Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 6:5 - ಕನ್ನಡ ಸಮಕಾಲಿಕ ಅನುವಾದ

5 ಕುರಿಮರಿ ಆಗಿರುವವರು ಮೂರನೆಯ ಮುದ್ರೆಯನ್ನು ತೆರೆದಾಗ, ಮೂರನೆಯ ಜೀವಿಯು, “ಬಾ” ಎಂದು ಹೇಳುವುದನ್ನು ಕೇಳಿದೆನು. ನಾನು ನೋಡಲು, ಕಪ್ಪಾದ ಒಂದು ಕುದುರೆಯನ್ನು ಕಂಡೆನು. ಅದರ ಸವಾರನು ತನ್ನ ಕೈಯಲ್ಲಿ ಒಂದು ತಕ್ಕಡಿಯನ್ನು ಹಿಡಿದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು “ಬಾ”! ಎಂದು ಹೇಳುವುದನ್ನು ಕೇಳಿದೆನು. ಆಗ, ನಾನು ನೋಡಲು ಇಗೋ, ನನಗೆ ಕಪ್ಪು ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ತಕ್ಕಡಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ಯಜ್ಞದ ಕುರಿಮರಿ ಮೂರನೆಯ ಮುದ್ರೆಯನ್ನು ಒಡೆದಾಗ, ಮೂರನೆಯ ಜೀವಿಯು, “ಇಲ್ಲಿ ಬಾ,” ಎಂದು ಕರೆಯುವುದನ್ನು ಕೇಳಿಸಿಕೊಂಡೆ. ಆಗ ಕಪ್ಪು ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ತಕ್ಕಡಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು - ಬಾ ಅನ್ನುವದನ್ನು ಕೇಳಿದೆನು. ಆಗ ಇಗೋ, ಕಪ್ಪು ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಕುರಿಮರಿಯು ಮೂರನೆಯ ಮುದ್ರೆಯನ್ನು ತೆಗೆಯಿತು. ಆಗ ಮೂರನೆಯ ಜೀವಿಯು, “ಬಾ” ಎಂದು ಹೇಳುವುದನ್ನು ನಾನು ಕೇಳಿದೆನು. ನಾನು ನೋಡಿದಾಗ, ನನ್ನ ಮುಂದೆ ಒಂದು ಕಪ್ಪು ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲಿದ್ದ ಸವಾರನು ತನ್ನ ಕೈಯಲ್ಲಿ ಎರಡು ತಕ್ಕಡಿಗಳನ್ನು ಹಿಡಿದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮಾನಾ ಬೊಕ್ಡಾನ್ ತಿನ್ವೆಚೊ ಛಪ್ಪೊ ಫೊಡ್ಲ್ಯಾನ್; ಅನಿ ತಿನ್ವೆಚ್ಯಾ ಸಾವ್ಜಾನ್, “ಯೆ!” ಮನುನ್ ಮನ್ತಲೆ ಮಿಯಾ ಆಯಿಕ್ಲೊ. ಮಿಯಾ ಬಗ್ತಾನಾ ಥೈ ಎಕ್ ಕಾಳೆ ಘೊಡ್ಕೆ ಹೊತ್ತೆ. ತ್ಯೆಚ್ಯಾ ವರ್ತಿ ಸವಾರಿ ಕರ್ತಲ್ಯಾಚ್ಯಾ ಹಾತಿತ್ ಎಕ್ ತಾಕ್ಡಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 6:5
11 ತಿಳಿವುಗಳ ಹೋಲಿಕೆ  

ಮೊದಲನೆಯ ರಥಕ್ಕೆ ಕೆಂಪು ಕುದುರೆಗಳಿದ್ದವು, ಎರಡನೆಯ ರಥಕ್ಕೆ ಕಪ್ಪು ಕುದುರೆಗಳು,


ಕಪ್ಪು ಕುದುರೆಗಳ ರಥ, ಉತ್ತರ ದೇಶಕ್ಕೆ ಹೊರಟಿತು. ಬಿಳಿ ಕುದುರೆಗಳು ಪಶ್ಚಿಮಕ್ಕೆ ಹಿಂದೆ ಹೋಯಿತು. ಮಚ್ಚೆ ಮಚ್ಚೆಯ ಕುದುರೆಯ ರಥ ದಕ್ಷಿಣಕ್ಕೆ ಹೊರಟಿತು.”


ಇದಾದ ಮೇಲೆ ಅವರು ನನಗೆ, “ಮನುಷ್ಯಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ಮುರಿಯುವೆನು. ಅವರು ತೂಕದ ಪ್ರಕಾರ ಚಿಂತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ನಿರಾಶೆಯಿಂದ ಕುಡಿಯುವರು.


ಏಳು ಮುದ್ರೆಗಳಲ್ಲಿ ಒಂದನ್ನು ಯಜ್ಞದ ಕುರಿಮರಿ ಆಗಿರುವವರು ತೆರೆಯುವುದನ್ನು ನಾನು ಕಂಡೆನು. ಆ ಜೀವಿಗಳಲ್ಲೊಂದು ಗುಡುಗಿನಂತಿದ್ದ ಶಬ್ದದಲ್ಲಿ, “ಬಾ!” ಎಂದು ಹೇಳುವುದನ್ನು ಕೇಳಿದೆನು.


ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.


ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜರೂ ಆಗಿರುವವರು ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನು ಬಿಚ್ಚುವುದಕ್ಕೆ ಜಯವೀರರಾಗಿದ್ದಾರೆ,” ಎಂದು ಹೇಳಿದನು.


ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿದಾಗ, ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು, ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ, ನಿಮಗೆ ತೃಪ್ತಿಯಾಗುವುದಿಲ್ಲ.


ನೀನು ತಿನ್ನುವ ಆಹಾರದ ತೂಕದ ಪ್ರಕಾರ ಅದು ಒಂದು ದಿನಕ್ಕೆ 230 ಗ್ರಾಂ ಇರಲಿ, ನೀನು ಅದನ್ನು ಆಗಾಗ್ಗೆ ತಿನ್ನಬೇಕು.


ಭಯಂಕರವಾದ ಕ್ಷಾಮದಿಂದ ನಮ್ಮ ಚರ್ಮ ಒಲೆಯ ಹಾಗೆ ಕಪ್ಪಾಗಿದೆ.


ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಅಲ್ಲಲ್ಲಿ ಬರಗಾಲಗಳು ಮತ್ತು ಭೂಕಂಪಗಳು ಸಂಭವಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು