Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 5:12 - ಕನ್ನಡ ಸಮಕಾಲಿಕ ಅನುವಾದ

12 ಅವರು, ಮಹಾಧ್ವನಿಯಿಂದ: “ವಧಿತರಾದ ಕುರಿಮರಿ ಆಗಿರುವವರು ಶಕ್ತಿ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಗೌರವ, ಮಹಿಮೆ, ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯರು!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರೆಲ್ಲರೂ ಉಚ್ಚಕಂಠದಿಂದ : “ವಧಿತ ಕುರಿಮರಿಯಾದಾತನು ಶಕ್ತಿಯನು, ಸಿರಿತನವನು ಗೌರವವನು, ಘನಮಾನವನು ಸ್ತುತಿಯನು, ಸುಜ್ಞಾನವನು ಹೊಂದಲು ಯೋಗ್ಯನು,” ಎಂದು ಹಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರ ಸ್ವರವು ನನಗೆ ಕೇಳಿಸಿತು; ಅವರು ಮಹಾ ಶಬ್ದದಿಂದ - ವಧಿತನಾದ ಕುರಿಯಾದಾತನು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನ ಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈ ದೇವದೂತರು ಗಟ್ಟಿಯಾದ ಧ್ವನಿಯಿಂದ ಇಂತೆಂದರು: “ವಧಿತನಾದ ಕುರಿಮರಿಯು ಅಧಿಕಾರವನ್ನು, ಸಂಪತ್ತನ್ನು, ಜ್ಞಾನವನ್ನು, ಬಲವನ್ನು, ಗೌರವವನ್ನು, ಪ್ರಭಾವವನ್ನು, ಸ್ತೋತ್ರವನ್ನು ಪಡೆಯಲು ಯೋಗ್ಯನಾಗಿದ್ದಾನೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಿಳುನ್ ಮೊಟ್ಯಾನ್ ಎಕ್ ಗಿತ್ ಗಾವ್ಲ್ಯಾನಿ; ಅದ್ದಿ ಎಗ್ದಾ ಜಿವಾನಿ ಮಾರಲ್ಲೆ ಬೊಕ್ಡು, ಅದಿಕಾರ್, ಆಸ್ತಿ, ಜ್ಞಾನ್, ಅನಿ ತಾಕತ್, ಮಾನ್, ಮಹಿಮಾ ಅನಿ ಸುತ್ತಿ ಗಾವುಕ್ ಯೊಗ್ಯ್ ಹಾಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 5:12
19 ತಿಳಿವುಗಳ ಹೋಲಿಕೆ  

ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.


ಇವುಗಳಾದ ಮೇಲೆ ಪರಲೋಕದಲ್ಲಿ ದೊಡ್ಡ ಸಮೂಹದ ಮಹಾಸ್ವರವನ್ನು ಕೇಳಿದೆನು. ಅವರು: “ಹಲ್ಲೆಲೂಯಾ! ರಕ್ಷಣೆಯೂ ಮಹಿಮೆಯೂ ಶಕ್ತಿಯೂ ನಮ್ಮ ದೇವರದಾಗಿವೆ!


“ನಮ್ಮ ಕರ್ತ ಆಗಿರುವ ದೇವರೇ, ನೀವು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ಸಮಸ್ತವನ್ನು ಸೃಷ್ಟಿಸಿದವರು ನೀವೇ. ಎಲ್ಲವೂ ನಿಮ್ಮ ಚಿತ್ತದಿಂದಲೇ ನಿರ್ಮಿತವಾದವು, ನಿಮ್ಮ ಚಿತ್ತದಿಂದಲೇ ಇದ್ದವು,” ಎಂದು ಹೇಳುತ್ತಾ, ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಿದ್ದರು.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು.


“ಆಮೆನ್! ಸ್ತೋತ್ರ, ಮಹಿಮೆ, ಜ್ಞಾನ, ಕೃತಜ್ಞತೆ, ಗೌರವ, ಶಕ್ತಿ, ಬಲ ನಮ್ಮ ದೇವರಿಗೆ ಯುಗಯುಗಾಂತರಕ್ಕೂ ಉಂಟಾಗಲಿ. ಆಮೆನ್!” ಎಂದು ಹೇಳುತ್ತಿದ್ದರು.


ನೀವು ಎಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವಿರಿ.


ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.


ಆಗ ನಾನು, ಸಿಂಹಾಸನದ ಮಧ್ಯದಲ್ಲಿಯೂ ನಾಲ್ಕು ಜೀವಿಗಳು ಮತ್ತು ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ಬಲಿಗೋಸ್ಕರ ವಧೆಯಾಗಿದ್ದಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಭೂಮಿಯ ಮೇಲೆಲ್ಲಾ ಕಳುಹಿಸಲಾದ ದೇವರ ಏಳು ಆತ್ಮಗಳು.


ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,


ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


ಇದಲ್ಲದೆ ಆಕಾಶದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗಡೆಯೂ ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಹೀಗೆ ಹೇಳುವುದನ್ನು ಕೇಳಿದೆನು: “ಸಿಂಹಾಸನದ ಮೇಲೆ ಕುಳಿತಿರುವವರಿಗೂ ಕುರಿಮರಿ ಆಗಿರುವವರಿಗೂ ಸ್ತೋತ್ರ, ಗೌರವ, ಮಹಿಮೆ, ಶಕ್ತಿ, ಯುಗಯುಗಾಂತರಗಳಲ್ಲಿಯೂ ಇರಲಿ!”


ನಿತ್ಯವಾದ ಅರಸರೂ ಅಮರರೂ ಅದೃಶ್ಯರೂ ಆಗಿರುವ ಜ್ಞಾನಿಯಾದ ಒಬ್ಬರೇ ದೇವರಿಗೆ ಯುಗಯುಗಾಂತರಗಳಲ್ಲಿಯೂ ಘನವೂ ಮಹಿಮೆಯೂ ಉಂಟಾಗಲಿ. ಆಮೆನ್.


“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


ನಮ್ಮನ್ನು ಒಂದು ರಾಜ್ಯವನ್ನಾಗಿಯೂ ತಮ್ಮ ತಂದೆಯಾದ ದೇವರಿಗೆ ಸೇವೆ ಸಲ್ಲಿಸುವ ಯಾಜಕರನ್ನಾಗಿಯೂ ಮಾಡಿರುವ ಕ್ರಿಸ್ತ ಯೇಸುವಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು, ಬಲವು ಇರಲಿ ಆಮೆನ್.


ಸುರುಳಿಯನ್ನು ತೆಗೆದುಕೊಂಡಾಗ, ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿ ಆಗಿರುವವರ ಮುಂದೆ ಅಡ್ಡಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಏಳು ಮುದ್ರೆಗಳಲ್ಲಿ ಒಂದನ್ನು ಯಜ್ಞದ ಕುರಿಮರಿ ಆಗಿರುವವರು ತೆರೆಯುವುದನ್ನು ನಾನು ಕಂಡೆನು. ಆ ಜೀವಿಗಳಲ್ಲೊಂದು ಗುಡುಗಿನಂತಿದ್ದ ಶಬ್ದದಲ್ಲಿ, “ಬಾ!” ಎಂದು ಹೇಳುವುದನ್ನು ಕೇಳಿದೆನು.


ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು