ಪ್ರಲಾಪಗಳು 1:10 - ಕನ್ನಡ ಸಮಕಾಲಿಕ ಅನುವಾದ10 ವೈರಿಯು ಆಕೆಯ ಎಲ್ಲಾ ಬೊಕ್ಕಸಗಳ ಮೇಲೆ ತನ್ನ ಕೈಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರಬಾರದೆಂದು ನೀನು ಆಜ್ಞಾಪಿಸಿದ ಇತರ ಜನಾಂಗಗಳು, ತನ್ನ ಪರಿಶುದ್ಧ ಸ್ಥಳದಲ್ಲಿ ಸೇರುವುದನ್ನು ನೋಡಿದ್ದಾಳೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ವಿರೋಧಿಯು ಕೈಚಾಚಿ ಅವಳ ಭೋಗ್ಯವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; “ಮ್ಲೇಚ್ಛರು ನಿನ್ನ ಸಭೆಗೆ ಸೇರಬಾರದು” ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವುದನ್ನು ಆಕೆಯು ಕಾಣಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೋಚಿಕೊಂಡನು ದ್ರೋಹಿ ಆಕೆಯ ಆಸ್ತಿಯನ್ನು ಕೈಚಾಚಿ. 'ಸೇರಿಸಬಾರದು ಸಭೆಗೆ ಮ್ಲೇಚ್ಛರನ್ನು’ ಎಂಬುದು ದೇವನ ಆಣತಿ. ಆದರಿಗೋ ಅಂಥವರೇ ಪವಿತ್ರಾಲಯ ಪ್ರವೇಶಿಸುವ ದುರ್ಗತಿ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ವಿರೋಧಿಯು ಕೈಚಾಚಿ ಅವಳ ಭೋಗ್ಯ ವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; ಮ್ಲೇಚ್ಫರು ನಿನ್ನ ಸಭೆಗೆ ಸೇರಬಾರದು ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವದನ್ನು ಆಕೆಯು ಕಾಣಬೇಕಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಶತ್ರು ತನ್ನ ಕೈಗಳನ್ನು ಚಾಚಿದನು. ಅವಳ ಎಲ್ಲ ಅಮೂಲ್ಯ ವಸ್ತುಗಳನ್ನು ತೆಗೆದುಕೊಂಡನು. ಯೆಹೋವನೇ, ಆ ಜನರು ನಿನ್ನ ಸಭೆಯನ್ನು ಪ್ರವೇಶಿಸಬಾರದೆಂದು ನೀನು ಆಜ್ಞಾಪಿಸಿದ್ದರೂ ಪರಕೀಯರು ತನ್ನ ಪವಿತ್ರಾಲಯವನ್ನು ಪ್ರವೇಶಿಸುವದನ್ನು ಅವಳು ನೋಡಬೇಕಾಯಿತು. ಅಧ್ಯಾಯವನ್ನು ನೋಡಿ |