Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 5:11 - ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ನಾನು ನೋಡಲಾಗಿ, ಸಿಂಹಾಸನದ ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅನಂತರ ಅವರ ಸಿಂಹಾಸನದ, ನಾಲ್ಕು ಜೀವಿಗಳ ಹಾಗೂ ಸಭಾಪ್ರಮುಖರ ಸುತ್ತಲೂ ನಿಂತಿದ್ದ ಬಹುಮಂದಿ ದೇವದೂತರ ಸ್ವರವನ್ನು ಕೇಳಿಸಿಕೊಂಡೆ. ಅವರ ಸಂಖ್ಯೆ ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಸಿಂಹಾಸನವು ಜೀವಿಗಳು ಹಿರಿಯರು ಇವರ ಸುತ್ತಲು ಬಹು ಮಂದಿ ದೇವದೂತರನ್ನು ಕಂಡೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಂತರ ನಾನು ನೋಡಿದಾಗ, ಅನೇಕ ದೇವದೂತರ ಧ್ವನಿಗಳನ್ನು ಕೇಳಿದೆನು. ಈ ದೇವದೂತರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸುತ್ತಲೂ ಇದ್ದರು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನು ಕೋಟಿಯಾಗಿಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅನಿ ಮಾಕಾ ಹಜಾರಾನ್ ಅನಿ ಕರೊಡಾನ್ ದೆವ್‍ದುತಾ ದಿಸ್ಲಿ, ತೆಂಚೊ ಅವಾಜ್ ಮಿಯಾ ಆಯಿಕ್ಲೊ, ತಿ ಸಗ್ಳಿ ದೆವ್‍ದುತಾ ಸಿವಾಸನಾಚ್ಯಾ ಭೊತ್ಯಾನಿ ಇಬೆ ಹೊತ್ತಿ. ತ್ಯಾ ಚಾರ್ ಸಾವ್ಜಾನಿ ಅನಿ ತ್ಯಾ ಜಾನ್ತ್ಯಾ ಲೊಕಾನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 5:11
18 ತಿಳಿವುಗಳ ಹೋಲಿಕೆ  

ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟುಬಂದು, ಸಹಸ್ರ ಸಹಸ್ರವಾಗಿ ಆತನಿಗೆ ಸೇವೆ ಮಾಡಿದವು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದವು. ನ್ಯಾಯ ಸಭೆಯು ಕುಳಿತಿತ್ತು ಮತ್ತು ಪುಸ್ತಕಗಳು ತೆರೆದಿದ್ದವು.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ


ಇದಲ್ಲದೆ ಸಿಂಹಾಸನದ ಮುಂದೆ ಸ್ಪಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ, ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.


ಇದಲ್ಲದೆ ಸಿಂಹಾಸನದ ಸುತ್ತ ಇತರ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಬಿಳಿವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಬಂಗಾರದ ಕಿರೀಟಗಳಿದ್ದವು.


ದೇವರ ದೂತರುಗಳೇ, ದೇವರನ್ನು ಸ್ತುತಿಸಿರಿ; ದೇವರ ಪರಲೋಕದ ಎಲ್ಲಾ ಸೈನ್ಯಗಳೇ, ದೇವರನ್ನು ಸ್ತುತಿಸಿರಿ.


ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತ ಆಗಿರುವ ಯೆಹೋವ ದೇವರು ಅವುಗಳ ಸಮೇತವಾಗಿ ಸೀನಾಯಿ ಬೆಟ್ಟದಲ್ಲಿದ್ದ ಹಾಗೆ ಪವಿತ್ರಾಲಯದಲ್ಲಿದ್ದಾರೆ.


ತರುವಾಯ ಜನರ ದೊಡ್ಡ ಗುಂಪಿನ ಶಬ್ದವನ್ನು ಕೇಳಿದೆನು. ಅದು ಹೀಗೆ ಹೇಳಿತು: “ಹಲ್ಲೆಲೂಯಾ! ಸರ್ವಶಕ್ತ ಆಗಿರುವ ನಮ್ಮ ಕರ್ತದೇವರು ಆಳುತ್ತಾರೆ.


ಸಿಂಹಾಸನ, ಹಿರಿಯರು ಮತ್ತು ನಾಲ್ಕು ಜೀವಿಗಳ ಸುತ್ತಲೂ ದೇವದೂತರು ನಿಂತಿದ್ದರು. ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು ದೇವರನ್ನು ಆರಾಧಿಸಿ,


ಆಗ ನಾಲ್ಕು ಜೀವಿಗಳು, “ಆಮೆನ್,” ಎಂದವು. ಹಿರಿಯರು ಅಡ್ಡಬಿದ್ದು ಆರಾಧಿಸಿದರು.


ಆಗ ನಾನು, ಸಿಂಹಾಸನದ ಮಧ್ಯದಲ್ಲಿಯೂ ನಾಲ್ಕು ಜೀವಿಗಳು ಮತ್ತು ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ಬಲಿಗೋಸ್ಕರ ವಧೆಯಾಗಿದ್ದಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಭೂಮಿಯ ಮೇಲೆಲ್ಲಾ ಕಳುಹಿಸಲಾದ ದೇವರ ಏಳು ಆತ್ಮಗಳು.


ಆಗ ಮೀಕಾಯನು, “ಆದ್ದರಿಂದ ಯೆಹೋವ ದೇವರ ವಾಕ್ಯವನ್ನು ಕೇಳು: ಯೆಹೋವ ದೇವರು ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡಿರುವುದನ್ನೂ ಆಕಾಶದ ಸಮಸ್ತ ಸೈನ್ಯವು ಅವರ ಬಲಗಡೆ, ಎಡಗಡೆ ಮತ್ತು ಸುತ್ತಲೂ ನಿಂತಿರುವುದನ್ನೂ ನಾನು ಕಂಡೆನು.


ದೇವರ ದೂತರೇ, ಅವರ ಮಾತನ್ನು ಕೇಳಿ, ಅವರಿಗೆ ವಿಧೇಯರಾಗುವ ಪರಾಕ್ರಮಿಗಳೇ, ಯೆಹೋವ ದೇವರನ್ನು ಸ್ತುತಿಸಿರಿ.


“ಯೆಹೋವ ದೇವರು ಸೀನಾಯಿ ಬೆಟ್ಟದಿಂದ ಬಂದು, ಸೇಯೀರಿನಿಂದ ಅವರ ಮೇಲೆ ಉದಯಿಸಿದರು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದರು. ದೇವರು ದಕ್ಷಿಣದ ತಮ್ಮ ಪರ್ವತ ಶ್ರೇಣಿಯಿಂದ ಲಕ್ಷಾಂತರ ಪರಿಶುದ್ಧರ ಸಂಗಡ ಬಂದರು.


ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ, “ಇಗೋ, ಕರ್ತದೇವರು ತಮ್ಮ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು


ಸುರುಳಿಯನ್ನು ತೆಗೆದುಕೊಂಡಾಗ, ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿ ಆಗಿರುವವರ ಮುಂದೆ ಅಡ್ಡಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಕುದುರೆ ಸೈನಿಕರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನನಗೆ ಕೇಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು