Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:1 - ಕನ್ನಡ ಸಮಕಾಲಿಕ ಅನುವಾದ

1 ಜನಭರಿತವಾಗಿದ್ದ ನಗರಿಯು ಹೇಗೆ ಬರಿದಾಗಿ ಹೋಗಿದೆ! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ, ಈಗ ಹೇಗೆ ವಿಧವೆಯಾಗಿದ್ದಾಳೆ! ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ, ಹೇಗೆ ಈಗ ದಾಸಿಯಂತಾಗಿದ್ದಾಳೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಯ್ಯೋ, ಅಂದು ಜನಭರಿತವಾಗಿದ್ದ ನಗರಿ ಇಂದು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ ! ರಾಷ್ಟ್ರಗಳಲ್ಲೆಲ್ಲಾ ಅತಿ ಶ್ರೇಷ್ಠಳಾಗಿದ್ದವಳು ವಿಧವೆ ಆಗಿಬಿಟ್ಟಳಲ್ಲಾ ! ಪ್ರಾಂತ್ಯಗಳಲ್ಲೆಲ್ಲಾ ಬಹಳ ಪ್ರವೀಣಳಾಗಿದ್ದವಳು ದಾಸಿಯಂತೆ ಆಗಿಬಿಟ್ಟಿರುವಳಲ್ಲಾ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕೂತು ಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಬಿಟ್ಟಿಯಾಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಒಂದು ಕಾಲದಲ್ಲಿ ಜೆರುಸಲೇಮ್ ಜನಭರಿತವಾದ ನಗರವಾಗಿತ್ತು. ಆದರೆ ಈಗ ಆ ನಗರವು ಹಾಳುಬಿದ್ದಿದೆ. ಒಂದು ಕಾಲದಲ್ಲಿ ಜೆರುಸಲೇಮ್ ಅತ್ಯಂತ ದೊಡ್ಡನಗರಗಳಲ್ಲಿ ಒಂದಾಗಿತ್ತು. ಆದರೆ ಈಗ ಅದು ವಿಧವೆಯಂತೆ ಆಗಿದೆ. ಒಂದು ಕಾಲದಲ್ಲಿ ಅವಳು ಎಲ್ಲ ನಗರಗಳ ನಡುವೆ ರಾಜಕುಮಾರಿಯಂತೆ ಇದ್ದಳು. ಆದರೆ ಈಗ ಅವಳನ್ನು ದಾಸಿಯನ್ನಾಗಿ ಮಾಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:1
38 ತಿಳಿವುಗಳ ಹೋಲಿಕೆ  

ಚೀಯೋನ್ ಬಾಗಿಲುಗಳಲ್ಲಿ ಪ್ರಲಾಪವು, ದುಃಖವು ತುಂಬಿರುವುದು. ಅವಳು ನಿರ್ಗತಿಕಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.


ಇದಲ್ಲದೆ ಯೆರೂಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ಯೂಫ್ರೇಟೀಸ್ ನದಿಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.


ಇದಲ್ಲದೆ ಸೊಲೊಮೋನನು ಯೂಫ್ರೇಟೀಸ್ ಮೊದಲುಗೊಂಡು ಫಿಲಿಷ್ಟಿಯರ ದೇಶ ಮತ್ತು ಈಜಿಪ್ಟಿನ ಮೇರೆಯವರೆಗೂ ಇರುವ ಸಮಸ್ತ ರಾಜ್ಯಗಳನ್ನು ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳೆಲ್ಲಾ ಕಪ್ಪಗಳನ್ನು ಕೊಡುವವರಾಗಿ ಅವನಿಗೆ ಅಧೀನರಾಗಿದ್ದರು.


“ಹೆದರಬೇಡ, ಏಕೆಂದರೆ ನಿನಗೆ ನಾಚಿಕೆಯಾಗುವುದಿಲ್ಲ. ಗಾಬರಿಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತುಬಿಡುವೆ. ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವುದಿಲ್ಲ.


“ನಿಶ್ಚಿಂತೆಯಾಗಿ ವಾಸಿಸಿದಂಥ ಉಲ್ಲಾಸದ ಪಟ್ಟಣ ನಾನೇ ಹೊರತು ಮತ್ತೊಂದಿಲ್ಲಾ,” ಎಂದು ತನ್ನೊಳಗೆ ಎಂದುಕೊಂಡಂಥ ಸುಭದ್ರ ನಿನೆವೆ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದರಲ್ಲಿ ಹಾದುಹೋಗುವವರೆಲ್ಲರೂ ನಿಂದಿಸಿ ಅಪಹಾಸ್ಯ ಮಾಡುವರು.


ಕಿರೀಟವು ನಮ್ಮ ತಲೆಯ ಮೇಲಿನಿಂದ ಬಿದ್ದುಹೋಯಿತು. ಅಯ್ಯೋ, ನಾವು ಪಾಪಮಾಡಿದ್ದೇವೆ.


ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಹತರಾದವರು ಖಡ್ಗದಿಂದ ಹತರಾದವರಲ್ಲ; ಯುದ್ಧದಲ್ಲಿ ಸತ್ತವರೂ ಅಲ್ಲ.


ಯೆಹೋಯಾಕೀಮನು ಬೆಳ್ಳಿಯನ್ನೂ, ಬಂಗಾರವನ್ನೂ ಫರೋಹನಿಗೆ ಕೊಟ್ಟನು. ಅವನು ಬೆಳ್ಳಿಯನ್ನೂ, ಬಂಗಾರವನ್ನೂ ನೆಕೋ ಫರೋಹನಿಗೆ ಕೊಡಲು ದೇಶದ ಜನರಿಂದ ಪ್ರತಿಯೊಬ್ಬರ ತೆರಿಗೆಯನ್ನು ಬಲವಂತವಾಗಿ ತೆಗೆದುಕೊಂಡನು.


ಆಕೆಯು ಯಾವುದರಿಂದ ತನ್ನನ್ನು ಘನಪಡಿಸಿಕೊಂಡು ಭೋಗಿನಿಯಾಗಿದ್ದಳೋ ಅದಕ್ಕೆ ತಕ್ಕಂತೆ ನೀವು ಆಕೆಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ. ಏಕೆಂದರೆ ಆಕೆ ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ. ನಾನು ವಿಧವೆಯಲ್ಲ, ಎಂದೆಂದಿಗೂ ದುಃಖಿಸುವುದಿಲ್ಲ!’ ಎಂದುಕೊಳ್ಳುತ್ತಾಳೆ.


ಆಮೇಲೆ ಸಮುದ್ರತೀರದ ಎಲ್ಲಾ ರಾಜಕುಮಾರರು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲುವಂಗಿಗಳನ್ನು ತೆಗೆದುಹಾಕುವರು, ಕಸೂತಿ ಕೆಲಸದಿಂದ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು. ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳುವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯವಾಗಿ ಭಯಭೀತರಾದರು.


ಬಂಗಾರವು ಹೇಗೆ ಮಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧಸ್ಥಳದ ಕಲ್ಲುಗಳೂ ಬೀದಿಯ ಬದಿಯಲ್ಲಿ ಚೆಲ್ಲಾಪಿಲ್ಲಿಯಾಗಿವೆ.


ಚೀಯೋನಿನ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಶಬ್ದವಾಗಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳು ಹಾಕಿಕೊಂಡಿದ್ದಾರೆ. ಅವರು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಯೆರೂಸಲೇಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬಗ್ಗಿಸಿಕೊಂಡಿದ್ದಾರೆ.


ಕರ್ತದೇವರು ಹೇಗೆ ತಮ್ಮ ಕೋಪದ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದರು. ತನ್ನ ಕೋಪದ ದಿನದಲ್ಲಿ, ತನ್ನ ಪಾದಪೀಠವನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ.


ಇಗೋ, ಲೋಕವನ್ನೆಲ್ಲಾ ಹೊಡೆದ ಸುತ್ತಿಗೆಯು ಮುರಿದು ತುಂಡುತುಂಡಾಯಿತು! ಹೇಗೆ ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!


ಆಗ ಶಾಫಾನನ ಮಗ ಅಹೀಕಾಮನ ಮಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “ ‘ಬಾಬಿಲೋನಿಯರಿಗೆ ಸೇವೆ ಮಾಡುವುದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,’ ಎಂದನು.


ಯೆರೂಸಲೇಮನ್ನು ದಿಬ್ಬಗಳಾಗಿಯೂ, ನರಿಗಳ ಸ್ಥಾನವಾಗಿಯೂ ಮಾಡುತ್ತೇನೆ. ಯೆಹೂದದ ಪಟ್ಟಣಗಳನ್ನು ನಿವಾಸವಿಲ್ಲದೆ ಹಾಳು ಮಾಡುತ್ತೇನೆ.


ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಒಳ್ಳೆಯ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವವನ ಪಾದಗಳು ಪರ್ವತಗಳ ಮೇಲೆ ಎಷ್ಟೊಂದು ಅಂದವಾಗಿವೆ!


ಯೆರೂಸಲೇಮೇ ಧೂಳನ್ನು ಝಾಡಿಸಿಕೋ, ಎದ್ದು ಆಸನದ ಮೇಲೆ ಕುಳಿತುಕೋ. ಸೆರೆಯಾದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನಗಳನ್ನು ಬಿಚ್ಚಿಕೋ.


ಮುಂಜಾನೆಯ ನಕ್ಷತ್ರವೇ, ಉದಯ ಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಬಿದ್ದೆ?


ಅಲ್ಲಿಗೆ ಗೋತ್ರಗಳು, ಯೆಹೋವ ದೇವರು ಇಸ್ರಾಯೇಲಿಗೆ ಕೊಟ್ಟ ಕಟ್ಟಳೆಗಳ ಪ್ರಕಾರ ಯೆಹೋವ ದೇವರ ಹೆಸರನ್ನು ಕೊಂಡಾಡುವುದಕ್ಕೆ ಗೋತ್ರಗಳು ಯಾತ್ರೆಯಾಗಿ ಬರುತ್ತಿದ್ದವು.


ನಮ್ಮ ಪಾಪಗಳ ನಿಮಿತ್ತ ನೀವು ನಮ್ಮ ಮೇಲೆ ಇಟ್ಟ ಅರಸರಿಗೆ ಅದರ ಹುಟ್ಟುವಳಿ ಬಹಳವಾಗಿ ಹೋಗುತ್ತಿದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಮೇಲೆಯೂ, ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ. ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.


ಇನ್ನು ಕೆಲವರು, “ಅರಸನಿಗೆ ತೆರಿಗೆಯನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ, ನಮ್ಮ ದ್ರಾಕ್ಷಿತೋಟಗಳ ಮೇಲೆಯೂ ಸಾಲವನ್ನು ತೆಗೆದುಕೊಳ್ಳಬೇಕಾಯಿತು.


ಆದರೆ ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಆಳದ ಹಾಗೆ ಹಮಾತ್ ದೇಶದ ರಿಬ್ಲಾ ಎಂಬ ಊರಲ್ಲಿ ಬಂಧಿಸಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ, ಮೂವತ್ತ ನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು.


ಸಾರ್ವಭೌಮ ಯೆಹೋವ ದೇವರು ನನ್ನ ಕಿವಿಯನ್ನು ತೆರೆದಿದ್ದಾರೆ, ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.


ಅವನು ಯೂಫ್ರೇಟೀಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಈಜಿಪ್ಟಿನ ಮೇರೆಯವರೆಗೆ ಇರುವ ಸಮಸ್ತ ಅರಸರ ಮೇಲೆ ಆಳುತ್ತಾ ಇದ್ದನು.


‘ನನಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನು ದುಃಖಿತ ಮತ್ತು ಬಂಜೆಯಾಗಿದ್ದೆ; ನನ್ನನ್ನು ಗಡಿಪಾರು ಮಾಡಿ ತಿರಸ್ಕರಿಸಲಾಯಿತು. ಇವುಗಳನ್ನು ತಂದವರು ಯಾರು? ನಾನು ಒಬ್ಬಂಟಿಯಾಗಿ ಉಳಿದಿದ್ದೇನೆ, ಇವರನ್ನು ಸಾಕಿದವರು ಯಾರು? ಅವರೆಲ್ಲಿದ್ದರು?’ ” ಎಂದುಕೊಳ್ಳುವೆ.


ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಯಾಕೋಬನ ವಿಷಯ ಸಂತೋಷದಿಂದ ಹಾಡಿ, ಮೂಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ. ಸಾರಿರಿ. ಸ್ತುತಿಸಿರಿ. ‘ಯೆಹೋವ ದೇವರೇ, ನಿನ್ನ ಜನರನ್ನೂ, ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು,’ ಎಂದು ಹೇಳಿರಿ.


ಪ್ರವಾದಿಯಾದ ಯೆರೆಮೀಯನಿಗೆ, “ನಮ್ಮ ವಿಜ್ಞಾಪನೆ ನಿಮ್ಮ ಮುಂದೆ ಬರಲಿ. ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ, ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ? ನಮಗೋಸ್ಕರವೂ ಎಂದರೆ ಈ ಸಮಸ್ತ ಶೇಷಕ್ಕೋಸ್ಕರವೂ,


“ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ಇದು ಯೆರೂಸಲೇಮು; ನಾನು ಅದನ್ನು ಅದರ ಸುತ್ತಲೂ ಇರುವ ಜನಾಂಗಗಳ ದೇಶಗಳ ನಡುವೆ ಇಟ್ಟಿದ್ದೇನೆ.


ನಿಮ್ಮ ಪಟ್ಟಣಗಳನ್ನು ನಾನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಸುವಾಸನೆಗಳನ್ನು ಮೂಸಿ ನೋಡದೆ ಇರುವೆನು.


ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ನಿಮ್ಮ ಹಿಂದೆ ಖಡ್ಗವನ್ನು ಬೀಸುವೆನು. ನಿಮ್ಮ ಭೂಮಿ ಹಾಳಾಗಿರುವುದು, ನಿಮ್ಮ ಪಟ್ಟಣಗಳು ನಾಶವಾಗಿರುವುವು.


“ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯೆರೂಸಲೇಮಿನ ಮೇಲೆಯೂ, ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ಕಂಡಿದ್ದೀರಿ.


ಆದ್ದರಿಂದ ನನ್ನ ರೌದ್ರವೂ ನನ್ನ ಕೋಪವೂ ಸುರಿದು, ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು. ಅವು ಈ ದಿನದವರೆಗೂ ಹಾಳೂ, ಬೀಳೂ ಆದವು.


ನಾನು ನನ್ನ ಪ್ರಿಯರನ್ನು ಕರೆದೆನು. ಆದರೆ ಅವರು ನನ್ನನ್ನು ಮೋಸಗೊಳಿಸಿದರು. ನನ್ನ ಯಾಜಕರು, ನನ್ನ ಹಿರಿಯರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ರೊಟ್ಟಿಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.


“ಮನುಷ್ಯಪುತ್ರನೇ, ಟೈರ್, ಯೆರೂಸಲೇಮಿನ ವಿಷಯವಾಗಿ, ‘ಆಹಾ, ಜನರ ದ್ವಾರವಾಗಿದ್ದದ್ದು ಮುರಿದುಹೋಯಿತು, ಅದು ನನ್ನ ಕಡೆಗೆ ತೆರೆದುಕೊಂಡಿದೆ. ಯೆರೂಸಲೇಮು ಹಾಳಾದದ್ದರಿಂದ ನಾನು ವೃದ್ಧಿಗೊಳ್ಳುವೆನು,’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು