Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:9 - ಕನ್ನಡ ಸಮಕಾಲಿಕ ಅನುವಾದ

9 ಇದಾದನಂತರ ಯಾರೂ ಎಣಿಸಲಾಗದಂಥ ಮಹಾ ಜನಸಮೂಹವನ್ನು ಕಂಡೆನು. ಅವರು ಪ್ರತಿ ರಾಷ್ಟ್ರ, ಕುಲ, ಜನ ಮತ್ತು ಭಾಷೆಯವರಾಗಿದ್ದು, ಯಜ್ಞದ ಕುರಿಮರಿ ಆಗಿರುವವರ ಮುಂದೆಯೂ ಸಿಂಹಾಸನದ ಮುಂದೆಯೂ ನಿಂತಿದ್ದರು. ಅವರು ಬಿಳಿ ನಿಲುವಂಗಿಗಳನ್ನು ಧರಿಸಿದ್ದವರಾಗಿ, ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇವುಗಳಾದ ಮೇಲೆ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ನಿಂತಿರುವದನ್ನು ಕಂಡೆನು. ಅವರು ಸಕಲ ಜನಾಂಗಕುಲ ಪ್ರಜೆಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಳಿಕ ನಾನು ನೋಡಿದಾಗ, ಜನರ ಮಹಾಸಮೂಹವನ್ನು ಕಂಡೆನು. ಅವರು ಎಣಿಸಲಾಗದಷ್ಟು ಅಸಂಖ್ಯಾತರಾಗಿದ್ದರು. ಅವರಲ್ಲಿ ಸಕಲ ಜನಾಂಗ, ಕುಲ, ಪ್ರಜೆಗಳವರೂ ಲೋಕದ ಸಕಲ ಭಾಷೆಗಳನ್ನಾಡುವವರೂ ಇದ್ದರು. ಈ ಜನರು ಸಿಂಹಾಸನದ ಮುಂದೆ ಮತ್ತು ಕುರಿಮರಿಯ (ಯೇಸು) ಮುಂದೆ ನಿಂತಿದ್ದರು. ಅವರೆಲ್ಲರೂ ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡು ಖರ್ಜೂರದ ಗರಿಗಳನ್ನು ತಮ್ಮ ಕೈಗಳಲ್ಲಿ ಹಿಡಿದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಹೆಚ್ಯಾ ಮಾನಾ ಕೊನಾಚ್ಯಾನ್‍ಬಿ ಮೆಜುಕ್ ಹೊಯ್ನಾ ತವ್ಡೊ ಮೊಟೊ ಲೊಕಾಂಚೊ ತಾಂಡೊ ಮಿಯಾ ಬಗಟ್ಲೊ! ತಿ ಲೊಕಾ ಸಗ್ಳ್ಯಾ ದೆಶಾ, ಕುಳಿಯಾ, ಘರಾನೆ, ಅನಿ ಬಾಶಾಂಚಿ ಲೊಕಾ ತ್ಯಾತುರ್ ಹೊತ್ತಿ, ಅನಿ ತಿ ಸಗ್ಳಿ ಲೊಕಾ ಖಜುರಾಚಿ ಪಾನಾ ಹಾತಾತ್ನಿ ಧರುನ್ ಫಾಂಡ್ರೆ ಝಗೆ ನೆಸುನ್ ಬೊಕ್ಡಾಚ್ಯಾ ಸಿವಾಸನಾಚ್ಯಾ ಇದ್ರಾಕ್ ಇಬೆ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:9
41 ತಿಳಿವುಗಳ ಹೋಲಿಕೆ  

ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.


ಖರ್ಜೂರದ ಗರಿಗಳನ್ನು ತೆಗೆದುಕೊಂಡು ಅವರನ್ನು ಎದುರುಗೊಳ್ಳಲು ಹೊರಗೆ ಬಂದು, “ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಇಸ್ರಾಯೇಲಿನ ಅರಸನಿಗೆ ಶುಭವಾಗಲಿ!” ಎಂದು ಕೂಗಿದರು.


ನನ್ನನ್ನು ಕೇಳು, ಆಗ ನಾನು ರಾಷ್ಟ್ರಗಳನ್ನು ನಿನ್ನ ವಾರಸಾಗಿಯೂ, ಭೂಮಿಯ ಕಟ್ಟಕಡೆಯವರೆಗೂ ಇರುವ ದೇಶಗಳನ್ನೂ ನಿಮ್ಮ ಸೊತ್ತಾಗಿಯೂ ಕೊಡುವೆನು.


“ಆ ದಿವಸದಲ್ಲಿ ಅನೇಕ ಜನಾಂಗಗಳು ಯೆಹೋವ ದೇವರನ್ನು ಅಂಟಿಕೊಂಡು ನನ್ನ ಜನರಾಗುವರು, ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆಂದು ತಿಳಿದುಕೊಳ್ಳುವೆ.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಬಿಳೀ ನಿಲುವಂಗಿಯು ಕೊಡಲಾಗಿತ್ತು. ಇನ್ನು ಸ್ವಲ್ಪಕಾಲ ಅವರಂತೆಯೇ ವಧಿಸಲಾಗಬೇಕಾಗಿರುವ ಅವರ ಜೊತೆ ಸೇವಕರ ಮತ್ತು ಸಹೋದರರ ಸಂಖ್ಯೆ ಪೂರ್ಣಗೊಳ್ಳುವ ತನಕ ಕಾದಿರಬೇಕೆಂದು ಅವರಿಗೆ ಹೇಳಲಾಯಿತು.


ನೀನು ಸಿರಿವಂತನಾಗುವಂತೆ ಬೆಂಕಿಯಲ್ಲಿ ಪುಟಕ್ಕೆ ಹಾಕಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳಿ ವಸ್ತ್ರಗಳನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಮುಲಾಮನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.


ಪ್ರಿಯರೇ, ನೀವು ಈ ಮರ್ಮದ ಬಗ್ಗೆ ಅಜ್ಞಾನಿಗಳಾಗಿರಬೇಕೆಂದು ನಾನು ಬಯಸುವುದಿಲ್ಲ. ಅದೇನೆಂದರೆ, ಯೆಹೂದ್ಯರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವವರೆಗೆ ಮಾತ್ರ ಇಸ್ರಾಯೇಲರು ತಮ್ಮ ಹೃದಯದ ಕಾಠಿಣ್ಯಕ್ಕೆ ತಾತ್ಕಾಲಿಕವಾಗಿ ಒಳಗಾಗಿರುವರು.


ಆ ಕಾಲ ಬಂದಾಗ ಯೆರೂಸಲೇಮನ್ನೇ, ‘ಯೆಹೋವ ದೇವರ ಸಿಂಹಾಸನ,’ ಎಂದು ಕರೆಯುವರು. ನನ್ನ ನಾಮ ಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದು ಬರುವರು. ಆಮೇಲೆ ತಮ್ಮ ದುಷ್ಟ ಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು.


ಆದಕಾರಣ ಸಂಭವಿಸುವುದಕ್ಕಿರುವ ಇವೆಲ್ಲವುಗಳಿಂದ, ನೀವು ತಪ್ಪಿಸಿಕೊಳ್ಳುವುದಕ್ಕೆ ಯೋಗ್ಯರೆಂದು ಎಣಿಸಿಕೊಳ್ಳುವಂತೆಯೂ ಮನುಷ್ಯಪುತ್ರನಾದ ನನ್ನ ಮುಂದೆ ನಿಂತುಕೊಳ್ಳುವಂತೆಯೂ ಯಾವಾಗಲೂ ಎಚ್ಚರವಾಗಿದ್ದು ಪ್ರಾರ್ಥಿಸುತ್ತಾ ಇರಿ,” ಎಂದರು.


ಅಷ್ಟರಲ್ಲಿ, ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿದಾಡುವಷ್ಟು ಕಿಕ್ಕಿರಿದು ಬಂದಿರಲಾಗಿ, ಯೇಸು ಮೊದಲು ತಮ್ಮ ಶಿಷ್ಯರಿಗೆ ಹೀಗೆಂದು ಮಾತನಾಡಲಾರಂಭಿಸಿದರು, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ, ಕಪಟತನದ ಬಗ್ಗೆ ನೀವು ಎಚ್ಚರವಾಗಿರಿ.


ಲೋಕದಲ್ಲಿರುವ ಎಲ್ಲರೂ ಎಚ್ಚರವಾಗಿ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು; ಜನಾಂಗಗಳ ಕುಟುಂಬಗಳೆಲ್ಲಾ ದೇವರ ಮುಂದೆ ಅಡ್ಡಬೀಳುವವು.


ಮೊದಲನೆಯ ದಿವಸದಲ್ಲಿ ನೀವು ಸುಂದರವಾದ ಮರಗಳ ರೆಂಬೆಗಳನ್ನೂ, ಖರ್ಜೂರ ಮರಗಳ ರೆಂಬೆಗಳನ್ನೂ, ದಟ್ಟವಾದ ಮರಗಳ ರೆಂಬೆಗಳನ್ನೂ, ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳವರೆಗೆ ನಿಮ್ಮ ದೇವರಾಗಿರುವ ಯೆಹೋವ ದೇವರ ಎದುರಿನಲ್ಲಿ ಸಂತೋಷ ಪಡಬೇಕು.


ಇದಲ್ಲದೆ ಸಿಂಹಾಸನದ ಸುತ್ತ ಇತರ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಬಿಳಿವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಬಂಗಾರದ ಕಿರೀಟಗಳಿದ್ದವು.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ


ಆದ್ದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಮರಳಿನಂತೆ ಅಸಂಖ್ಯವಾಗಿಯೂ ಸಂತತಿಯವರು ಹುಟ್ಟಿದರು.


ಆದುದರಿಂದ ವೈರಿಯು ದಾಳಿಮಾಡುವ ದಿನವು ಬರುವಾಗ ನೀವು ಅವನನ್ನು ಎದುರಿಸಿ ನಿಲ್ಲುವಂತೆಯು, ಎಲ್ಲವನ್ನು ಜಯಿಸಿ ಮುಗಿಸಿದ ಮೇಲೆ ನಿಲ್ಲಲು ಶಕ್ತರಾಗುವಂತೆ, ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.


“ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು.


ಆಗ ಅರಸನಾದ ದಾರ್ಯಾವೆಷನು ಭೂಲೋಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ, ಭಾಷೆಗಳವರೆಗೆ ಬರೆದದ್ದೇನೆಂದರೆ, “ನೀವು ಅಪಾರವಾಗಿ ಸಮೃದ್ಧಿಗೊಳ್ಳಿರಿ.


ಇಸ್ರಾಯೇಲರ ಕಡೆಗೆ ತಮ್ಮ ಪ್ರೀತಿಯನ್ನೂ, ತಮ್ಮ ಸತ್ಯತೆಯನ್ನೂ ಜ್ಞಾಪಕ ಮಾಡಿಕೊಂಡಿದ್ದಾರೆ; ಭೂಮಿಯ ಅಂತ್ಯಗಳಲ್ಲೆವೂ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.


ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ, ಜನಾಂಗಗಳಿಗೂ, ಭಾಷೆಯವರಿಗೂ, ನಿಮಗೆ ಶಾಂತಿಯು ಹೆಚ್ಚಾಗಲಿ.


ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


ಇದಲ್ಲದೆ ನಾನು ನೋಡಲಾಗಿ, ಸಿಂಹಾಸನದ ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.


ನನ್ನ ಇಕ್ಕಟ್ಟಿನ ದಿವಸದಲ್ಲಿ ಯೆಹೋವ ದೇವರನ್ನು ಹುಡುಕಿದೆನು. ನಾನು ರಾತ್ರಿಯೆಲ್ಲಾ ಬೇಸರವಿಲ್ಲದೆ ಕೈಚಾಚಿದೆ. ನನ್ನ ಮನಸ್ಸಿಗೆ ಶಾಂತಿ ಇರಲಿಲ್ಲ.


ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ, ನಿನ್ನ ಸಂತಾನದವರನ್ನು ಸಹ ಲೆಕ್ಕಿಸಲು ಸಾಧ್ಯವಾಗುವುದು.


ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ.


ನೀವು ಪ್ರಕಾಶಮಾನ ಬೆಳಕಿಗಿಂತ ಪ್ರಕಾಶಮಾನವಾಗಿರುತ್ತೀರಿ, ನೈಸರ್ಗಿಕ ಸಂಪತ್ತು ತುಂಬಿದ ಪರ್ವತಗಳಿಗಿಂತ ಹೆಚ್ಚು ಶ್ರೇಷ್ಠ ಆಗಿದ್ದೀರಿ.


ನಾನು ಅವರಿಗೆ ಸಿಳ್ಳುಹಾಕಿ, ಅವರನ್ನು ಕೂಡಿಸುವೆನು. ನಿಶ್ಚಯವಾಗಿ ಅವರನ್ನು ವಿಮೋಚಿಸಿದ್ದೇನೆ. ಅವರು ಹಿಂದಿನಂತೆ ಮುಂದೆಯೂ ಸಮೃದ್ಧಿಯಾಗಿರುವರು.


ಜೆಬುಲೋನ್ ಕುಲದಿಂದ 12,000, ಯೋಸೇಫನ ಕುಲದಿಂದ 12,000, ಬೆನ್ಯಾಮೀನ್ ಕುಲದಿಂದ ಮುದ್ರೆಹಾಕಿಸಿಕೊಂಡವರು 12,000 ಜನರು.


ಇನ್ನು ಯಾವ ಶಾಪವೂ ಇರುವುದಿಲ್ಲ. ಅದರಲ್ಲಿ ದೇವರ ಮತ್ತು ಕುರಿಮರಿಯಾದವರ ಸಿಂಹಾಸನವಿರುವುದು. ದೇವರ ದಾಸರು ಅವರಿಗೆ ಸೇವೆಮಾಡುವರು.


ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂಥ ನದಿಯಾಗಿತ್ತು. ಏಕೆಂದರೆ ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು