ಪ್ರಕಟನೆ 8:13 - ಕನ್ನಡ ಸಮಕಾಲಿಕ ಅನುವಾದ13 ನಾನು ನೋಡಲಾಗಿ, ಆಕಾಶದ ಮಧ್ಯದಲ್ಲಿ ಹಾರುತ್ತಿರುವ ಒಂದು ಗರುಡ ಪಕ್ಷಿ ಮಹಾಧ್ವನಿಯಿಂದ: ಇನ್ನೂ ಊದಲಿರುವ ಮೂವರು ದೂತರ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿಗಳಿಗೆ, “ಅಯ್ಯೋ! ಅಯ್ಯೋ! ಅಯ್ಯೋ!” ಎಂದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು” ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅನಂತರ ಆಕಾಶಮಧ್ಯದಲ್ಲಿ ಒಂದು ಗರುಡ ಪಕ್ಷಿ ಹಾರಾಡುತ್ತಿರುವುದನ್ನು ನಾನು ಕಂಡೆ. ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು,” ಎಂದು ಗಟ್ಟಿಯಾಗಿ ಕೂಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಮೇಲೆ ನಾನು ನೋಡಲಾಗಿ ಇಗೋ, ಒಂದೇ ಗರುಡಪಕ್ಷಿಯು ಆಕಾಶಮಧ್ಯದಲ್ಲಿ ಹಾರಾಡುತ್ತಿತ್ತು. ಅದು - ಅಯ್ಯೋ, ಅಯ್ಯೋ, ಅಯ್ಯೋ, ಊದಬೇಕಾಗಿರುವ ಮೂವರು ದೇವದೂತರ ವಿುಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿಗಳಿಗೆ ಎಂಥಾ ವಿಪತ್ತುಗಳು ಸಂಭವಿಸುವವು ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾನು ನೋಡುತ್ತಿದ್ದಂತೆ, ವಾಯುಮಂಡಲದ ಅತಿ ಎತ್ತರದಲ್ಲಿ ಗರುಡ ಪಕ್ಷಿಯೊಂದು ಹಾರಾಡುತ್ತಿರುವುದನ್ನು ಕಂಡೆನು. ಆ ಪಕ್ಷಿಯು ಗಟ್ಟಿಯಾದ ಧ್ವನಿಯಲ್ಲಿ, “ತೊಂದರೆ! ತೊಂದರೆ! ಭೂಮಿಯ ಮೇಲೆ ವಾಸಿಸುವ ಜನರಿಗೆ ತೊಂದರೆ! ಇತರ ಮೂರು ಮಂದಿ ದೇವದೂತರು ತಮ್ಮ ತುತೂರಿಗಳನ್ನು ಊದಿದಾಗ ವಿಪತ್ತುಗಳು ಆರಂಭವಾಗುತ್ತವೆ” ಎಂದು ಕೂಗಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಮಾನಾ ಎಕ್ ಘಾರ್ ಮಳ್ಬಾರ್ ವರ್ತಿ ಹುಡ್ತಲಿ ಬಗಟ್ಲೊ ಅನಿ ತ್ಯಾ ಘಾರೆನ್ ಮೊಟ್ಯಾನ್, “ಭಯಂಕರ್! ಹುರಲ್ಲಿ ತಿನ್ ದೆವ್‍ದುತಾ ಪಂವೆ ವಾಜ್ವುತಲೊ ಅವಾಜ್ ಯೆತಾನಾ ಜಿಮ್ನಿ ವರ್ತಿ ವಸ್ತಿ ಕರುನ್ ಅಸಲ್ಲ್ಯಾಂಚಿ ಗತ್ ಕಾಯ್ ಸಾಂಗು!” ಮನುನ್ ಬೊಬ್ ಮಾರ್ತಲೆ ಮಿಯಾ ಆಯಿಕ್ಲೊ. ಅಧ್ಯಾಯವನ್ನು ನೋಡಿ |