Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:5 - ಕನ್ನಡ ಸಮಕಾಲಿಕ ಅನುವಾದ

5 ಅವುಗಳು ಅವರನ್ನು ಕೊಲ್ಲದೆ, ಐದು ತಿಂಗಳುಗಳವರೆಗೆ ಯಾತನೆಪಡಿಸುವುದಕ್ಕೆ ಅಧಿಕಾರ ಕೊಡಲಾಯಿತು. ಅವರ ಯಾತನೆಯು, ಚೇಳು ತನ್ನ ಕೊಂಡಿಯಿಂದ ಮನುಷ್ಯರನ್ನು ಕುಟುಕಿಹಾಕಿದಾಗ ಆಗುವ ನೋವಿನಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರನ್ನು ಕೊಲ್ಲದೆ ಐದು ತಿಂಗಳುಗಳವರೆಗೂ ಹಿಂಸಿಸುವುದಕ್ಕೆ ಅಧಿಕಾರವು ದೊರೆಯಿತು. ಅವರಿಗುಂಟಾದ ಯಾತನೆಯು ಮನುಷ್ಯನಿಗೆ ಚೇಳು ಕಡಿತದಿಂದುಂಟಾಗುವ ಯಾತನೆಗೆ ಸಮಾನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಲ್ಲದೆ, ಅವರನ್ನು ಕೊಲ್ಲದೆಯೇ ಐದು ತಿಂಗಳಕಾಲ ಬಾಧಿಸಬೇಕೆಂದು ಆಜ್ಞಾಪಿಸಲಾಗಿತ್ತು. ಆ ಬಾಧೆ, ಚೇಳು ಕುಟುಕಿದರೆ ಉಂಟಾಗುವ ಬಾಧೆಯಂಥದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇವರನ್ನು ಕೊಲ್ಲದೆ ಐದು ತಿಂಗಳುಗಳವರೆಗೂ ಪೀಡಿಸುವದಕ್ಕೆ ಅಪ್ಪಣೆಯಾಯಿತು. ಅವರಿಗುಂಟಾದ ಪೀಡೆಯು ಚೇಳು ಮನುಷ್ಯನನ್ನು ಹೊಡೆಯುವದರಿಂದುಂಟಾಗುವ ಪೀಡೆಗೆ ಸಮಾನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜನಗಳಿಗೆ ಐದು ತಿಂಗಳ ಕಾಲ ನೋವು ಉಂಟುಮಾಡುವಂತಹ ಶಕ್ತಿಯನ್ನು ಈ ಮಿಡತೆಗಳಿಗೆ ಕೊಡಲಾಯಿತು. ಆದರೆ ಜನರನ್ನು ಕೊಲ್ಲುವ ಶಕ್ತಿಯನ್ನು ಮಿಡತೆಗಳಿಗೆ ಕೊಡಲಿಲ್ಲ. ಈ ಮಿಡತೆಗಳು ಕುಟುಕಿದಾಗ ಚೇಳು ಕುಟುಕಿದಷ್ಟೇ ನೋವಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತ್ಯಾ ಠೊಳಾಕ್ನಿ ಹ್ಯಾ ಲೊಕಾಕ್ನಿ ಜಿವಾನ್ ಮಾರ್ತಲೊ ಅದಿಕಾರ್ ನತ್ತೊ ಖಾಲಿ ಪಾಚ್ ಮ್ಹಯಿನೆ ತೆಂಕಾ ತರಾಸ್ ದಿತಲೊ ಎವ್ಡೊಚ್ ಅದಿಕಾರ್ ದಿಲ್ಲೊ ಹೊತ್ತೊ. ಹ್ಯಾ ಠೊಳಾಂಚ್ಯಾ ವೈನಾ ತೆಂಕಾ ಯೆತಲೊ ತರಾಸ್ ಮಾನ್ಸಾಕ್ ಇಂಚ್ವಾನ್ ಚಾವಲ್ಲ್ಯಾ ತನ್ನಾ ಹೊತಾ ತಸ್ಲ್ಯಾ ತರಾಸಾ ಸರ್ಕೊಚ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:5
12 ತಿಳಿವುಗಳ ಹೋಲಿಕೆ  

ಅವುಗಳಿಗೆ ಚೇಳಿನಂತೆ ಬಾಲವೂ ಕೊಂಡಿಯೂ ಇದ್ದವು. ಅವುಗಳಿಗೆ ಮನುಷ್ಯರನ್ನು ಐದು ತಿಂಗಳುಗಳ ಕಾಲ ತಮ್ಮ ಬಾಲಗಳಿಂದ ಬಾಧಿಸುವ ಸಾಮರ್ಥ್ಯವಿತ್ತು.


ಆಗ ಯೆಹೋವ ದೇವರು ಸೈತಾನನಿಗೆ, “ಹಾಗಾದರೆ ಅವನು ನಿನ್ನ ಕೈಯಲ್ಲಿ ಇದ್ದಾನೆ. ಅವನ ಪ್ರಾಣವನ್ನು ಮಾತ್ರ ಮುಟ್ಟಬಾರದು,” ಎಂದರು.


ಆ ಹೊಗೆಯೊಳಗಿಂದ ಮಿಡತೆಗಳು ಭೂಮಿಯ ಮೇಲೆ ಬಂದವು. ಅವುಗಳಿಗೆ ಭೂಮಿಯ ಮೇಲಿನ ಚೇಳುಗಳಿಗೆ ಇರುವಂತೆ ಶಕ್ತಿಯನ್ನು ಕೊಡಲಾಗಿತ್ತು.


ಇದಲ್ಲದೆ ಅದಕ್ಕೆ ಪರಿಶುದ್ಧರ ಮೇಲೆ ಯುದ್ಧಮಾಡಿ, ಅವರನ್ನು ಜಯಿಸುವುದಕ್ಕೆ ಬಲವು ಕೊಡಲಾಯಿತು ಮತ್ತು ಸಕಲ ಕುಲ, ಪ್ರಜೆ, ಭಾಷೆ, ರಾಷ್ಟ್ರಗಳ ಮೇಲೆ ಅದಕ್ಕೆ ಅಧಿಕಾರವು ಸಹ ಕೊಡಲಾಯಿತು.


ಆ ಮೃಗಕ್ಕೆ ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಕೊಡಲಾಯಿತು. ನಲವತ್ತೆರಡು ತಿಂಗಳುಗಳವರೆಗೆ ಕಾರ್ಯಸಾಧಿಸುವ ಅಧಿಕಾರವನ್ನೂ ಅದಕ್ಕೆ ಕೊಡಲಾಯಿತು.


ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ, ಪಾತಾಳದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ, ಇವರನ್ನು ಜಯಿಸಿ ಕೊಲ್ಲುವುದು.


ಅದಕ್ಕೆ ಯೇಸು, “ಪರಲೋಕದಿಂದ ನಿನಗೆ ಕೊಟ್ಟ ಹೊರತು ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ,” ಎಂದು ಉತ್ತರಕೊಟ್ಟರು.


“ಇದಾದ ಮೇಲೆ ನಾನು ನೋಡಲಾಗಿ, ಚಿರತೆಯ ಹಾಗಿರುವ ಇನ್ನೊಂದು ಮೃಗವಿತ್ತು. ಇದರ ಬೆನ್ನಿನ ಮೇಲೆ ಪಕ್ಷಿಯ ರೆಕ್ಕೆಗಳು ನಾಲ್ಕು ಇವೆ. ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇವೆ. ಇದಕ್ಕೆ ಆಳುವ ಅಧಿಕಾರವು ಕೊಡಲಾಗಿತ್ತು.


ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು. ಆದರೆ ನಾನು ನಿಮ್ಮ ನೊಗವನ್ನು ಇನ್ನೂ ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ, ನಾನಾದರೋ ನಿಮ್ಮನ್ನು ಚೇಳು ಕೊರಡೆಗಳಿಂದ ಶಿಕ್ಷಿಸುವೆನು,’ ಎಂದು ನೀನು ಅವರಿಗೆ ಹೇಳು,” ಎಂದರು.


ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ, “ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗಿ ಮಾಡಿದನು. ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಶಿಕ್ಷಿಸಿದನು; ಆದರೆ ನಾನು ಮುಳ್ಳು ಕೊರಡೆಗಳಿಂದ ಶಿಕ್ಷಿಸುವೆನು,” ಎಂದನು.


ಮನುಷ್ಯಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ, ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು. ಅವರು ದ್ರೋಹಿ ವಂಶದವರು. ಅವರ ಬಿರುನುಡಿಗೆ ದಿಗಿಲು ಪಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು