Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:5 - ಕನ್ನಡ ಸಮಕಾಲಿಕ ಅನುವಾದ

5 ಜಯಹೊಂದುವವರಿಗೆ ಹೀಗೆ ಬಿಳಿಯ ವಸ್ತ್ರಗಳನ್ನು ಹೊದಿಸಲಾಗುವುದು. ಅವರ ಹೆಸರನ್ನು ಜೀವಬಾಧ್ಯರ ಪಟ್ಟಿಯಿಂದ ನಾನು ಅಳಿಸಿಬಿಡದೆ, ಅವರ ಹೆಸರನ್ನು ನನ್ನ ತಂದೆಯ ಮುಂದೆಯೂ ಅವರ ದೂತರ ಮುಂದೆಯೂ ಅರಿಕೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಜಯಶಾಲಿಗೆ ಹೀಗೆ ಶುಭ್ರವಸ್ತ್ರಗಳನ್ನು ಹೊದಿಸುವರು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಬಿಡದೆ ಅವನು ನನ್ನವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಒಪ್ಪುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜಯಗಳಿಸುವ ಪ್ರತಿಯೊಬ್ಬನೂ ಈ ಜನರಂತೆ ಬಿಳಿಯ ವಸ್ತ್ರಗಳನ್ನು ಧರಿಸುತ್ತಾನೆ. ಆ ವ್ಯಕ್ತಿಯ ಹೆಸರನ್ನು ನಾನು ಜೀವಭಾದ್ಯರ ಪುಸ್ತಕದಿಂದ ತೆಗೆದು ಹಾಕುವುದಿಲ್ಲ. ಅವನು ನನಗೆ ಸೇರಿದವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಜೆ ಕೊನ್ ಜಿಕುನ್ ಜಯ್ ಹೊತ್ಯಾತ್ ತೆಂಕಾ ಅಸೆ ಫಾಂಡ್ರೆ ಕಪ್ಡೆ ನೆಸ್ವುನ್ ಹೊತ್ಯಾತ್, ಅನಿ ಮಿಯಾ ಜಿವಾಚ್ಯಾ ಪುಸ್ತಕಾತ್ನಾ ತೆಂಚಿ ನಾವಾ ಪುಸುನ್ ಕಾಡಿನಾ. ಮಾಜ್ಯಾ ಬಾಬಾಚ್ಯಾ ಅನಿ ತ್ಯೆಚ್ಯಾ ದುತಾಂಚ್ಯಾ ಇದ್ರಾಕ್ ತಿ ಮಾಜಿ ಲೊಕಾ ಮನುನ್ ಕಾಯ್ಬಿ ಧಾಪಿನಸ್ತಾನಾ ಮಿಯಾ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:5
23 ತಿಳಿವುಗಳ ಹೋಲಿಕೆ  

“ಜನರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.


ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು.


ಯಾರ ಹೆಸರು ಜೀವ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವರನ್ನು ಬೆಂಕಿಯ ಕೆರೆಗೆ ದೊಬ್ಬಲಾಯಿತು.


“ಆದರೆ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬರನ್ನು, ಮನುಷ್ಯಪುತ್ರನಾದ ನಾನು ಸಹ ದೇವದೂತರ ಮುಂದೆ ನನ್ನವರೆಂದು ಒಪ್ಪಿಕೊಳ್ಳುವೆನು.


ನೀನು ಕಂಡ ಮೃಗವು ಒಮ್ಮೆ ಇತ್ತು, ಈಗ ಇಲ್ಲ, ಪಾತಾಳದೊಳಗಿನಿಂದ ಮೇಲೆ ಬಂದು ವಿನಾಶಕ್ಕೆ ಹೊರಡಲಿದೆ. ಲೋಕದ ಸೃಷ್ಟಿಯಾದ ದಿನದಿಂದ ಯಾರ ಯಾರ ಹೆಸರುಗಳು ಜೀವಗ್ರಂಥದಲ್ಲಿ ಬರೆದಿರುವುದಿಲ್ಲವೋ, ಆ ಭೂನಿವಾಸಿಗಳು ಮೃಗವನ್ನು ನೋಡಿ ಆ ಮೃಗವು ಹಿಂದೆ ಇತ್ತು, ಈಗ ಇಲ್ಲ, ಇನ್ನು ಮೇಲೆ ಬರಲಿದೆ ಎಂದು ಆಶ್ಚರ್ಯಗೊಳ್ಳುವರು.


ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


ಜೀವಪುಸ್ತಕದೊಳಗಿಂದ ಅವರ ಹೆಸರು ಅಳಿದು ಹೋಗಲಿ. ನೀತಿವಂತರ ಸಂಗಡ ಅವರ ಹೆಸರು ಬರೆಯದೆ ಇರಲಿ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು, ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ದೇವರ ಪರಲೋಕದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನಲು ಕೊಡುವೆನು.


ಜೀವಗ್ರಂಥದಲ್ಲಿ ಹೆಸರು ಬರೆದಿರುವ ಕ್ಲೇಮೆನ್ಸ್ ಮುಂತಾದ ನನ್ನ ಜೊತೆ ಕೆಲಸದವರೊಡನೆ ನನ್ನೊಂದಿಗೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟ ಆ ಸ್ತ್ರೀಯರಿಗೆ ನೀನೂ ಸಹಾಯಕನಾಗಿರಬೇಕೆಂದು ನಿಜ ಜೊತೆಗಾರನೇ, ನಿನ್ನನ್ನೂ ಕೇಳಿಕೊಳ್ಳುತ್ತೇನೆ.


ಪ್ರಕಾಶಮಾನವೂ ನಿರ್ಮಲವೂ ಆದ ನಯವಾದ ನಾರುಮಡಿಯನ್ನು ತೊಟ್ಟುಕೊಳ್ಳುವುದಕ್ಕೆ ಆಕೆಗೆ ಅನುಗ್ರಹಿಸಲಾಗಿತ್ತು. ಏಕೆಂದರೆ ಆ ನಾರುಮಡಿಯು ಪರಿಶುದ್ಧರ ನೀತಿಕೃತ್ಯಗಳೇ.


“ನಾನು ನನ್ನ ಅಮೂಲ್ಯ ಸೊತ್ತನ್ನು ಸೇರಿಸಿಕೊಳ್ಳುವ ಆ ದಿವಸದಲ್ಲಿ ಅವರು ನನ್ನವರಾಗಿರುವರು. ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ, ಅವರನ್ನು ಕನಿಕರಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಯಾರಾದರೂ ಈ ಪ್ರವಾದನಾ ಗ್ರಂಥದಲ್ಲಿರುವ ಮಾತುಗಳನ್ನು ತೆಗೆದುಬಿಟ್ಟರೆ, ಈ ಗ್ರಂಥದಲ್ಲಿ ಬರೆದಿರುವ ಜೀವವೃಕ್ಷದಲ್ಲಿಯೂ ಪವಿತ್ರ ನಗರದಲ್ಲಿಯೂ ಅವರಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು.


ಆದರೂ ತಮ್ಮ ವಸ್ತ್ರಗಳನ್ನು ಮೈಲಿಗೆ ಮಾಡಿಕೊಳ್ಳದಿರುವ ಕೆಲವು ಜನರು ಸಾರ್ದಿಸಿ ಪಟ್ಟಣದಲ್ಲಿ ಇದ್ದಾರೆ, ಅವರು ಯೋಗ್ಯರಾಗಿರುವುದರಿಂದ ಬಿಳಿವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವುದಕ್ಕೂ ತಮ್ಮ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ಅತ್ಯಂತ ಹರ್ಷದೊಡನೆ ನಿರ್ದೋಷಿಗಳನ್ನಾಗಿ ನಿಲ್ಲಿಸುವುದಕ್ಕೂ ಶಕ್ತರಾಗಿರುವ


ಅವನ ಸಂತಾನವು ಮುಗಿದು ಹೋಗಲಿ; ಎರಡನೆಯ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.


ಇಸ್ರಾಯೇಲರು, “ಏರಿ ಬಂದ ಈ ಮನುಷ್ಯನನ್ನು ಕಂಡಿರೋ? ಇಸ್ರಾಯೇಲನ್ನು ಪ್ರತಿಭಟಿಸಿ ಏರಿ ಬಂದಿದ್ದಾನಲ್ಲ. ಯಾವನು ಇವನನ್ನು ಕೊಂದು ಬಿಡುವನೋ, ಅವನನ್ನು ಅರಸನು ಬಹಳ ಐಶ್ವರ್ಯವಂತನನ್ನಾಗಿ ಮಾಡಿ, ಅವನಿಗೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡಿಸುವನು ಮತ್ತು ಅವನ ತಂದೆಯ ಮನೆಯನ್ನು ಇಸ್ರಾಯೇಲರಲ್ಲಿ ತೆರಿಗೆಯಿಂದ ವಿಮೋಚಿಸುವನು,” ಎಂದರು.


ನನ್ನನ್ನು ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು, ನಿಮ್ಮನ್ನು ಅವರಿಗಿಂತ ಬಲಿಷ್ಠವಾದ ಜನಾಂಗವಾಗಿ ಮಾಡುವೆನು,” ಎಂದು ಹೇಳಿದರು.


ಹೀಗಿದ್ದರೂ, ದೆವ್ವಗಳು ನಿಮಗೆ ಅಧೀನವಾಗಿವೆ ಎಂದು ಸಂತೋಷ ಪಡಬೇಡಿರಿ, ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಲಿಖಿತವಾಗಿವೆ ಎಂದು ಸಂತೋಷಿಸಿರಿ,” ಎಂದರು.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


ಯಾರು ಜಯ ಹೊಂದುತ್ತಾರೋ, ಅವರನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಸ್ಥಾಪಿಸುವೆನು. ಅವರು ಎಂದಿಗೂ ಅದರೊಳಗಿಂದ ಹೊರಗೆ ಹೋಗುವುದಿಲ್ಲ. ನಾನು ನನ್ನ ದೇವರ ಹೆಸರನ್ನು ಪರಲೋಕದಲ್ಲಿರುವ ನನ್ನ ದೇವರಿಂದ ಇಳಿದು ಬರುವ ಹೊಸ ಯೆರೂಸಲೇಮಿನ ಹೆಸರನ್ನೂ ಹಾಗೂ ನನ್ನ ಹೊಸ ಹೆಸರನ್ನೂ ಅವರ ಮೇಲೆ ಬರೆಯುವೆನು.


ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಬಿಳೀ ನಿಲುವಂಗಿಯು ಕೊಡಲಾಗಿತ್ತು. ಇನ್ನು ಸ್ವಲ್ಪಕಾಲ ಅವರಂತೆಯೇ ವಧಿಸಲಾಗಬೇಕಾಗಿರುವ ಅವರ ಜೊತೆ ಸೇವಕರ ಮತ್ತು ಸಹೋದರರ ಸಂಖ್ಯೆ ಪೂರ್ಣಗೊಳ್ಳುವ ತನಕ ಕಾದಿರಬೇಕೆಂದು ಅವರಿಗೆ ಹೇಳಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು