Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:2 - ಕನ್ನಡ ಸಮಕಾಲಿಕ ಅನುವಾದ

2 ಆತನು ಆ ಪಾತಾಳವನ್ನು ತೆರೆಯಲು, ಅದರೊಳಗಿಂದ ಹೊಗೆಯು ಮಹಾ ಕುಲುಮೆಯಿಂದ ಬರುವ ಹೊಗೆಯಂತೆ ಏರಿತು. ಪಾತಾಳದ ಆ ಹೊಗೆಯಿಂದ ಸೂರ್ಯ ಮತ್ತು ಆಕಾಶಕ್ಕೆ ಕತ್ತಲು ಕವಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಿ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ಆ ಕೂಪದ ಮುಚ್ಚಳವನ್ನು ತೆರೆದನು. ಅದರೊಳಗಿಂದ ದಟ್ಟಹೊಗೆ ದೊಡ್ಡ ಕುಲುಮೆ ಒಂದರಿಂದ ಬರುತ್ತಿರುವಂತೆ ಮೇಲೇರಿತು. ಇದರಿಂದಾಗಿ ಸೂರ್ಯನೂ ವಾಯುಮಂಡಲವೂ ಕಪ್ಪಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು; ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕತ್ತಲಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಂತರ ಆ ನಕ್ಷತ್ರವು ತಳವಿಲ್ಲದ ಆಳವಾದ ಕೂಪವನ್ನು ತೆರೆಯಿತು. ದೊಡ್ಡ ಕುಲುಮೆಯಿಂದ ಹೊಗೆಯು ಬರುವಂತೆ ಆ ಕೂಪದಿಂದ ಹೊಗೆ ಮೇಲಕ್ಕೆ ಬಂದಿತು. ಆ ಕೂಪದಿಂದ ಬಂದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತ್ಯಾ ಚಿಕ್ಕಿನ್ ಪಾತಾಳ್ ಉಗಡಲ್ಲ್ಯಾ ತನ್ನಾ ಎಕ್ ಮೊಟ್ಯಾ ಪಂಪಾತ್ನಾ ಯೆಲ್ಯಾ ಸರ್ಕೊ ಡುಕೊಟ್ ಭಾಯ್ರ್ ಪಡ್ಲೊ; ಹ್ಯಾ ಪಾತಾಳಾತ್ಲ್ಯಾ ಡುಕ್ಟಾನ್ ದಿಸಾಚೊ ಉಜ್ವೊಡ್ ಅನಿ ಸಗ್ಳೊ ಮಳಬ್ ಕಾಳೊ ಹೊವ್ನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:2
16 ತಿಳಿವುಗಳ ಹೋಲಿಕೆ  

ಅವುಗಳ ಮುಂದೆ ಭೂಮಿಯು ನಡುಗುತ್ತದೆ. ಆಕಾಶಗಳು ಅದರುತ್ತವೆ. ಸೂರ್ಯ ಚಂದ್ರರು ಕಪ್ಪಾಗುತ್ತವೆ. ನಕ್ಷತ್ರಗಳು ಇನ್ನು ಮುಂದೆ ಹೊಳೆಯುವುದಿಲ್ಲ.


ಅವನು ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶಗಳ ಕಡೆಗೂ ನೋಡಿದನು. ಆ ಪ್ರದೇಶದಿಂದ ಹೊಗೆಯು ಕುಲುಮೆಯ ಹೊಗೆಯಂತೆ ಏರುತ್ತಿತ್ತು.


ಅದು ಕತ್ತಲೆಯೂ ಮಬ್ಬೂ ಉಳ್ಳ ದಿವಸವೂ, ಮೇಘವೂ ಕಾರ್ಗತ್ತಲು ಉಳ್ಳ ದಿವಸವೂ ಆಗಿದೆ. ಬೆಟ್ಟಗಳ ಮೇಲೆ ಹರಡುವ ಉದಯದ ಹಾಗೆ ದೊಡ್ಡ ಬಲವಾದ ಸ್ಯೆನ್ಯವು ಬರುತ್ತದೆ. ಅದು ಪ್ರಾಚೀನ ಕಾಲದಲ್ಲಿ ಮತ್ತು ಮುಂದಿನ ಯುಗಗಳಲ್ಲಿ ಎಂದಿಗೂ ಇರುವುದಿಲ್ಲ.


ನಾನು ಆಕಾಶದಲ್ಲಿ ಅದ್ಭುತಗಳನ್ನು, ಭೂಮಿಯಲ್ಲಿ ಸೂಚಕಕಾರ್ಯಗಳನ್ನು, ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು.


ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು, ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು.


ದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಫಿಲಿಷ್ಟಿಯರೇ ಕರಗಿ ಹೋಗಿರಿ. ಹೊಗೆಯು ಉತ್ತರದಿಂದ ಬರುತ್ತದೆ. ಅದರಲ್ಲಿ ಅತ್ತಿತ್ತ ನಡೆಯುವವರು ಯಾರೂ ಇಲ್ಲ.


ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ. ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಿಗಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರು ಹಗಲಿರುಳೂ ವಿಶ್ರಾಂತಿ ಪಡುವುದಿಲ್ಲಾ!” ಎಂದು ಮಹಾಶಬ್ದದಿಂದ ಹೇಳಿದನು.


ಯೆಹೋವ ದೇವರು ಅಗ್ನಿಯೊಳಗೆ ಬೆಟ್ಟದ ಮೇಲೆ ಇಳಿದಿದ್ದರಿಂದ ಸೀನಾಯಿ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.


ಇದಾದ ಮೇಲೆ ಹೊತ್ತು ಮುಳುಗಿ ಕತ್ತಲಾಗುತ್ತಿರಲು, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು.


ನಾಲ್ಕನೆಯ ದೇವದೂತನು ತನ್ನ ತುತೂರಿಯನ್ನು ಊದಿದನು, ಆಗ ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗವು ಬಡೆದಿದ್ದರಿಂದ ಮೂರನೇ ಭಾಗವು ಕತ್ತಲಾಯಿತು. ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಬಡೆದಿದ್ದರಿಂದ, ಮೂರನೇ ಭಾಗವು ಕತ್ತಲಾಯಿತು. ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಹೋಯಿತು. ರಾತ್ರಿಯು ಹಾಗೆಯೇ ಆಯಿತು.


ನಾನು ನನ್ನ ದರ್ಶನದಲ್ಲಿ ಕುದುರೆಗಳನ್ನೂ ಸವಾರರನ್ನೂ ಕಂಡೆನು. ಅವರ ಕವಚಗಳು ಬೆಂಕಿಯ ಕೆಂಪು, ನೀಲಮಣಿ ಹಾಗೂ ಹಳದಿ ಬಣ್ಣದಂತೆಯೂ ಇದ್ದವು. ಕುದುರೆಗಳ ತಲೆಗಳು ಸಿಂಹದ ತಲೆಗಳಂತಿದ್ದವು. ಅವುಗಳ ಬಾಯೊಳಗಿಂದ ಬೆಂಕಿ, ಹೊಗೆ ಮತ್ತು ಗಂಧಕ ಹೊರಬಂದವು.


ಯಾರು ಅಡ್ಡಬೀಳದೆ, ನಮಸ್ಕರಿಸದೆ ಇರುವರೋ ಅಂಥವರನ್ನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಲಾಗುವುದು. ಇದು ರಾಜಾಜ್ಞೆ,” ಎಂದನು.


ಐದನೆಯ ದೇವದೂತನು ತನ್ನ ತುತೂರಿಯನ್ನು ಊದಲು; ಆಕಾಶದಿಂದ ಒಂದು ನಕ್ಷತ್ರವು ಭೂಮಿಗೆ ಬಿದ್ದದ್ದನ್ನು ಕಂಡೆನು. ಅದಕ್ಕೆ ಪಾತಾಳ ಸುರಂಗದ ಬೀಗದ ಕೈ ಕೊಡಲಾಗಿತ್ತು.


ಹೀಬ್ರೂ ಭಾಷೆಯಲ್ಲಿ, ಅಬದ್ದೋನ್ ಎಂದೂ ಗ್ರೀಕ್ ಭಾಷೆಯಲ್ಲಿ, ಅಪೊಲ್ಲುವೋನ್ ಎಂಬ ಹೆಸರಿನ ಪಾತಾಳ ಲೋಕದ ದೂತನು ಅವರ ಅರಸನು.


ಐದನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು, ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು