Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:11 - ಕನ್ನಡ ಸಮಕಾಲಿಕ ಅನುವಾದ

11 ಹೀಬ್ರೂ ಭಾಷೆಯಲ್ಲಿ, ಅಬದ್ದೋನ್ ಎಂದೂ ಗ್ರೀಕ್ ಭಾಷೆಯಲ್ಲಿ, ಅಪೊಲ್ಲುವೋನ್ ಎಂಬ ಹೆಸರಿನ ಪಾತಾಳ ಲೋಕದ ದೂತನು ಅವರ ಅರಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಪಾತಾಳಕೂಪದ ದೂತನೇ ಅವುಗಳನ್ನು ಆಳುವ ಅರಸು. ಅವನಿಗೆ ಹಿಬ್ರಿಯ ಭಾಷೆಯಲ್ಲಿ, ‘ಅಬದ್ದೋನ್’ ಎಂದೂ ಗ್ರೀಕ್ ಭಾಷೆಯಲ್ಲಿ, ‘ಅಪೊಲ್ಲುವೋನ್’ ಎಂದೂ ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಧೋಲೋಕದ ಅಧಿಕಾರಿಯಾದ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮಿಡತೆಗಳಿಗೆ ಒಬ್ಬ ರಾಜನಿದ್ದನು. ತಳವಿಲ್ಲದ ಕೂಪದ ದೂತನೇ ಅವುಗಳ ರಾಜನಾಗಿದ್ದನು. ಅವನಿಗೆ ಹಿಬ್ರೂ ಭಾಷೆಯಲ್ಲಿ “ಅಬದ್ದೋನ್” ಎಂಬ ಹೆಸರಿತ್ತು. ಗ್ರೀಕ್ ಭಾಷೆಯಲ್ಲಿ “ಅಪೊಲ್ಲುವೋನ್” (ವಿನಾಶಕರ) ಎಂದೂ ಹೆಸರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಪಾತಾಳಾ ವರ್ತಿ ಅದಿಕಾರ್ ಹೊತ್ತೊ ದೆವ್‍ದುತಾ ತೆಂಚೊ ಮೊಟೊ ಮುಖಂಡ್ ಹೊವ್ನ್ ಹೊತ್ತೊ. ಹೆಬ್ರೆವ್ ಬಾಸೆತ್ ತೆಚೆ ನಾಂವ್ ಅಬಾಡ್ಡನ್; ಗ್ರಿಕ್ ಬಾಸೆತ್ ತೆಚೆ ನಾಂವ್ ಅಪೊಲಿನ್. ಹೆಚೊ ಅರ್ತ್ ನಾಸ್ ಕರ್‍ತಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:11
18 ತಿಳಿವುಗಳ ಹೋಲಿಕೆ  

ಪಾತಾಳವು ದೇವರ ದೃಷ್ಟಿಗೆ ತೆರೆದಿದೆ; ನಾಶಲೋಕವು ದೇವರಿಗೆ ಮರೆಯಾಗಿಲ್ಲ.


ನೀವು, ಹಿಂದೆ ಇಹಲೋಕದ ಮಾರ್ಗಕ್ಕೆ ಅನುಸಾರವಾಗಿ ನಡೆದುಕೊಂಡು, ವಾಯುಮಂಡಲದ ಅಧಿಪತಿಯ ಆತ್ಮನಿಗನುಸಾರವಾಗಿದ್ದೀರಿ. ಆ ದುರಾತ್ಮವು ಈಗ ಅವಿಧೇಯತೆಯ ಮಕ್ಕಳಲ್ಲಿ ಕಾರ್ಯಮಾಡುತ್ತಿದೆ.


ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು.


ಇಹಲೋಕಾಧಿಪತಿಗೆ ನ್ಯಾಯತೀರ್ಪಾದ ಕಾರಣದಿಂದ ನ್ಯಾಯತೀರ್ಪಿನ ವಿಷಯವಾಗಿಯೂ ಮನವರಿಕೆ ಮಾಡುವರು.


ಇನ್ನು ಮೇಲೆ ನಾನು ನಿಮ್ಮೊಂದಿಗೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕದ ಅಧಿಪತಿಯು ಬರಲಿದ್ದಾನೆ. ನನ್ನಲ್ಲಿ ಅವನಿಗೆ ಸೇರಿದ್ದು ಒಂದೂ ಇರುವುದಿಲ್ಲ.


ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.


ನಾವು ದೇವರ ಮಕ್ಕಳೆಂದೂ ಲೋಕವೆಲ್ಲವು ಕೆಡುಕನ ನಿಯಂತ್ರಣದಲ್ಲಿ ಇದೆ ಎಂದೂ ನಮಗೆ ಗೊತ್ತಿದೆ.


ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರಾಗಿದ್ದೀರಿ, ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವ ದೇವರು ಲೋಕದಲ್ಲಿ ಇರುವವನಿಗಿಂತ ದೊಡ್ಡವರಾಗಿದ್ದಾರೆ.


ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಇಹಲೋಕದ ಅಧಿಪತಿಯನ್ನು ಈಗ ಹೊರಗೆ ಹಾಕಲಾಗುವುದು.


ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


ನಾಶಲೋಕವೂ ಮರಣವೂ, “ನಾವು ಜ್ಞಾನದ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅಷ್ಟೇ,” ಎನ್ನುತ್ತವೆ.


ಅದು ನಾಶಲೋಕದವರೆಗೆ ದಹಿಸುವಂಥಾ ಅಗ್ನಿಯಾಗುತ್ತಿತ್ತು, ಅದು ನನ್ನ ಆದಾಯವನ್ನೆಲ್ಲಾ ನಿರ್ಮೂಲ ಮಾಡುತ್ತಿತ್ತು.


ಸಮಾಧಿಯಲ್ಲಿ ನಿಮ್ಮ ಪ್ರೀತಿ ಸಾರಲಾಗುವುದೇ? ನಾಶನ ಸ್ಥಳದಲ್ಲಿ ನಿಮ್ಮ ನಂಬಿಗಸ್ತಿಕೆಯು ಹೇಳಲಾಗುವುದೋ?


ಮರಣವೂ ಪಾತಾಳವೂ ಯೆಹೋವ ದೇವರಿಗೆ ಕಾಣುತ್ತಿರುವಾಗ, ಮನುಷ್ಯರ ಹೃದಯಗಳು ಅವರಿಗೆ ಮುಚ್ಚುಮರೆಯೇ?


ಅವು ತಮ್ಮನ್ನು ಪಾತಾಳಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಯೇಸುವನ್ನು ಬೇಡಿಕೊಂಡವು.


ಯೆರೂಸಲೇಮಿನಲ್ಲಿ “ಕುರಿಬಾಗಿಲು” ಎಂಬ ಸ್ಥಳದ ಬಳಿ ಒಂದು ಕೊಳವಿದೆ. ಇದನ್ನು ಹೀಬ್ರೂ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ. ಅದಕ್ಕೆ ಐದು ಮಂಟಪಗಳಿದ್ದವು.


ಆಗ ಅವು ಅವರನ್ನು ಹೀಬ್ರೂ ಭಾಷೆಯಲ್ಲಿ ಹರ್ಮಗೆದೋನ್ ಎಂಬ ಹೆಸರಿನ ಸ್ಥಳಕ್ಕೆ ಸೇರಿಸಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು