ಪ್ರಕಟನೆ 7:2 - ಕನ್ನಡ ಸಮಕಾಲಿಕ ಅನುವಾದ2 ಆಗ ಮತ್ತೊಬ್ಬ ದೂತನು, ಜೀವಸ್ವರೂಪರಾದ ದೇವರ ಮುದ್ರೆಯನ್ನು ಹಿಡಿದು ಪೂರ್ವದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಭೂಮಿ ಮತ್ತು ಸಮುದ್ರವನ್ನು ಬಾಧಿಸುವ ಶಕ್ತಿ ಹೊಂದಿದ ನಾಲ್ಕು ದೂತರಿಗೆ ಅವನು ಮಹಾಶಬ್ದದಿಂದ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಣದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನುಂಟುಮಾಡಲು ಅನುಮತಿ ಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಪೂರ್ವದಿಕ್ಕಿನಿಂದ ಮತ್ತೊಬ್ಬ ದೇವದೂತನು ಏರಿಬಂದನು. ಅವನು ಜೀವಸ್ವರೂಪಿಯಾದ ದೇವರ ಮುದ್ರೆಯನ್ನು ಕೈಯಲ್ಲಿ ಹಿಡಿದಿದ್ದನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನು ಮಾಡುವ ಅಧಿಕಾರವನ್ನು ಪಡೆದಿದ್ದ ನಾಲ್ಕು ಮಂದಿ ದೇವದೂತರಿಗೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡುಕೊಂಡು ಮೂಡಣ ದಿಕ್ಕಿನಿಂದ ಏರಿಬರುವದನ್ನು ಕಂಡೆನು. ಅವನು ಭೂವಿುಯನ್ನೂ ಸಮುದ್ರವನ್ನೂ ಕೆಡಿಸುವದಕ್ಕೆ ಅಧಿಕಾರಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಂತರ ಬೇರೊಬ್ಬ ದೇವದೂತನು ಪೂರ್ವದಿಕ್ಕಿನ ಕಡೆಯಿಂದ ಬರುತ್ತಿರುವುದನ್ನು ನಾನು ನೋಡಿದೆನು. ಜೀವಸ್ವರೂಪನಾದ ದೇವರ ಮುದ್ರೆಯು ಈ ದೇವದೂತನ ಬಳಿಯಿತ್ತು. ಈ ದೇವದೂತನು ನಾಲ್ಕುಮಂದಿ ದೇವದೂತರನ್ನು ಗಟ್ಟಿಯಾದ ಧ್ವನಿಯಲ್ಲಿ ಕರೆದನು. ಭೂಮಿಗೆ ಮತ್ತು ಸಮುದ್ರಕ್ಕೆ ತೊಂದರೆ ಮಾಡುವುದಕ್ಕೆ ಅಧಿಕಾರವನ್ನು ದೇವರು ಈ ನಾಲ್ವರು ದೇವದೂತರಿಗೆ ನೀಡಿದ್ದನು. ಆ ದೇವದೂತನು ಈ ನಾಲ್ವರು ದೇವದೂತರಿಗೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಅನಿ ದಿಸ್ ಉಗಾವ್ತಲ್ಯಾ ದಿಕ್ಕಾಕ್ನಾ ಅನಿಎಕ್ ದೆವಾಚ್ಯಾ ದುತಾನ್ ಝಿತ್ತ್ಯಾ ದೆವಾಚೊ ಛಪ್ಪೊ ಘೆವ್ನ್ ಯೆತಲೆ ಮಿಯಾ ಬಗಟ್ಲೊ. ತೆನಿ ಮೊಟ್ಯಾನ್, ತ್ಯಾ ದೆವಾನ್ ಜಿಮಿನ್ ಅನಿ ಸಮುಂದರಾಕ್ ವಾಯ್ಟ್ ಕರ್ತಲೊ ಅದಿಕಾರ್ ದಿಲ್ಲ್ಯಾ ಚಾರ್ ದೆವ್‍ದುತಾಕ್ನಿ ಬಲ್ವುಲ್ಯಾನ್. ಅಧ್ಯಾಯವನ್ನು ನೋಡಿ |