ಪ್ರಕಟನೆ 3:3 - ಕನ್ನಡ ಸಮಕಾಲಿಕ ಅನುವಾದ3 ಆದ್ದರಿಂದ ನೀನು ಹೊಂದಿದ ಉಪದೇಶವನ್ನೂ ಕೇಳಿದ ರೀತಿಯನ್ನೂ ಜ್ಞಾಪಿಸಿಕೊಂಡು, ಅದನ್ನು ಕೈಕೊಳ್ಳುವವನಾಗಿ ಪಶ್ಚಾತ್ತಾಪಪಡು, ನೀನು ಎಚ್ಚರವಾಗಿರದಿದ್ದರೆ, ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಎಂದು ನಿನಗೆ ಯಾವ ರೀತಿಯಲ್ಲಿಯೂ ತಿಳಿಯದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆ ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಿನಗೆ ಕೊಡಲಾದ ಬೋಧನೆಯನ್ನೂ ಅದನ್ನು ನೀನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೋ. ಅದರಂತೆ ನಡೆದು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಎಚ್ಚೆತ್ತುಕೊಳ್ಳದಿದ್ದರೆ ನಾನು ಕಳ್ಳನು ಬರುವಂತೆ ಬರುತ್ತೇನೆ. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಧಾಳಿಮಾಡುತ್ತೇನೆಂದೇ ನಿನಗೆ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆದದರಿಂದ ನೀನು ಹೊಂದಿದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೊಂಡು ಅದನ್ನು ಕಾಪಾಡಿಕೋ ಮತ್ತು ದೇವರ ಕಡೆಗೆ ತಿರುಗಿಕೋ. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯುವದೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದ್ದರಿಂದ ನೀನು ಸ್ವೀಕರಿಸಿಕೊಂಡ ಮತ್ತು ಕೇಳಿದ ಉಪದೇಶವನ್ನು ಮರೆಯದೆ ಅದಕ್ಕೆ ವಿಧೇಯನಾಗಿರು. ನಿನ್ನ ಹೃದಯವನ್ನೂ ಜೀವಿತವನ್ನೂ ಪರಿವರ್ತಿಸಿಕೊ! ಎಚ್ಚರಗೊಳ್ಳು! ಇಲ್ಲವಾದರೆ, ನಾನು ಕಳ್ಳನಂತೆ ನಿನ್ನ ಬಳಿಗೆ ಬಂದು ಆಶ್ಚರ್ಯಗೊಳಿಸುತ್ತೇನೆ. ನಾನು ಯಾವಾಗ ಬರುತ್ತೇನೆ ಎಂಬುದು ನಿನಗೆ ಗೊತ್ತಿರುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತಸೆಮನುನ್ ತುಕಾ ಕಾಯ್ ಶಿಕ್ವುನ್ ಹೊಲ್ಲೆ ಅನಿ ತಿಯಾ ಕಾಯ್ ಆಯ್ಕಲ್ಲೆ ತೆ ಯಾದ್ ಕರ್. ತೆಚ್ಯಾ ಸರ್ಕೆ ಚಲ್ ಅನಿ ತುಜ್ಯಾ ಪಾಪಾಚ್ಯಾ ಜಿವನಾತ್ನಾ ಫಾಟಿ ಪರತ್. ತಿಯಾ ಪಾಪಾನಿತ್ನಾ ಫಾಟಿ ಪರ್‍ತಿನಸ್ಲೆ ತರ್, ಮಿಯಾ ಚೊರಾಚ್ಯಾ ಸರ್ಕೆ ತುಜ್ಯಾ ಮದ್ದಿ ಯೆತಾ ಅನಿ ಮಿಯಾ ಕನ್ನಾ ಯೆತಾ ಮನ್ತಲೊ ಎಳ್ ತುಕಾ ಗೊತ್ತ್ ರ್‍ಹಾಯ್ನಾ. ಅಧ್ಯಾಯವನ್ನು ನೋಡಿ |