Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:12 - ಕನ್ನಡ ಸಮಕಾಲಿಕ ಅನುವಾದ

12 “ಆಮೆನ್! ಸ್ತೋತ್ರ, ಮಹಿಮೆ, ಜ್ಞಾನ, ಕೃತಜ್ಞತೆ, ಗೌರವ, ಶಕ್ತಿ, ಬಲ ನಮ್ಮ ದೇವರಿಗೆ ಯುಗಯುಗಾಂತರಕ್ಕೂ ಉಂಟಾಗಲಿ. ಆಮೆನ್!” ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಆಮೆನ್‍, ಸ್ತುತಿಸ್ತೋತ್ರವೂ ಘನಮಾನವೂ ಜ್ಞಾನವೂ ಧನ್ಯವಾದವೂ ಶಕ್ತಿಯೂ ಪರಾಕ್ರಮವೂ ಸಲ್ಲಲಿ ಯುಗಯುಗಾಂತರಕ್ಕೂ, ಆಮೆನ್,” ಎಂದು ಹಾಡುತ್ತಾ ದೇವರನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಮೆನ್. ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಶಕ್ತಿಯೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರು, “ಆಮೆನ್! ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸುತ್ತಿಯೂ ಗೌರವವೂ ಅಧಿಕಾರವೂ ಮತ್ತು ಬಲವೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 “ಆಮೆನ್! ಸುತ್ತಿ, ಮಹಿಮಾ, ಜ್ಞಾನ್, ಧನ್ಯವಾದ್, ಮಾನ್, ಬಳ್, ಅನಿ ಪರಾಕ್ರಮ್ ಸದಾ ಸರ್ವತಾಕ್ ಅಮ್ಚ್ಯಾ ದೆವಾಚೆಚ್ ಹೊಂವ್ದಿತ್! ಆಮೆನ್!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:12
27 ತಿಳಿವುಗಳ ಹೋಲಿಕೆ  

ನಮ್ಮ ರಕ್ಷಕರಾದ ಒಬ್ಬರೇ ದೇವರಿಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಬಲವು, ಅಧಿಕಾರಗಳು ಎಂದೂ ಇದ್ದಂತೆ ಈಗಲೂ ಯಾವಾಗಲೂ ಇರಲಿ. ಆಮೆನ್.


ಆಗ ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು, ಸಿಂಹಾಸನದ ಮೇಲೆ ಕುಳಿತಿರುವ ದೇವರನ್ನು ಆರಾಧಿಸಿ: “ಆಮೆನ್, ಹಲ್ಲೆಲೂಯಾ!” ಎಂದರು.


ನೀವು ಮಾತಿನಿಂದಾಗಲಿ, ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ, ಕ್ರಿಸ್ತ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ಕೃತಜ್ಞತೆಯಿಂದ ಅವರ ಬಾಗಿಲುಗಳಿಗೂ, ಕೃತಜ್ಞತಾ ಸ್ತೋತ್ರದಿಂದ ಅವರ ಅಂಗಳಗಳಿಗೂ ಬನ್ನಿರಿ; ಅವರನ್ನು ಕೊಂಡಾಡಿರಿ, ಅವರ ಹೆಸರನ್ನು ಸ್ತುತಿಸಿರಿ.


ಆದರೆ ನಾನು ಸ್ತೋತ್ರದ ಗೀತೆಯಿಂದ ನಿಮಗೆ ಬಲಿ ಅರ್ಪಿಸುವೆನು. ನಾನು ಮಾಡಿದ ಹರಕೆಯನ್ನು ತೀರಿಸುವೆನು. ಆಗ ನಾನು, ‘ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು,’ ಎಂದು ಹೇಳಿದನು.”


ಯೆಹೋವ ದೇವರಿಗೆ ಸ್ತೋತ್ರಗೀತೆ ಹಾಡಿರಿ, ನಮ್ಮ ದೇವರನ್ನು ಕಿನ್ನರಿಯಿಂದ ಸ್ತುತಿಸಿರಿ.


ಧನ್ಯವಾದ ಬಲಿಗಳನ್ನು ಅರ್ಪಿಸಿ, ದೇವರ ಕೆಲಸಗಳನ್ನು ಉತ್ಸಾಹದಿಂದ ಸಾರಲಿ.


ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಆಮೆನ್.


ದೇವರ ಘನವುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ. ದೇವರ ತೇಜಸ್ಸು ಭೂಮಿಯಲ್ಲೆಲ್ಲಾ ತುಂಬಲಿ. ಆಮೆನ್, ಆಮೆನ್.


ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ, ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಆಮೆನ್.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಚೀಯೋನನ್ನು ಸಂತೈಸೇ ಸಂತೈಸುವರು. ಅವರು ಅದರ ಹಾಳಾದ ಸ್ಥಳಗಳನ್ನು ಕರುಣೆಯಿಂದ ನೋಡುವರು. ಅದರ ಮರುಭೂಮಿಯನ್ನು ಏದೆನ್ ಹಾಗೆಯೂ, ಹಾಳು ಪ್ರದೇಶವನ್ನು ಯೆಹೋವ ದೇವರ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ, ಉಲ್ಲಾಸವೂ, ಉಪಕಾರ ಸ್ತುತಿಯೂ, ಇಂಪಾದ ಸ್ವರವೂ ಕಂಡು ಬರುವುವು.


ನೀವು ಕ್ರಿಸ್ತ ಯೇಸುವಿನಲ್ಲಿ ಬೇರೂರಿದವರಾಗಿಯೂ ಕಟ್ಟಲಾದವರಾಗಿಯೂ ಇದ್ದು, ನಿಮಗೆ ಬೋಧನೆ ನೀಡಿದ ಪ್ರಕಾರ ನಿಮ್ಮ ವಿಶ್ವಾಸದಲ್ಲಿ ಬಲಹೊಂದಿ ಕೃತಜ್ಞತೆಯಿಂದ ತುಂಬಿ ಪ್ರವಾಹಿಸುವವರಾಗಿರಿ.


ಇವೆಲ್ಲವೂ ನಿಮ್ಮ ಒಳ್ಳೆಯದಕ್ಕಾಗಿಯೇ. ಇದರಿಂದ ಹೆಚ್ಚಾದ ಜನರಿಗೆ ತಲುಪುತ್ತಿರುವ ಕೃಪೆಯು, ಕೃತಜ್ಞತೆಯಿಂದ ತುಂಬಿ ಹರಿಯುವುದು. ಆಗ ದೇವರ ಮಹಿಮೆಯು ಸ್ಪಷ್ಟವಾಗುವುದು.


ನಾನು ನಿಮಗೆ ಕೃತಜ್ಞತೆಯ ಬಲಿಯನ್ನು ಅರ್ಪಿಸುವೆನು; ಯೆಹೋವ ದೇವರ ಹೆಸರನ್ನು ಕರೆಯುವೆನು.


ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲರೂ, “ಆಮೆನ್!” ಎಂದು ಹೇಳಲಿ. ನೀವು ಯೆಹೋವ ದೇವರನ್ನು ಸ್ತುತಿಸಿರಿ.


ಧನ್ಯವಾದದೊಡನೆ ಅವರ ಸನ್ನಿಧಿಯಲ್ಲಿ ಮುಂದೆ ಬಂದು ಕೀರ್ತನೆಗಳಿಂದ ಅವರಿಗೆ ಜಯಧ್ವನಿ ಮಾಡೋಣ.


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’


“ದೇವರಾಗಿರುವ ನನಗೆ ಸ್ತೋತ್ರವನ್ನು ಬಲಿಯಾಗಿ ಅರ್ಪಿಸಿರಿ. ಮಹೋನ್ನತನಾಗಿರುವ ನನಗೆ ಹರಕೆಗಳನ್ನು ಸಲ್ಲಿಸಿರಿ.


ಏಕೆಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿಯೇ ದೇವರಿಗೆ ಸ್ತೋತ್ರವನ್ನೂ, ಕೃತಜ್ಞತೆಯನ್ನೂ ಹಾಡತಕ್ಕ ಹಾಡುಗಾರರಲ್ಲಿ ಮುಖ್ಯಸ್ಥರಿದ್ದರು.


ಲೇವಿಯರು ಯಾರೆಂದರೆ: ಯೇಷೂವ, ಬಿನ್ನೂಯ್, ಕದ್ಮಿಯೇಲ್, ಶೇರೇಬ್ಯ, ಯೆಹೂದ, ಕೃತಜ್ಞತೆಯ ಹಾಡುಗಳ ಜವಾಬ್ದಾರನಾಗಿದ್ದ ಮತ್ತನ್ಯನೂ, ಅವನ ಸಂಗಡಿಗರು.


ಸದಾ ಜೀವಿಸುವವನೂ ಆಗಿದ್ದೇನೆ. ಮರಣ ಹೊಂದಿದ್ದೆನು, ಇಗೋ, ಯುಗಯುಗಾಂತರಗಳಲ್ಲಿಯೂ ನಾನು ಬದುಕುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನ ಬಳಿ ಇವೆ.


ಏಕೆಂದರೆ ಸಮಸ್ತವೂ ದೇವರಿಂದ ಉಂಟಾಗಿ ದೇವರ ಮೂಲಕವಾಗಿಯೂ ದೇವರಿಗಾಗಿಯೂ ಇರುತ್ತವೆ. ಮಹಿಮೆಯು ಸದಾಕಾಲವೂ ದೇವರಿಗೇ ಸಲ್ಲುವುದಾಗಿರಲಿ. ಆಮೆನ್.


ನೀನು ಆತ್ಮದಲ್ಲಿ ಮಾತ್ರ ಸ್ತೋತ್ರ ಮಾಡಿದರೆ, ತಿಳುವಳಿಕೆ ಇಲ್ಲದೆ ಕುಳಿತಿರುವವನು ನಿನ್ನ ಕೃತಜ್ಞತಾಸ್ತುತಿಗೆ, “ಆಮೆನ್” ಎಂದು ಹೇಳುವುದು ಹೇಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು