Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:4 - ಕನ್ನಡ ಸಮಕಾಲಿಕ ಅನುವಾದ

4 ಆಗ ಮುದ್ರೆ ಹೊಂದಿರುವವರ ಸಂಖ್ಯೆಯು ನನಗೆ ಕೇಳಿಸಿತು. ಇಸ್ರಾಯೇಲಿನ ಎಲ್ಲಾ ಕುಲಗಳಿಂದ ಮುದ್ರೆಹಾಕಿಸಿಕೊಂಡವರು 1,44,000 ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು ನಾನು ಕೇಳಿಸಿಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಇಸ್ರಯೇಲರು ಪ್ರತಿಯೊಂದು ಕುಲದಲ್ಲಿ ಮುದ್ರೆಯೊತ್ತಿಸಿಕೊಂಡವರು ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಮಂದಿ. ಅವರ ಬಿಡಿ ಸಂಖ್ಯೆ ಹೀಗಿತ್ತು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ನಾನು ಕೇಳಿದೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಒತ್ತಿಸಿಕೊಂಡರು. ಅವರ ಸಂಖ್ಯೆ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಂತರ, ಮುದ್ರೆ ಒತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಅವರ ಒಟ್ಟು ಸಂಖ್ಯೆ 1,44,000 ಮಂದಿ. ಅವರು ಇಸ್ರೇಲರ ಹನ್ನೆರಡು ಕುಲಗಳಿಗೆ ಸೇರಿದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಕಪಾಳಾ ವೈನಿ ದೆವಾಚೊ ಛಪ್ಪೊ ಮಾರುನ್ ವಳಕ್ ಕರಲ್ಲಿ ಲೊಕಾ ಎಕ್ ಲಾಕ್ ಚಾಳಿಸಾರ್ ಚಾರ್ ಹಜಾರ್ ಲೊಕಾ ಮನುನ್ ಮಾಕಾ ಸಾಂಗಟ್ಲ್ಯಾನಿ. ತಿ ಲೊಕಾ ಇಸ್ರಾಯೆಲಾಚ್ಯಾ ಬಾರಾ ಘರಾನ್ಯಾನಿತ್ಲಿ ಲೊಕಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:4
17 ತಿಳಿವುಗಳ ಹೋಲಿಕೆ  

ನಾನು ನೋಡಲಾಗಿ, ಕುರಿಮರಿ ಆಗಿರುವವರು ಚೀಯೋನ್ ಪರ್ವತದ ಮೇಲೆ ನಿಂತಿದ್ದರು. ಕುರಿಮರಿಯವರ ಜೊತೆಯಲ್ಲಿ ಒಂದು ಲಕ್ಷ ನಲವತ್ನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಕುರಿಮರಿಯವರ ಹೆಸರೂ ಕುರಿಮರಿಯವರ ತಂದೆಯ ಹೆಸರೂ ಬರೆಯಲಾಗಿದ್ದವು.


ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸಹಾಡನ್ನು ಹಾಡಿದರು. ಭೂಲೋಕದೊಳಗಿಂದ ಕೊಂಡುಕೊಳ್ಳಲಾದ ಆ ಒಂದು ಲಕ್ಷ ನಲವತ್ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.


ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ಊಟಮಾಡಿ ಪಾನೀಯವನ್ನು ಸೇವಿಸುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಯೇಸು ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸಮಸ್ತವೂ ನವೀಕರಣವಾಗುವಾಗ, ಮನುಷ್ಯಪುತ್ರನಾದ ನಾನು ನನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಂಡಿರಲು, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯತೀರಿಸುವಿರಿ.


ರಾಜರೇ, ನಮ್ಮ ಹನ್ನೆರಡು ಗೋತ್ರಗಳವರು ಅತ್ಯಾಸಕ್ತಿಯಿಂದ ಹಗಲಿರುಳು ದೇವರ ಸೇವೆಮಾಡುತ್ತಾ, ಆ ವಾಗ್ದಾನವು ನೆರವೇರುವುದೆಂದು ನಿರೀಕ್ಷಿಸುತ್ತಾ ಇದ್ದಾರೆ. ರಾಜರೇ, ಈ ನಿರೀಕ್ಷೆಯ ನಿಮಿತ್ತವಾಗಿಯೇ ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆ ಮಾಡುತ್ತಿದ್ದಾರೆ.


ಕುದುರೆ ಸೈನಿಕರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನನಗೆ ಕೇಳಿಸಿತು.


ದೇವರಿಗೂ ಕರ್ತ ಆಗಿರುವ ಯೇಸು ಕ್ರಿಸ್ತರಿಗೂ ದಾಸನಾಗಿರುವ ಯಾಕೋಬನು, ವಿವಿಧ ದೇಶಗಳಲ್ಲಿ ಚದರಿರುವ ಇಸ್ರಾಯೇಲರ ಹನ್ನೆರಡು ಗೋತ್ರದವರಿಗೆ ಬರೆಯುವುದು: ನಿಮಗೆ ಶುಭವಾಗಲಿ.


ಇದಲ್ಲದೆ ಯೆಶಾಯನು ಇಸ್ರಾಯೇಲರನ್ನು ಕುರಿತು ಕೂಗಿ ಹೇಳುವುದೇನೆಂದರೆ, “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಣೆಹೊಂದುವರು.


ಪಟ್ಟಣದ ಬಾಗಿಲುಗಳು ಇಸ್ರಾಯೇಲಿನ ಗೋತ್ರಗಳ ಹೆಸರುಗಳ ಪ್ರಕಾರ ಇರಬೇಕು. ಉತ್ತರಕ್ಕೆ ಮೂರು ಬಾಗಿಲುಗಳು: ರೂಬೇನ್ ಬಾಗಿಲು ಒಂದು, ಯೆಹೂದ ಬಾಗಿಲು ಒಂದು, ಲೇವಿ ಬಾಗಿಲು ಒಂದು.


ಒಂದು ಪ್ರವಾದನೆ: ಹದ್ರಾಕ್ ದೇಶದ ವಿಷಯವಾದ ಯೆಹೋವ ದೇವರ ವಾಕ್ಯ: ಅದು ದಮಸ್ಕದಲ್ಲಿ ತಂಗುವುದು. ಮನುಷ್ಯನ ಕಣ್ಣುಗಳು, ಇಸ್ರಾಯೇಲಿನ ಎಲ್ಲಾ ಗೋತ್ರಗಳು ಯೆಹೋವ ದೇವರ ಮೇಲೆ ಇರುವುವು.


ಪಟ್ಟಣದಲ್ಲಿ ಸೇವೆಮಾಡುವವರು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದಲೇ ಅದರಲ್ಲಿಯೇ ಸೇವೆಮಾಡಬೇಕು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾಗಿದೆ. ಯೋಸೇಫನಿಗೆ ಎರಡು ಪಾಲುಗಳು ಕೊಡಲಾಗಿದೆ.


ಯೆಹೋವ ದೇವರು ಅವನನ್ನು ಹೊರಗೆ ಕರೆದುಕೊಂಡು ಬಂದು, “ಈಗ ನೀನು ಆಕಾಶವನ್ನು ದೃಷ್ಟಿಸಿ, ನಕ್ಷತ್ರಗಳನ್ನು ಲೆಕ್ಕಿಸಲು ನಿನ್ನಿಂದಾದರೆ, ಲೆಕ್ಕಿಸು. ಅದರಂತೆಯೇ ನಿನ್ನ ಸಂತತಿಯು ಆಗುವುದು,” ಎಂದು ಹೇಳಿದರು.


ಈ ರತ್ನಗಳು ಇಸ್ರಾಯೇಲರ ಗೋತ್ರದ ಹೆಸರುಗಳ ಪ್ರಕಾರ ಅವು ಹನ್ನೆರಡಾಗಿರಬೇಕು. ಒಂದೊಂದರ ಮೇಲೆ ಒಂದೊಂದು ಹೆಸರಿದ್ದು, ಹನ್ನೆರಡು ಗೋತ್ರಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು.


ಯೂದ ಕುಲದಿಂದ ಮುದ್ರೆಹಾಕಿಸಿಕೊಂಡವರು 12,000, ರೂಬೇನ್ ಕುಲದಿಂದ 12,000, ಗಾದ್ ಕುಲದಿಂದ 12,000,


“ಆ ಸೇವಕನು, ‘ಸ್ವಾಮಿ, ನೀನು ಅಪ್ಪಣೆ ಕೊಟ್ಟಂತೆ ಮಾಡಿದ್ದಾಯಿತು, ಆದರೂ ಸ್ಥಳವಿದೆ,’ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು