Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:15 - ಕನ್ನಡ ಸಮಕಾಲಿಕ ಅನುವಾದ

15 ಕರ್ತದೇವರು ನನ್ನ ಶೂರರನ್ನೆಲ್ಲಾ ತಿರಸ್ಕರಿಸಿದ್ದಾರೆ. ಅವರು ನನಗೆ ವಿರುದ್ಧ ಸೈನ್ಯವನ್ನು ಬರಮಾಡಿ, ನನ್ನ ಯುವಕರನ್ನು ಜಜ್ಜಿದ್ದಾರೆ. ಕರ್ತದೇವರು ಯೆಹೂದದ ಕನ್ಯೆಯನ್ನು ದ್ರಾಕ್ಷಿಯ ತೊಟ್ಟಿಯಂತೆ ತುಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ಹೊರಳಾಡಿಸಿದ್ದಾನೆ; ನನ್ನ ಯುವಕರನ್ನು ಸದೆಬಡಿದಿದ್ದಾನೆ. ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಕನ್ಯೆಯನ್ನು ತೊಟ್ಟಿಯಲ್ಲಿನ ದ್ರಾಕ್ಷಿಯ ಹಾಗೆ ತುಳಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಸ್ವಾಮಿ ತೃಣೀಕರಿಸಿದನು ನನ್ನ ಶೂರರನ್ನೆಲ್ಲಾ ನನ್ನ ಕಣ್ಮುಂದೆಯೇ. ಸೈನ್ಯಸಮೂಹವನ್ನೆ ಬರಮಾಡಿದನು ನನ್ನ ಯುವಕರನ್ನು ಸದೆಬಡಿಯಲೆಂದೇ. ಯೆಹೂದಿಯೆಂಬ ಯುವತಿಯನ್ನು ತುಳಿಸಿದನು ತೊಟ್ಟಿಯಲ್ಲಿ ದ್ರಾಕ್ಷಿ ತುಳಿವಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ತೃಣೀಕರಿಸಿದ್ದಾನೆ; ನನ್ನ ಯುವಕರನ್ನು ಭಂಗಪಡಿಸಬೇಕೆಂದು ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಯುವತಿಯನ್ನು ತೊಟ್ಟಿಯಲ್ಲಿನ ದ್ರಾಕ್ಷೆಯ ಹಾಗೆ ತುಳಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಶೂರ ಸೈನಿಕರನ್ನೆಲ್ಲಾ ಯೆಹೋವನು ತಿರಸ್ಕರಿಸಿದ್ದಾನೆ. ಆ ಸೈನಿಕರು ನಗರದ ಒಳಭಾಗದಲ್ಲಿದ್ದರು. ಆಗ ಯೆಹೋವನು ನನ್ನ ವಿರುದ್ಧ ಒಂದು ಜನರ ಗುಂಪನ್ನು ತಂದನು. ಆತನು ನನ್ನ ತರುಣ ಸೈನಿಕರನ್ನು ಕೊಲ್ಲುವ ಸಲುವಾಗಿ ಆ ಜನರನ್ನು ತಂದನು. ಯೆಹೋವನು ದ್ರಾಕ್ಷಿಯನ್ನು ಆಲೆಯಲ್ಲಿ ತುಳಿದಿದ್ದಾನೆ. ಆ ದ್ರಾಕ್ಷಿಆಲೆಯು ಜೆರುಸಲೇಮ್ ಕನ್ನಿಕೆಗೆ ಸೇರಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:15
27 ತಿಳಿವುಗಳ ಹೋಲಿಕೆ  

ಆಗ ದುಷ್ಟರನ್ನು ತುಳಿದುಬಿಡುವಿರಿ. ಏಕೆಂದರೆ ನಾನು ಕಾರ್ಯಸಾಧಿಸುವ ದಿವಸದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


“ದ್ರಾಕ್ಷಿಯನ್ನು ತೊಟ್ಟಿಯಲ್ಲಿ ನಾನೊಬ್ಬನೇ ತುಳಿದಿದ್ದೇನೆ. ಜನಾಂಗಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ. ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ್ನ ಉರಿಯಲ್ಲಿ ಅವರನ್ನು ಜಜ್ಜಿದ್ದೇನೆ. ಆದ್ದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಸಿಡಿದು, ನನ್ನ ವಸ್ತ್ರಕ್ಕೆ ಮೆತ್ತಿಕೊಂಡಿದೆ;


ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವುದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವುದಿಲ್ಲ. ವಿಪರೀತ ಬಾಧೆಯು ಹಾದುಹೋಗುವಾಗ ನಿಮ್ಮನ್ನು ತುಳಿದುಹಾಕುವುದು.


ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. “ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು.” ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ.


ಯಾವನು ದೇವಪುತ್ರರನ್ನೇ ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಪವಿತ್ರಾತ್ಮ ದೇವರನ್ನು ತಿರಸ್ಕಾರ ಮಾಡಿದ್ದಾನೋ, ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗುವನೆಂಬುದನ್ನು ಯೋಚಿಸಿರಿ.


ಇದಲ್ಲದೆ ಅವರು ಖಡ್ಗಕ್ಕೆ ತುತ್ತಾಗಿ ಬೀಳುವರು ಮತ್ತು ಸೆರೆಯಾಗಿ ಎಲ್ಲಾ ರಾಷ್ಟ್ರಗಳಲ್ಲಿ ಒಯ್ಯುವರು. ಯೆಹೂದ್ಯರಲ್ಲದವರ ಕಾಲ ಪರಿಪೂರ್ಣವಾಗುವವರೆಗೆ ಅವರು ಯೆರೂಸಲೇಮನ್ನು ತುಳಿದುಹಾಕುವರು.


ಆಗ ನನ್ನ ಶತ್ರು ಇದನ್ನು ನೋಡುವನು. ಅವನ ಮುಖವನ್ನು ಅವಮಾನದಿಂದ ಮುಚ್ಚಿಕೊಳ್ಳುವನು, “ನಿನ್ನ ಯೆಹೋವ ದೇವರು ಎಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆತಂದರು.


ಭೂಲೋಕದ ಸೆರೆಯವರನ್ನೆಲ್ಲಾ ಕಾಲುಗಳ ಕೆಳಗೆ ತುಳಿಯುವುದನ್ನೂ,


“ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಮ್ಮನ್ನು ನುಂಗಿಬಿಟ್ಟಿದ್ದಾನೆ. ನಮ್ಮನ್ನು ಜಜ್ಜಿದ್ದಾನೆ. ನಮ್ಮನ್ನು ಬರೀ ಪಾತ್ರೆಯಾಗಿ ಮಾಡಿದ್ದಾನೆ. ಘಟಸರ್ಪದ ಹಾಗೆ ನಮ್ಮನ್ನು ನುಂಗಿಬಿಟ್ಟಿದ್ದಾನೆ. ನಮ್ಮನ್ನು ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ. ನಮ್ಮನ್ನು ಉಗುಳಿಬಿಟ್ಟಿದ್ದಾನೆ.


ಕಟ್ಟಕಡೆಯ ಮೇರೆಯಿಂದ ಅದಕ್ಕೆ ವಿರೋಧವಾಗಿ ಬನ್ನಿ. ಅದರ ಕಣಜಗಳನ್ನು ತೆರೆಯಿರಿ. ಅದನ್ನು ದಿಬ್ಬಗಳಂತೆ ತುಳಿಯಿರಿ. ಸಂಪೂರ್ಣವಾಗಿ ನಾಶಮಾಡಿರಿ. ಅದಕ್ಕೆ ಒಂದೂ ಉಳಿಯದಿರಲಿ.


ನಿಮ್ಮ ಸಂಗಡ ಯುದ್ಧಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿದ್ದಾಗ್ಯೂ, ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು, ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.”


ಆದ್ದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು. ಖಡ್ಗದ ಬಲದಿಂದ ಅವರ ರಕ್ತವನ್ನು ಸುರಿದುಬಿಡು. ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ. ಅವರ ಗಂಡಸರು ಹತರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗಕ್ಕೆ ತುತ್ತಾಗಲಿ.


“ಆದ್ದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು. “ ‘ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ. ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ಏಟಿನಿಂದಲೂ, ದೊಡ್ಡ ಪೆಟ್ಟಿನಿಂದಲೂ ಗಾಯಗೊಂಡಿದ್ದಾಳೆ.


ಪೂರ್ವದಿಂದ ನೀತಿವಂತನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು, ರಾಷ್ಟ್ರಗಳನ್ನು ಅವನ ಮುಂದೆ ಕೊಟ್ಟುಬಿಟ್ಟು, ಅವನನ್ನು ರಾಜರ ಮೇಲೆ ಆಳುವುದಕ್ಕೆ ಮಾಡಿದವನು ಯಾರು? ಅವನ ಖಡ್ಗವನ್ನು ಧೂಳನ್ನಾಗಿಯೂ, ಅವನ ಬಿಲ್ಲನ್ನು ಹಾರಿಹೋಗುವ ಹೊಟ್ಟಿನಂತೆಯೂ ಅವರನ್ನು ಕೊಟ್ಟನು.


ನನ್ನ ದ್ರಾಕ್ಷಿ ತೋಟಕ್ಕೆ ನಾನು ಮಾಡುವುದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿಯನ್ನು ತೆಗೆದುಹಾಕುವೆನು. ಆಗ ದನಕರುಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವುದು.


ನಿಮ್ಮ ತೀರ್ಪುಗಳನ್ನು ಮೀರಿದವರನ್ನೆಲ್ಲಾ ನೀವು ತಿರಸ್ಕರಿಸುತ್ತೀರಿ, ಏಕೆಂದರೆ ಅವರ ಕುಯುಕ್ತಿಯು ವ್ಯರ್ಥವಾಗುವುದು.


ಯೇಹುವು, “ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ,” ಎಂದನು. ಅವರು ಅವಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ, ಕುದುರೆಗಳ ಮೇಲೆಯೂ ಸಿಡಿಯಿತು. ಯೇಹುವು ರಥವನ್ನು ಅವಳ ಮೇಲೆ ಓಡಿಸಿದನು.


ಇವರು ಆ ವರ್ಷ ಮೊದಲುಗೊಂಡು ಹದಿನೆಂಟು ವರ್ಷ ಯೊರ್ದನಿಗೆ ಆಚೆ ಗಿಲ್ಯಾದಿನಲ್ಲಿ ಅಮೋರಿಯರ ದೇಶದಲ್ಲಿರುವ ಇಸ್ರಾಯೇಲರನ್ನೆಲ್ಲಾ ಬಾಧಿಸಿ ಕುಂದಿಸಿದರು.


ನಿಮ್ಮ ಭೂಮಿಯ ಫಲವನ್ನೂ, ನಿಮ್ಮ ಎಲ್ಲಾ ಆದಾಯವನ್ನೂ ನಿಮ್ಮನ್ನರಿಯದ ಜನರು ತಿಂದುಬಿಡುವರು. ನೀವು ಯಾವಾಗಲೂ ಬಲಾತ್ಕಾರವನ್ನೂ, ಸಂಕಟವನ್ನೂ ಅನುಭವಿಸುವಿರಿ.


ಆದ್ದರಿಂದ ಯೆಹೋವ ದೇವರ ಕೋಪದಿಂದ ನಾನು ತುಂಬಿದ್ದೇನೆ. ಅದನ್ನು ನನ್ನೊಳಗೆ ಹಿಡಿಯುವುದು ನನಗೆ ಸಾಕಾಯಿತು. “ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ಏಕೆಂದರೆ, ನಿಶ್ಚಯವಾಗಿ ಗಂಡನ, ಹೆಂಡತಿಯ ಸಂಗಡ, ವೃದ್ಧನ, ದಿನತುಂಬಿದವನ ಸಂಗಡ ಹಿಡಿಯಲಾಗುವರು.


“ಅಡವಿಯ ಗಾಳಿಯಿಂದ ಹಾರಿಹೋಗುವ ಹೊಟ್ಟಿನಂತೆ ಅವರನ್ನು ಚದರಿಸುವೆನು.


ಕುಡುಗೋಲನ್ನು ಹಾಕಿರಿ. ಏಕೆಂದರೆ ಬೆಳೆ ಪಕ್ವವಾಯಿತು. ಬಂದು ಇಳಿಯಿರಿ. ಏಕೆಂದರೆ ದ್ರಾಕ್ಷಿಯ ಆಲೆ ತುಂಬಿ ಇದೆ. ತೊಟ್ಟಿಗಳು ತುಳುಕುವಂತೆ ಅವರ ಕೆಟ್ಟತನವು ಬಹಳವಾಗಿದೆ.


ಯುವಕರು ಮತ್ತು ವೃದ್ಧರು ಬೀದಿಗಳ ನೆಲದ ಮೇಲೆ ಮಲಗಿದ್ದಾರೆ. ನನ್ನ ಯುವಕರು, ಯುವತಿಯರು ಖಡ್ಗದಿಂದ ಹತರಾಗಿದ್ದಾರೆ. ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿರಿ, ಕೊಂದುಹಾಕಿದಿರಿ, ಕನಿಕರಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು