Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:15 - ಕನ್ನಡ ಸಮಕಾಲಿಕ ಅನುವಾದ

15 ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ನೀನು ತಣ್ಣಗೂ ಇಲ್ಲ, ಬಿಸಿಯೂ ಇಲ್ಲ, ನೀನು ತಣ್ಣಗಾಗಲಿ, ಬಿಸಿಯಾಗಲಿ ಇದ್ದಿದ್ದರೆ ಚೆನ್ನಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿನ್ನ ಕೃತ್ಯಗಳನ್ನು ನಾನು ಬಲ್ಲೆ. ನೀನು ತಣ್ಣಗೂ ಇಲ್ಲ, ಬಿಸಿಯಾಗೂ ಇಲ್ಲ. ನೀನು ತಣ್ಣಗಾಗಲಿ, ಬಿಸಿಯಾಗಲಿ ಇದ್ದಿದ್ದರೆ ಚೆನ್ನಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿನ್ನ ಕೃತ್ಯಗಳನ್ನು ಬಲ್ಲೆನು; ನೀನು ತಣ್ಣಗೂ ಅಲ್ಲ, ಬೆಚ್ಚಗೂ ಅಲ್ಲ; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದರೆ ಒಳ್ಳೇದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನೀನು ಮಾಡುವುದೆಲ್ಲಾ ನನಗೆ ತಿಳಿದದೆ. ನೀನು ಬಿಸಿಯೂ ಇಲ್ಲ, ತಣ್ಣಗೂ ಇಲ್ಲ! ನೀನು ಬಿಸಿಯಾದರೂ ಇರಬೇಕಿತ್ತು ಅಥವಾ ತಣ್ಣಗಾದರೂ ಇರಬೇಕಿತ್ತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತಿಯಾ ಕಾಯ್ ಕರ್‍ಲೆ ಮನುನ್ ಮಾಕಾ ಗೊತ್ತ್ ಹಾಯ್. ತಿಯಾ ಹಿಕ್ಡಿ ಥಂಡ್‍ಬಿ ನ್ಹಯ್, ಹಿಕ್ಡಿ ಹುನ್‍ಬಿ ನ್ಹಯ್ ಮನುನ್ ಮಾಕಾ ಗೊತ್ತ್ ಹಾಯ್. ತಿಯಾ ಥಂಡುಚ್ ನಾಹೊಲ್ಯಾರ್ ಹುನ್ನುಚ್ ರ್‍ಹಾಲ್ಯಾರ್ ಬರೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:15
23 ತಿಳಿವುಗಳ ಹೋಲಿಕೆ  

ಉತ್ಸಾಹದಲ್ಲಿ ಆಲಸ್ಯರಾಗದೆ, ಆತ್ಮದಲ್ಲಿ ಬೆಂಕಿಯುಳ್ಳವರಾಗಿ ಕರ್ತನ ಸೇವೆಯನ್ನು ಮಾಡಿರಿ.


“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ.


ಅಂತಹ ವ್ಯಕ್ತಿ ಎರಡು ಮನಸ್ಸುಳ್ಳವನೂ ತನ್ನ ಮಾರ್ಗಗಳಲ್ಲೆಲ್ಲಾ ಚಂಚಲನೂ ಆಗಿದ್ದಾನೆ.


ಆಗ ಎಲೀಯನು ಸಕಲ ಜನರ ಬಳಿಗೆ ಬಂದು, “ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರವರೆಗೂ ನಿಂತುಕೊಂಡಿರುವಿರಿ? ಯೆಹೋವ ದೇವರು ದೇವರಾಗಿದ್ದರೆ, ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ, ಅವನನ್ನೇ ಹಿಂಬಾಲಿಸಿರಿ,” ಎಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.


ಆದರೂ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ ಎಂದು ನಿನ್ನ ವಿರುದ್ಧವಾಗಿ ಹೇಳುತ್ತೇನೆ.


ಅನ್ಯಾಯವು ಹೆಚ್ಚಾಗುವುದರಿಂದ ಬಹುಜನರ ಪ್ರೀತಿಯು ತಣ್ಣಗಾಗುವುದು.


ಮಗನೇ, ನಿನ್ನ ಮನಸ್ಸನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ಅನುಸರಿಸುವಲ್ಲಿ ನಿಮ್ಮ ಕಣ್ಣುಗಳು ಆನಂದಿಸಲಿ.


ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.


ನಿಮ್ಮ ಪ್ರೀತಿಯು ಹೆಚ್ಚುತ್ತಾ ಜ್ಞಾನದಲ್ಲಿಯೂ ಒಳನೋಟದಲ್ಲಿಯೂ ಬಹು ಹೆಚ್ಚಾಗಿ ಸಮೃದ್ಧಿಯಾಗಲಿ.


ನಾನು ಬಂದಾಗ ಒಂದು ವೇಳೆ ನೀವು ನನ್ನ ಮನಸ್ಸಿನ ತೋರಿಕೆಯ ಪ್ರಕಾರ ಇರುವುದಿಲ್ಲವೋ ಏನೋ? ನಾನು ನಿಮ್ಮ ಇಷ್ಟದ ಪ್ರಕಾರ ತೋರದೆ ಇರಬಹುದು. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ಕೋಪ, ಭೇದಗಳು, ಚಾಡಿ ಹೇಳುವುದು, ಹರಟೆ ಹೊಡೆಯುವುದು, ಉಬ್ಬಿಕೊಳ್ಳುವುದು, ಕಲಹ ಎಬ್ಬಿಸುವುದು, ಇವುಗಳು ಕಾಣಬರುವುದೋ ಎಂಬ ಭಯ ನನಗೆ ಉಂಟು.


“ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


ಅವರು ನನಗೆ ಭಯಪಟ್ಟು, ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಗೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು. ಆಗ ಅವರಿಗೂ, ಅವರ ಮಕ್ಕಳಿಗೂ ಎಂದೆಂದಿಗೂ ಒಳ್ಳೆಯದಾಗುವುದು.”


“ಸಾರ್ದಿಸಿನಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ದೇವರ ಏಳು ಆತ್ಮಗಳನ್ನೂ ಏಳು ನಕ್ಷತ್ರಗಳನ್ನೂ ಹಿಡಿದುಕೊಂಡಿರುವವರು ಹೇಳುವುದೇನೆಂದರೆ: ನಾನು ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ಸತ್ತವನಾಗಿದ್ದೀಯೆ.


ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ಪ್ರಯಾಸ, ಸಹನೆಯನ್ನು ಬಲ್ಲೆನು. ನೀನು ದುಷ್ಟರನ್ನು ಸಹಿಸಲಾರೆ. ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.


ಪ್ರಿಯರೇ, ನಾವು ಯಾವಾಗಲೂ ನಿಮಗಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ. ಹಾಗೆ ಮಾಡುವುದು ಯೋಗ್ಯ. ಏಕೆಂದರೆ ನಿಮ್ಮ ವಿಶ್ವಾಸವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುತ್ತಾ ಇದೆ ಮತ್ತು ಪರಸ್ಪರ ನಿಮ್ಮೆಲ್ಲರಲ್ಲಿ ಪ್ರೀತಿಯೂ ಹೆಚ್ಚುತ್ತಿದೆ.


ಅವರ ಹೃದಯವು ವಂಚಕವಾದದ್ದು. ಈಗ ಅವರು ಅಪರಾಧಗಳನ್ನು ಹೊರಬೇಕು. ಯೆಹೋವ ದೇವರು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವರು.


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ, ಅವನು ಶಾಪಗ್ರಸ್ತನಾಗಲಿ! ಕರ್ತನೇ, ಬಾ!


“ಎಫ್ರಾಯೀಮು ಜನಾಂಗಗಳೊಂದಿಗೆ ತನ್ನನ್ನು ಬೆರೆಸಿಕೊಂಡಿದೆ. ಎಫ್ರಾಯೀಮು ತಿರುವಿ ಹಾಕದ ರೊಟ್ಟಿಯಾಗಿದ್ದಾನೆ.


ನೀನು ಬಿಸಿಯಾಗಲೀ, ತಣ್ಣಗಾಗಲೀ ಇಲ್ಲದೆ ಉಗುರುಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಕಾರಿ ಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು