Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:16 - ಕನ್ನಡ ಸಮಕಾಲಿಕ ಅನುವಾದ

16 ಇವುಗಳ ನಿಮಿತ್ತ ನಾನು ಅಳುತ್ತೇನೆ. ನನ್ನ ಕಣ್ಣೀರು ಕಣ್ಣಿನಿಂದ ತುಂಬಿ ಹರಿಯುತ್ತದೆ. ಏಕೆಂದರೆ ನನ್ನನ್ನು ಆದರಿಸುವವರೂ, ನನ್ನ ಪ್ರಾಣವನ್ನು ಬದುಕಿಸುವ ಆದರಿಕರೂ ನನ್ನಿಂದ ದೂರವಾಗಿದ್ದಾರೆ. ನನ್ನ ಮಕ್ಕಳು ಹಾಳಾಗಿದ್ದಾರೆ. ಏಕೆಂದರೆ ನನ್ನ ಶತ್ರುವು ಜಯಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈ ವಿಪತ್ತುಗಳಿಂದ ಗೋಳಾಡುತ್ತಿರುವೆನು, ನನ್ನನ್ನು ಸಂತೈಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವುದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಗೋಳಾಡುತ್ತಿರುವೆನು ಈ ವಿಪತ್ತುಗಳಿಂದ; ಸಂತೈಸಿ ಸುಧಾರಿಸುವವನು ಬಲುದೂರವಿರುವುದರಿಂದ ಹರಿಯುತ್ತಿದೆ ಕಂಬನಿ ಧಾರೆಧಾರೆಯಾಗಿ ಕಣ್ಗಳಿಂದ; ವೈರಿಗಳು ಗೆದ್ದು, ನನ್ನ ಕುವರರು ಬಿದ್ದುಹೋಗಿರುವುದರಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈ ವಿಪತ್ತುಗಳಿಂದ ಅಳುವೆನು, ನನ್ನನ್ನು ಸಂತೈಸಿ ದಣುವಾರಿಸತಕ್ಕವನು ದೂರವಾಗಿರುವದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನಾನು ಈ ಎಲ್ಲ ವಿಪತ್ತುಗಳಿಗಾಗಿ ಅಳುತ್ತೇನೆ. ನನ್ನ ಕಣ್ಣುಗಳಿಂದ ಧಾರಾಕಾರವಾಗಿ ನೀರು ಸುರಿಯುತ್ತಿದೆ. ನನ್ನನ್ನು ಸಂತೈಸುವವರು ಯಾರೂ ಸಮೀಪದಲ್ಲಿ ಇಲ್ಲ; ನನ್ನನ್ನು ಪ್ರೋತ್ಸಾಹಿಸುವವರು ಯಾರೂ ಇಲ್ಲ. ನನ್ನ ಮಕ್ಕಳು ಹಾಳುಬಿದ್ದ ಭೂಮಿಯಂತಿದ್ದಾರೆ. ಶತ್ರುವು ಜಯಶಾಲಿಯಾದ ಕಾರಣ ಅವರು ಹಾಗಾಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:16
23 ತಿಳಿವುಗಳ ಹೋಲಿಕೆ  

ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ, ಆಕೆಯ ಕಣ್ಣೀರು, ಆಕೆಯ ಕೆನ್ನೆಗಳ ಮೇಲಿದೆ. ಆಕೆಯ ಎಲ್ಲಾ ಪ್ರಿಯರಲ್ಲಿ, ಆಕೆಯನ್ನು ಸಂತೈಸುವವರು ಒಬ್ಬರೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ, ಆಕೆಗೆ ವಂಚನೆಮಾಡಿ, ಆಕೆಗೆ ಶತ್ರುಗಳಾದರು.


ಅವರ ಹೃದಯವು ಕರ್ತದೇವರ ಕಡೆಗೆ ಕೂಗಿ, ಚೀಯೋನಿನ ಗೋಡೆಯೇ, ರಾತ್ರಿ ಹಗಲೂ ನಿನ್ನ ಕಣ್ಣೀರು ನದಿಯಂತೆ ಹರಿದು ಹೋಗಲಿ, ನಿನಗೆ ವಿಶ್ರಾಂತಿ ಬೇಡ, ನಿನ್ನ ಕಣ್ಣ ರೆಪ್ಪೆಯನ್ನು ಮುಚ್ಚಬೇಡ.


ನನ್ನ ಕಣ್ಣುಗಳು ಕಣ್ಣೀರಿನಿಂದ ಕುಂದಿ ಹೋಗುತ್ತವೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನೆಲದ ಮೇಲೆ ಹರಡಿದೆ. ಏಕೆಂದರೆ ನನ್ನ ಜನರು ನಾಶವಾಗಿದ್ದಾರೆ. ಮಕ್ಕಳೂ ಶಿಶುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.


“ಆದ್ದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು. “ ‘ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ. ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ಏಟಿನಿಂದಲೂ, ದೊಡ್ಡ ಪೆಟ್ಟಿನಿಂದಲೂ ಗಾಯಗೊಂಡಿದ್ದಾಳೆ.


ನೀವು ಕೇಳದಿದ್ದರೆ, ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು, ಯೆಹೋವ ದೇವರ ಮಂದೆಯು ಸೆರೆಯಾಗಿ ಹೋದದ್ದರಿಂದ ಬಹಳವಾಗಿ ಅಳುವೆನು. ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.


ನಿಮ್ಮ ನಿಯಮವನ್ನು ಕೈಗೊಳ್ಳದೇ ಇರುವಾಗ ನನ್ನ ಕಣ್ಣಿನಿಂದ ಕಣ್ಣೀರು ಧಾರೆಯಾಗಿ ಹರಿಯುತ್ತಿವೆ.


ಅವರು ತಮ್ಮ ಮಕ್ಕಳನ್ನು ಬೆಳೆಸಿದ್ದರೂ, ಅವರ ಮಕ್ಕಳಲ್ಲಿ ಯಾರೂ ಉಳಿಯದ ಹಾಗೆ ನಾನು ಅವರನ್ನು ಮಕ್ಕಳಿಲ್ಲದವರನ್ನಾಗಿ ಮಾಡುವೆನು. ನಾನು ಅವರನ್ನು ಬಿಟ್ಟು ಹೋಗುವಾಗ ಅವರಿಗೆ ಕಷ್ಟ!


ಅವಳ ಅಶುದ್ಧವು ಅವಳ ನೆರಿಗೆಗೆ ಅಂಟಿಕೊಂಡಿದೆ. ಅವಳು ತನ್ನ ಭವಿಷ್ಯವನ್ನು ಜ್ಞಾಪಕಮಾಡಿಕೊಳ್ಳುವುದಿಲ್ಲ. ಆದ್ದರಿಂದ ಅವಳು ಭಯಂಕರವಾಗಿ ಇಳಿದು ಬಂದಳು. ಅವಳನ್ನು ಆದರಿಸುವವರು ಯಾರೂ ಇಲ್ಲ. “ಓ ಯೆಹೋವ ದೇವರೇ, ನನ್ನ ಸಂಕಟವನ್ನು ನೋಡಿರಿ, ಶತ್ರುವು ಜಯಿಸಿದ್ದಾನೆ.”


ಏಕೆಂದರೆ, ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು. ನಮ್ಮ ಕೋಟೆಗಳಲ್ಲಿ ಸೇರಿತು. ಹೊರಗಡೆ ಮಕ್ಕಳನ್ನೂ, ಬೀದಿಗಳಲ್ಲಿ ಯೌವನಸ್ಥರನ್ನೂ ಕಡಿದು ಹಾಕುತ್ತದೆ.


ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ, ದುಃಖವನ್ನೂ, ಮರುಭೂಮಿಯ ಸ್ಥಳಗಳಿಗೋಸ್ಕರ ಗೋಳಾಟವನ್ನೂ ಎತ್ತುವೆನು. ಅವುಗಳ ಮೂಲಕ ಹಾದುಹೋಗದಂತೆ ಅವು ಸುಟ್ಟುಹೋಗಿದೆ. ದನಗಳ ಕೂಗು ಕಿವಿಗೆ ಬೀಳುವುದಿಲ್ಲ. ಆಕಾಶದ ಪಕ್ಷಿಗಳೂ, ಮೃಗಗಳೂ ಸಹ ಓಡಿ ಹೋಗಿವೆ.


ಓ, ನನ್ನ ತಲೆ ಚಿಲುಮೆಯೂ, ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೆಯದು, ಆಗ ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲುರಾತ್ರಿ ಅಳುವೆನು.


ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: ಹಿಂಸೆಗೊಂಡವರ ಕಣ್ಣೀರನ್ನೂ, ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ.


ನಿಂದೆಯು ನನ್ನ ಹೃದಯವನ್ನು ಮುರಿದಿದೆ. ನನ್ನನ್ನು ನಿಸ್ಸಹಾಯಕನನ್ನಾಗಿ ಮಾಡಿದೆ. ಅನುತಾಪಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಇರಲಿಲ್ಲ. ಸಂತೈಸುವವರಿಗೋಸ್ಕರ ಸಹ ಎದುರು ನೋಡಿದೆನು, ಆದರೆ ಯಾರೂ ಸಿಕ್ಕಲಿಲ್ಲ.


ದುಃಖದ ನಿಮಿತ್ತ ನನ್ನನ್ನು ಆಧರಿಸಿ ಕೊಳ್ಳಲು ನಾನು ಮನಸ್ಸು ಮಾಡಿದಾಗ, ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ.


ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅವರು ಅಧೀನರಾದರು.


ಸಂಕಟಕ್ಕೊಳಗಾದವಳೇ! ಬಿರುಗಾಳಿಯಿಂದ ಬಡಿಯಲಾಗಿ ಆದರಣೆ ಹೊಂದದವಳೇ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು, ನಿನ್ನ ಅಸ್ತಿವಾರವನ್ನು ನೀಲಮಣಿಗಳಿಂದ ಹಾಕಿ ಗಾರೆಯಿಂದ ಕಟ್ಟುವೆನು.


“ಯೆರೂಸಲೇಮೇ, ನಿನ್ನ ಮೇಲೆ ಯಾರು ಕನಿಕರಪಡುವರು, ನಿನಗೋಸ್ಕರ ಯಾರು ದುಃಖಿಸುವರು? ನಿನ್ನ ಕ್ಷೇಮವನ್ನು ಕುರಿತು ಕೇಳುವುದಕ್ಕೆ ಯಾರು ಹೋಗುವರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು