Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 6:1 - ಕನ್ನಡ ಸಮಕಾಲಿಕ ಅನುವಾದ

1 ಏಳು ಮುದ್ರೆಗಳಲ್ಲಿ ಒಂದನ್ನು ಯಜ್ಞದ ಕುರಿಮರಿ ಆಗಿರುವವರು ತೆರೆಯುವುದನ್ನು ನಾನು ಕಂಡೆನು. ಆ ಜೀವಿಗಳಲ್ಲೊಂದು ಗುಡುಗಿನಂತಿದ್ದ ಶಬ್ದದಲ್ಲಿ, “ಬಾ!” ಎಂದು ಹೇಳುವುದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕುರಿಮರಿಯಾದಾತನು ಆ ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ನೋಡಿದೆನು ಮತ್ತು ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತಿದ್ದ ಸ್ವರದಿಂದ “ಬಾ!” ಎಂದು ಹೇಳುವುದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇದನ್ನೂ ನಾನು ಕಂಡೆ: ಯಜ್ಞದ ಕುರಿಮರಿಯಾದಾತನು ಏಳು ಮುದ್ರೆಗಳಲ್ಲಿ ಒಂದನ್ನು ಒಡೆದನು. ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಗುಡುಗಿನಂತಿದ್ದ ಸ್ವರದಿಂದ, “ಇಲ್ಲಿ ಬಾ,” ಎಂದು ಕರೆಯುವುದನ್ನು ನಾನು ಕೇಳಿಸಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಜ್ಞದ ಕುರಿಯಾದಾತನು ಆ ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ನೋಡಿದೆನು. ಮತ್ತು ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು - ಬಾ ಎಂದು ಗುಡುಗಿನಂತಿದ್ದ ಸ್ವರದಿಂದ ಹೇಳುವದನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಂತರ ಕುರಿಮರಿಯು ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ಗಮನಿಸಿದೆನು. ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತೆ ಮಾತನಾಡುವುದನ್ನು ನಾನು ಕೇಳಿದೆನು. ಅದು “ಬಾ!” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತನ್ನಾ ತ್ಯಾ ಬೊಕ್ಡಾನ್ ತ್ಯಾ ಸಾತ್ ಛಪ್ಪ್ಯಾನಿತ್ಲೊ ಎಕ್ ಛಪ್ಪೊ ಫೊಡುನ್ ಉಗಡಲ್ಲೆ ಮಿಯಾ ಬಗಟ್ಲೊ, ಅನಿ ತ್ಯಾ ಚಾರ್ ಸಾವ್ಜಾನಿತ್ಲ್ಯಾ ಎಕ್ ಸಾವ್ಜಾನ್ ಮೊಟ್ಯಾನ್ “ಯೆ!” ಮನುನ್ ಬೊಬ್ ಮಾರಲ್ಲೆ ಮಾಕಾ ಆಯ್ಕೊ ಯೆಲೆ, ತೊ ಅವಾಜ್ ಗುಡ್ಗುಡ್ಯಾಚ್ಯಾ ಅವಾಜಾ ಸರ್ಕೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 6:1
17 ತಿಳಿವುಗಳ ಹೋಲಿಕೆ  

ಸಿಂಹಾಸನದ ಮೇಲೆ ಕುಳಿತಿದ್ದವರ ಬಲಗೈಯಲ್ಲಿ ಒಂದು ಚರ್ಮದ ಸುರುಳಿಯನ್ನು ಕಂಡೆನು. ಅದರ ಒಳಗೂ ಹಿಂಭಾಗದಲ್ಲಿಯೂ ಬರೆಯಲಾಗಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.


ಕುರಿಮರಿ ಆಗಿರುವವರು ಮೂರನೆಯ ಮುದ್ರೆಯನ್ನು ತೆರೆದಾಗ, ಮೂರನೆಯ ಜೀವಿಯು, “ಬಾ” ಎಂದು ಹೇಳುವುದನ್ನು ಕೇಳಿದೆನು. ನಾನು ನೋಡಲು, ಕಪ್ಪಾದ ಒಂದು ಕುದುರೆಯನ್ನು ಕಂಡೆನು. ಅದರ ಸವಾರನು ತನ್ನ ಕೈಯಲ್ಲಿ ಒಂದು ತಕ್ಕಡಿಯನ್ನು ಹಿಡಿದಿದ್ದನು.


ತರುವಾಯ ಜನರ ದೊಡ್ಡ ಗುಂಪಿನ ಶಬ್ದವನ್ನು ಕೇಳಿದೆನು. ಅದು ಹೀಗೆ ಹೇಳಿತು: “ಹಲ್ಲೆಲೂಯಾ! ಸರ್ವಶಕ್ತ ಆಗಿರುವ ನಮ್ಮ ಕರ್ತದೇವರು ಆಳುತ್ತಾರೆ.


ಕುರಿಮರಿ ಆಗಿರುವವರು ನಾಲ್ಕನೆಯ ಮುದ್ರೆಯನ್ನು ಒಡೆದಾಗ, ನಾಲ್ಕನೆಯ ಜೀವಿಯು, “ಬಾ” ಎಂದು ಕರೆಯುವ ಧ್ವನಿಯನ್ನು ಕೇಳಿದೆನು.


ಇದಲ್ಲದೆ ಪರಲೋಕದಿಂದ ಜಲ ಪ್ರವಾಹದಂತೆಯೂ ಮಹಾ ಗುಡುಗಿನ ಶಬ್ದದಂತೆಯೂ ಇದ್ದ ಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ಕಿನ್ನರಿಗಳನ್ನು ನುಡಿಸುತ್ತಿರುವ ಕಿನ್ನರರ ಶಬ್ದದಂತಿತ್ತು.


ಆಗ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ ಮಿಂಚುಗಳೂ ಸಪ್ಪಳಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆಲಿಕಲ್ಲಿನ ಮಳೆಯೂ ಉಂಟಾದವು.


ಕುರಿಮರಿ ಆಗಿರುವವರು ಎರಡನೆಯ ಮುದ್ರೆಯನ್ನು ತೆರೆದಾಗ, ಎರಡನೆಯ ಜೀವಿಯು, “ಬಾ” ಎಂದು ಹೇಳುವುದನ್ನು ಕೇಳಿದೆನು.


ಏಕೆಂದರೆ ಕಂಡಿದ್ದನ್ನೂ ಕೇಳಿದ್ದನ್ನೂ ಕುರಿತು ನಾವು ಮಾತನಾಡದೆ ಇರಲಾರೆವು,” ಎಂದು ಉತ್ತರಕೊಟ್ಟರು.


ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,


ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಆ ಜೀವಿಗಳ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ ಹೀಗೆ ಹೇಳುತ್ತಿದ್ದವು: “ ‘ದೇವರು ಆಗಿರುವ ಕರ್ತ ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು, ಅವರು ಸರ್ವಶಕ್ತರು,’ ಗತಕಾಲ, ವರ್ತಮಾನ ಭವಿಷ್ಯತ್ಕಾಲಗಳಲ್ಲಿ ಇರುವವರು.”


ಸುರುಳಿಯನ್ನು ತೆಗೆದುಕೊಂಡಾಗ, ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿ ಆಗಿರುವವರ ಮುಂದೆ ಅಡ್ಡಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಅವರು, ಮಹಾಧ್ವನಿಯಿಂದ: “ವಧಿತರಾದ ಕುರಿಮರಿ ಆಗಿರುವವರು ಶಕ್ತಿ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಗೌರವ, ಮಹಿಮೆ, ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯರು!” ಎಂದು ಹೇಳಿದರು.


ಕುರಿಮರಿ ಆಗಿರುವವರು ಏಳನೆಯ ಮುದ್ರೆಯನ್ನು ಒಡೆದಾಗ ಪರಲೋಕದಲ್ಲಿ ಸುಮಾರು ಅರ್ಧ ತಾಸಿನವರೆಗೂ ನಿಶ್ಶಬ್ದವಿತ್ತು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು