20 ಈ ಉಪದ್ರವಗಳಿಂದ ಸಾಯದೆ ಉಳಿದ ಮನುಷ್ಯರು ಇನ್ನೂ ತಮ್ಮ ದುಷ್ಟಕೃತ್ಯಗಳನ್ನು ಬಿಟ್ಟು ಪಶ್ಚಾತ್ತಾಪ ಪಡಲಿಲ್ಲ. ಅವರು ದೆವ್ವಗಳನ್ನೂ, ನೋಡಲು, ಕೇಳಲು, ನಡೆಯಲು ಆಗದ ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳ ವಿಗ್ರಹಗಳನ್ನು ಆರಾಧಿಸುವುದನ್ನೂ ನಿಲ್ಲಿಸಲಿಲ್ಲ.
20 ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.
20 ಆ ವಿಪತ್ತುಗಳಿಂದ ಸಾಯದೆ ಬದುಕಿದ್ದ ಜನರು ತಮ್ಮ ದುಷ್ಕೃತ್ಯಗಳನ್ನು ಬಿಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ; ದೆವ್ವಾರಾಧನೆಯನ್ನು ತ್ಯಜಿಸಲಿಲ್ಲ; ನೋಡಲಾರದ, ಕೇಳಿಸಿಕೊಳ್ಳಲಾರದ ಮತ್ತು ನಡೆಯಲಾರದ ವಿಗ್ರಹಗಳನ್ನು ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಲ್ಲಿ ಮಾಡಿ ಪೂಜಿಸುವುದನ್ನು ಕೈಬಿಡಲಿಲ್ಲ.
20 ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ; ಅವರು ದೆವ್ವಗಳ ಪೂಜೆಯನ್ನೂ ಬಂಗಾರ ಬೆಳ್ಳಿ ತಾಮ್ರ ಕಲ್ಲು ಮರ ಇವೇ ಮುಂತಾದವುಗಳಿಂದ ಮಾಡಲ್ಪಟ್ಟು ನೋಡಲಾರದೆ ಕೇಳಲಾರದೆ ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.
20 ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.
ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.
ಏಕೆಂದರೆ ನಾನು ಸತ್ತಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವೇ ಕೆಡಿಸಿಕೊಂಡು, ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು. ನೀವು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ನಿಮ್ಮ ಕ್ರಿಯೆಗಳಿಂದ ಅವರಿಗೆ ಕೋಪವನ್ನೆಬ್ಬಿಸುವದರಿಂದ ನಿಮಗೆ ಕೇಡು ಸಂಭವಿಸುವುದು,” ಎಂದು ಹೇಳಿದನು.
ಪೌಲನೆಂಬ ಈ ಮನುಷ್ಯನು ಎಫೆಸದಲ್ಲಿಯೂ ಇಡೀ ಏಷ್ಯಾ ಪ್ರಾಂತದಲ್ಲಿಯೂ ದೊಡ್ಡ ಸಂಖ್ಯೆಯಲ್ಲಿ ಜನರನ್ನು ಮನವೊಲಿಸಿ, ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲ ಎಂದು ಹೇಳಿ, ಅವರನ್ನು ಮಾರ್ಪಡಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ಕೇಳಿದ್ದೀರಿ ಹಾಗೂ ಕಂಡಿದ್ದೀರಿ.
ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯುವೆನು.
ನಾನು ತಿರುಗಿ ಬಂದಾಗ, ಹಿಂದೆ ನಿಮ್ಮಲ್ಲಿ ಅಶುದ್ಧತ್ವ, ಲೈಂಗಿಕ ಅನೈತಿಕತೆ, ಪೋಕರಿತನ ಮುಂತಾದ ಪಾಪಗಳನ್ನು ಮಾಡಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಬಿಡುವನು ಎಂದು ದುಃಖಪಡಬೇಕಾಗಿರುವುದರಿಂದ ನಾನು ಭಯಪಡುತ್ತೇನೆ.
“ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ; ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ; ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ; ಅವುಗಳಲ್ಲಿ ಉಸಿರೇ ಇಲ್ಲ.
ಏಕೆಂದರೆ ಯೋಹಾನನು ನೀತಿ ಮಾರ್ಗದೊಡನೆ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಅವನನ್ನು ನಂಬಿದರು. ನೀವು ಇದನ್ನು ಕಂಡ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.”
ಏಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ, ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ, ನಿಂದೆಯೂ ಆಗುವ ಹಾಗೆಯೂ, ನೀವು ತಂಗುವುದಕ್ಕೆ ಹೋಗಿರುವ ಈಜಿಪ್ಟ್ ದೇಶದಲ್ಲಿ ಬೇರೆ ದೇವರುಗಳಿಗೆ ಧೂಪ ಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?
ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.
ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಯುವುದು, ಅದು ಆರಿಹೋಗುವುದಿಲ್ಲ.’
ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಹೊತ್ತಿ ಉರಿಯುತ್ತಿದೆ, ಅದು ಆರಿಹೋಗುವುದಿಲ್ಲ.’
ಹಾಗೆಯೇ ಶಿಲ್ಪಿಯು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು. ಸುತ್ತಿಗೆಯಿಂದ ಸಮಮಾಡುವವನು ಅಡಿಗಲ್ಲಿನ ಮೇಲೆ ತಟ್ಟುವವನನ್ನು ಉತ್ತೇಜಿಸಿದನು. ಬೆಸುಗೆ “ಚೆನ್ನಾಗಿದೆ” ಎಂದು ಹೇಳಿ, ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.
ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ಸಹ ನಿನ್ನ ಮಧ್ಯದೊಳಗಿಂದ ಕಡಿದುಬಿಡುವೆನು. ಇನ್ನು ನಿನ್ನ ಸ್ವಂತ ಕೈಗಳು ರೂಪಿಸಿದ್ದನ್ನು ನೀನು ಆರಾಧಿಸದಂತೆ ಮಾಡುವೆನು.