ಪ್ರಕಟನೆ 8:12 - ಕನ್ನಡ ಸಮಕಾಲಿಕ ಅನುವಾದ12 ನಾಲ್ಕನೆಯ ದೇವದೂತನು ತನ್ನ ತುತೂರಿಯನ್ನು ಊದಿದನು, ಆಗ ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗವು ಬಡೆದಿದ್ದರಿಂದ ಮೂರನೇ ಭಾಗವು ಕತ್ತಲಾಯಿತು. ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಬಡೆದಿದ್ದರಿಂದ, ಮೂರನೇ ಭಾಗವು ಕತ್ತಲಾಯಿತು. ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಹೋಯಿತು. ರಾತ್ರಿಯು ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾಲ್ಕನೆಯ ದೇವದೂತನು ತುತೂರಿಯನ್ನು ಊದಿದನು. ಸೂರ್ಯಚಂದ್ರ ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗಕ್ಕೆ ಧಕ್ಕೆ ಉಂಟಾಯಿತು. ಅವುಗಳ ಮೂರನೆಯ ಒಂದು ಭಾಗ ಕಾಂತಿಹೀನವಾಯಿತು. ಇದರಿಂದಾಗಿ ಹಗಲಿನಲ್ಲೂ ರಾತ್ರಿಯಲ್ಲೂ ಮೂರನೆಯ ಒಂದು ಭಾಗದಷ್ಟು ಬೆಳಕು ಕಡಿಮೆಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಾಲ್ಕನೆಯ ದೇವದೂತನು ತುತೂರಿಯನ್ನೂದಿದಾಗ ಸೂರ್ಯ ಚಂದ್ರ ನಕ್ಷತ್ರಗಳೊಳಗೆ ಮೂರರಲ್ಲಿ ಒಂದು ಭಾಗವು ಬಡಿಯಲ್ಪಟ್ಟು ಕತ್ತಲಾಯಿತು. ಆದದರಿಂದ ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು. ರಾತ್ರಿಯು ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾಲ್ಕನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಸೂರ್ಯನಲ್ಲಿ ಮೂರನೆಯ ಒಂದು ಭಾಗ, ಚಂದ್ರನಲ್ಲಿ ಮೂರನೆಯ ಒಂದು ಭಾಗ ಮತ್ತು ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗ ಬಡಿಯಲ್ಪಟ್ಟು ಅವುಗಳಲ್ಲಿ ಮೂರನೆಯ ಒಂದು ಭಾಗ ಕತ್ತಲಾಯಿತು. ಹಗಲಿನಲ್ಲಿಯೂ ರಾತ್ರಿಯಲ್ಲಿಯೂ ಮೂರನೆಯ ಒಂದು ಭಾಗಕ್ಕೆ ಬೆಳಕಿಲ್ಲದಂತಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಮಾನಾ ಚಾರ್‍ವ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್, ತನ್ನಾ ದಿಸಾಚ್ಯಾ ತಿನಾತ್ಲ್ಯಾ ಎಕ್ ಭಾಗಾಕ್ ಮಾರ್ ಹೊಲೊ ಅನಿ ತೊ ಭಾಗ್ ಕಾಳೊಕ್ ಹೊಲೊ. ಅನಿ ಚಂದ್ರಾಮಾಚೊ ಅನಿ ಚಿಕ್ಕಿಯಾಂಚೊ ತಿನಾತ್ಲೊ ಎಕ್ ಭಾಗ್‍ಬಿ ಕಾಳೊಕ್ ಹೊಲೊ, ಅಸೆ ತೆಂಚೊ ಸಗ್ಳ್ಯಾಂಚೊ ತಿನಾತ್ಲ್ಯಾ ಎಕ್ ಭಾಗಾ ಎವ್ಡೊ ಉಜ್ವೊಡ್ ಕಮಿ ಹೊಲೊ. ಅಸೆ ಎಕ್ ದಿಸಾಚೊ ತಿನಾತ್ಲೊ ಎಕ್ ಭಾಗ್ ಅನಿ ರಾಚ್ಚೊ ತಿನಾತ್ಲೊ ಎಕ್ ಭಾಗ್ ಕಾಳೊಕುಚ್ ರ್‍ಹಾತಾ ಉಜ್ವೊಡುಚ್ ರ್‍ಹಾಯ್ನಾ. ಅಧ್ಯಾಯವನ್ನು ನೋಡಿ |