅರಸನ ಆಜ್ಞೆಯನ್ನು ಮೀರಿದರು. ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ, ಆರಾಧಿಸದೆ ಇರುವ ಹಾಗೆ ತಮ್ಮ ಪ್ರಾಣಗಳನ್ನು ಕೊಡಲೂ ಸಿದ್ಧರಾದರು.


ಸಂಕಟ ಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರಿಗೆ ನ್ಯಾಯವಾಗಿದೆ. ನಮಗೆ ಕರ್ತ ಆಗಿರುವ ಯೇಸು ತಮ್ಮ ಶಕ್ತಿಯುತವಾದ ದೂತರೊಂದಿಗೆ ಪರಲೋಕದಿಂದ ಪ್ರಜ್ವಲಿಸುವ ಜ್ವಾಲೆಯಲ್ಲಿ ಪ್ರತ್ಯಕ್ಷರಾಗುವಾಗ ಇದಾಗುವುದು.


ಪ್ರಿಯರೇ, ಸಮಯವು ಕೊಂಚವಾಗಿರುವುದರಿಂದ ಇನ್ನು ಮೇಲೆ, ಮದುವೆಯಾದವರು ಮದುವೆಯಾಗದವರಂತೆಯೂ


ಆಗ ಪೇತ್ರನು ಸಂಪೂರ್ಣವಾಗಿ ಎಚ್ಚರಗೊಂಡು, “ಈಗ ಕರ್ತದೇವರು ತಮ್ಮ ದೂತನನ್ನು ಕಳುಹಿಸಿ ಹೆರೋದನ ಹಿಡಿತದಿಂದಲೂ ಯೆಹೂದ್ಯ ಜನರು ನಿರೀಕ್ಷಿಸುತ್ತಿದ್ದ ಎಲ್ಲಾ ಕೇಡಿನಿಂದಲೂ ನನ್ನನ್ನು ಉಳಿಸಿ ಕಾಪಾಡಿರುವರು ಎಂದು ಈಗ ನನಗೆ ಗೊತ್ತಾಗಿದೆ,” ಎಂದುಕೊಂಡನು.


ಇವುಗಳಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿದ್ದ ಒಂದು ದ್ವಾರವು ಕಾಣಿಸಿತು. ನನ್ನೊಂದಿಗೆ ತುತೂರಿಯ ಧ್ವನಿಯಂತೆ ಮಾತನಾಡಿದ, ನಾನು ಮೊದಲು ಕೇಳಿದ ಧ್ವನಿಯಿಂದ, “ಬಾ, ಮುಂದೆ ಸಂಭವಿಸಲಿಕ್ಕೆ ಇರುವವುಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.


ಅಂತಿಮ ಏಳು ಉಪದ್ರವಗಳಿಂದ ತುಂಬಿದ ಏಳು ಬೋಗುಣಿಗಳನ್ನು ಹಿಡಿದಿದ್ದ ಏಳುಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ, ಯಜ್ಞದ ಕುರಿಮರಿಯಾದವವರಿಗೆ ಹೆಂಡತಿಯಾಗತಕ್ಕ ವಧುವನ್ನು ನಿನಗೆ ತೋರಿಸುವೆನು!” ಎಂದು ಹೇಳಿ,


ಆಮೇಲೆ ದೂತನು ಸ್ಪಟಿಕದಂತೆ ಹೊಳೆಯುವ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಕುರಿಮರಿಯಾದವರ ಸಿಂಹಾಸನದಿಂದ ಹೊರಟು,


“ಯೇಸುವೆಂಬ ನಾನು ನಮ್ಮ ಸಭೆಗಳಲ್ಲಿ ಈ ಸಂಗತಿಗಳ ವಿಷಯವಾಗಿ ನಿಮಗೆ ಸಾಕ್ಷಿ ನೀಡುವಂತೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶದ ಕುಡಿ, ಅವನ ಸಂತತಿಯೂ ಉದಯದ ಪ್ರಕಾಶಮಾನ ತಾರೆಯೂ ಆಗಿದ್ದೇನೆ!” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು