ಪ್ರಕಟನೆ 5:8 - ಕನ್ನಡ ಸಮಕಾಲಿಕ ಅನುವಾದ8 ಸುರುಳಿಯನ್ನು ತೆಗೆದುಕೊಂಡಾಗ, ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿ ಆಗಿರುವವರ ಮುಂದೆ ಅಡ್ಡಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸುರುಳಿಯನ್ನು ತೆಗೆದುಕೊಂಡಾಗ, ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ಆ ಯಜ್ಞದ ಕುರಿಮರಿಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಸಭಾಪ್ರಮುಖರ ಕೈಗಳಲ್ಲಿ ಕಿನ್ನರಿಯೂ ಚಿನ್ನದ ಧೂಪಾರತಿಗಳೂ ಇದ್ದವು. ಆ ಧೂಪಾರತಿಗಳಲ್ಲಿ ದೇವಜನರ ಪ್ರಾರ್ಥನೆಯೆಂಬ ಧೂಪವು ತುಂಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತುನಾಲ್ಕು ಮಂದಿ ಹಿರಿಯರೂ ಯಜ್ಞದ ಕುರಿಯಾದಾತನ ಪಾದಕ್ಕೆ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ, ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಗ ನಾಲ್ಕು ಜೀವಿಗಳು ಮತ್ತು ಇಪ್ಪತ್ನಾಲ್ಕು ಮಂದಿ ಹಿರಿಯರು ಆ ಕುರಿಮರಿಯ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. ಪ್ರತಿಯೊಬ್ಬರ ಕೈಯಲ್ಲೂ ಒಂದೊಂದು ತಂತಿವಾದ್ಯವಿತ್ತು. ಧೂಪವು ತುಂಬಿದ್ದ ಚಿನ್ನದ ಪಾತ್ರೆಗಳನ್ನು ಅವರು ಹಿಡಿದುಕೊಂಡಿದ್ದರು. ಪಾತ್ರೆಗಳು ದೇವರ ಪರಿಶುದ್ಧ ಜನರ ಪ್ರಾರ್ಥನೆಗಳಾಗಿದ್ದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತಿ ಸುಳ್ಳಿ ತೆನಿ ಹಾತಿತ್ ಘೆಟಲ್ಲ್ಯಾ ತನ್ನಾಚ್ ತಿ ಚಾರ್ ಸಾವ್ಜಾ ಅನಿ ಅನಿ ತಿ ಇಚಾರ್-ಚಾರ್ ಜಾನ್ತಿ ಲೊಕಾ ತ್ಯಾ ಬೊಕ್ಡಾಚ್ಯಾ ಇದ್ರಾಕ್ ಡಬ್ ಪಡ್ಲಿ. ಸಗ್ಳ್ಯಾಂಚ್ಯಾ ಹಾತಾತ್ನಿ ಎಕೆಕ್ ಹಾರ್ಪ್ ಅನಿ ದೆವಾಚ್ಯಾ ಲೊಕಾಂಚಿ ಮಾಗ್ನಿಯಾ ಮನ್ತಲಿ ದುಪ್ ಘಾಲ್ತಲಿ ಎಕೆಕ್ ಸೊನ್ಯಾಚಿ ಆಯ್ದಾನಾ ಹೊತ್ತಿ. ಅಧ್ಯಾಯವನ್ನು ನೋಡಿ |