Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 4:4 - ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ಸಿಂಹಾಸನದ ಸುತ್ತ ಇತರ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಬಿಳಿವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಬಂಗಾರದ ಕಿರೀಟಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದಲ್ಲದೆ ಸಿಂಹಾಸನದ ಸುತ್ತಲು ಇಪ್ಪತ್ತುನಾಲ್ಕು ಸಿಂಹಾಸನಗಳಿದ್ದವು; ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತುನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತುಕೊಂಡಿದ್ದರು. ಅವರು ಬಿಳಿ ವಸ್ತ್ರಗಳನ್ನು ಧರಿಸಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಸಿವಾಸನಾಚ್ಯಾ ಭೊತ್ಯಾನಿ ಅನಿ ಇಸಾರ್-ಚಾರ್ ಸಿವಾಸನಾ ಹೊತ್ತಿ. ತ್ಯಾ ಸಿವಾಸನಾಂಚ್ಯಾ ವೈನಿ ಇಸಾರ್-ಚಾರ್ ಜಾನ್ತಿ ಲೊಕಾ ಫಾಂಡ್ರೆ ಕಪ್ಡೆ ನೆಸುನ್ ಟಕ್ಲ್ಯಾ ವೈನಿ ಸೊನ್ಯಾಚಿ ಮುಕುಟ್ ಘಾಲುನ್ ಘೆವ್ನ್ ಬಸಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 4:4
24 ತಿಳಿವುಗಳ ಹೋಲಿಕೆ  

ತರುವಾಯ ದೇವರ ಸನ್ನಿಧಿಯಲ್ಲಿ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ದೇವರಿಗೆ ಅಡ್ಡಬಿದ್ದು,


ಯೇಸು ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸಮಸ್ತವೂ ನವೀಕರಣವಾಗುವಾಗ, ಮನುಷ್ಯಪುತ್ರನಾದ ನಾನು ನನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಂಡಿರಲು, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯತೀರಿಸುವಿರಿ.


ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಆಸೀನರಾದವರ ಎದುರಿಗೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ,


ಸಿಂಹಾಸನ, ಹಿರಿಯರು ಮತ್ತು ನಾಲ್ಕು ಜೀವಿಗಳ ಸುತ್ತಲೂ ದೇವದೂತರು ನಿಂತಿದ್ದರು. ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು ದೇವರನ್ನು ಆರಾಧಿಸಿ,


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.


ಆಗ ನಾಲ್ಕು ಜೀವಿಗಳು, “ಆಮೆನ್,” ಎಂದವು. ಹಿರಿಯರು ಅಡ್ಡಬಿದ್ದು ಆರಾಧಿಸಿದರು.


ಸುರುಳಿಯನ್ನು ತೆಗೆದುಕೊಂಡಾಗ, ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿ ಆಗಿರುವವರ ಮುಂದೆ ಅಡ್ಡಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ಊಟಮಾಡಿ ಪಾನೀಯವನ್ನು ಸೇವಿಸುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು.


ಆಗ ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು, ಸಿಂಹಾಸನದ ಮೇಲೆ ಕುಳಿತಿರುವ ದೇವರನ್ನು ಆರಾಧಿಸಿ: “ಆಮೆನ್, ಹಲ್ಲೆಲೂಯಾ!” ಎಂದರು.


ಇದಾದನಂತರ ಯಾರೂ ಎಣಿಸಲಾಗದಂಥ ಮಹಾ ಜನಸಮೂಹವನ್ನು ಕಂಡೆನು. ಅವರು ಪ್ರತಿ ರಾಷ್ಟ್ರ, ಕುಲ, ಜನ ಮತ್ತು ಭಾಷೆಯವರಾಗಿದ್ದು, ಯಜ್ಞದ ಕುರಿಮರಿ ಆಗಿರುವವರ ಮುಂದೆಯೂ ಸಿಂಹಾಸನದ ಮುಂದೆಯೂ ನಿಂತಿದ್ದರು. ಅವರು ಬಿಳಿ ನಿಲುವಂಗಿಗಳನ್ನು ಧರಿಸಿದ್ದವರಾಗಿ, ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ನೀವು ಉತ್ತಮ ಆಶೀರ್ವಾದಗಳಿಂದ ಅರಸನನ್ನು ಸ್ವಾಗತಿಸಿದ್ದೀರಿ; ಚೊಕ್ಕ ಬಂಗಾರದ ಕಿರೀಟವನ್ನು ಆತನ ತಲೆಯ ಮೇಲಿಟ್ಟಿದ್ದೀರಿ.


ಪರಲೋಕದ ಸೈನ್ಯದವರು ಶುಭ್ರ ಹಾಗೂ ಬಿಳಿಯ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳಿಯ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದರು.


ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಬಿಳೀ ನಿಲುವಂಗಿಯು ಕೊಡಲಾಗಿತ್ತು. ಇನ್ನು ಸ್ವಲ್ಪಕಾಲ ಅವರಂತೆಯೇ ವಧಿಸಲಾಗಬೇಕಾಗಿರುವ ಅವರ ಜೊತೆ ಸೇವಕರ ಮತ್ತು ಸಹೋದರರ ಸಂಖ್ಯೆ ಪೂರ್ಣಗೊಳ್ಳುವ ತನಕ ಕಾದಿರಬೇಕೆಂದು ಅವರಿಗೆ ಹೇಳಲಾಯಿತು.


ಆ ಮಿಡತೆಗಳು ಯುದ್ಧಕ್ಕೆ ಸನ್ನದ್ಧವಾದ ಕುದುರೆಗಳಂತಿದ್ದವು. ಅವುಗಳ ತಲೆಯ ಮೇಲೆ ಚಿನ್ನದಂತಿರುವ ಕಿರೀಟಗಳಿದ್ದವು. ಅವುಗಳ ಮುಖವು ಮಾನವರ ಮುಖಗಳಂತೆ ಇದ್ದವು.


ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಮೊರ್ದೆಕೈ ಶುಭ್ರವಾದ ನೀಲ ರಾಜವಸ್ತ್ರವನ್ನು ಧರಿಸಿ, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣವುಳ್ಳ ನಯವಾದ ನಾರಿನ ಶಾಲನ್ನು ಹೊದ್ದುಕೊಂಡು ಅರಸನ ಸಮ್ಮುಖದಿಂದ ಹೊರಟುಹೋದನು. ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.


ನೀನು ಸಿರಿವಂತನಾಗುವಂತೆ ಬೆಂಕಿಯಲ್ಲಿ ಪುಟಕ್ಕೆ ಹಾಕಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳಿ ವಸ್ತ್ರಗಳನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಮುಲಾಮನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.


ಇದಲ್ಲದೆ ಸಿಂಹಾಸನದ ಮುಂದೆ ಸ್ಪಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ, ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.


ಆಗ ನಾನು, ಸಿಂಹಾಸನದ ಮಧ್ಯದಲ್ಲಿಯೂ ನಾಲ್ಕು ಜೀವಿಗಳು ಮತ್ತು ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ಬಲಿಗೋಸ್ಕರ ವಧೆಯಾಗಿದ್ದಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಭೂಮಿಯ ಮೇಲೆಲ್ಲಾ ಕಳುಹಿಸಲಾದ ದೇವರ ಏಳು ಆತ್ಮಗಳು.


ಇದಲ್ಲದೆ ನಾನು ನೋಡಲಾಗಿ, ಸಿಂಹಾಸನದ ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.


ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸಹಾಡನ್ನು ಹಾಡಿದರು. ಭೂಲೋಕದೊಳಗಿಂದ ಕೊಂಡುಕೊಳ್ಳಲಾದ ಆ ಒಂದು ಲಕ್ಷ ನಲವತ್ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು