Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:17 - ಕನ್ನಡ ಸಮಕಾಲಿಕ ಅನುವಾದ

17 ಚೀಯೋನ್ ತನ್ನ ಕೈಗಳನ್ನು ಚಾಚುತ್ತಾಳೆ. ಅವಳನ್ನು ಆದರಿಸುವವನು ಒಬ್ಬನೂ ಇಲ್ಲ. ಯಾಕೋಬಿಗೆ ಸಂಬಂಧಿಸಿದ ಅವನ ವೈರಿಗಳು ಅವನ ಸುತ್ತಲೂ ಇರಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದಾರೆ. ಯೆರೂಸಲೇಮ್ ಅವರ ಮಧ್ಯದಲ್ಲಿ ಅಶುದ್ಧ ವಸ್ತುವಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಚೀಯೋನ್ ನಗರಿಯು ಕೈಚಾಚಿ ಅಂಗಲಾಚಿದರೂ ಯಾರೂ ಸಂತೈಸರು; ಯಾಕೋಬಿನ ನೆರೆಹೊರೆಯವರು ಅದಕ್ಕೆ ವಿರೋಧಿಗಳಾಗಿರಲಿ ಎಂದು ಯೆಹೋವನು ತೀರ್ಮಾನಿಸಿದ್ದಾನೆ; ಯೆರೂಸಲೇಮು ಅವರ ನಡುವೆ ಹೊಲೆಯಾಗಿ ಬಿದ್ದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸಿಯೋನ್ ನಗರಿ ಕೈಚಾಚಿ ಕೂಗಿಕೊಂಡರೂ ಸಂತೈಸುವವರಾರೂ ಇಲ್ಲ. ನೆರೆಹೊರೆಯವರೇ ಆಕೆಯ ವಿರೋಧಿಗಳಾಗಲೆಂದು ಸರ್ವೇಶ್ವರ ತೀರ್ಮಾನಿಸಿದ್ದಾನಲ್ಲಾ ! ಅವರ ನಡುವೆ ಹೊಲೆಯಾದ ಹೆಣ್ಣಿನಂತೆ ಜೆರುಸಲೇಮ್ ಬಿದ್ದಿದ್ದಾಳಲ್ಲಾ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಚೀಯೋನ್ ನಗರಿಯು ಕೈಚಾಚಿ ಅಂಗಲಾಚಿದರೂ ಯಾರೂ ಸಂತೈಸರು; ಯಾಕೋಬಿನ ನೆರೆಹೊರೆಯವರು ಅದಕ್ಕೆ ವಿರೋಧಿಗಳಾಗಿರಲಿ ಎಂದು ಯೆಹೋವನು ತೀರ್ಮಾನಿಸಿದ್ದಾನೆ; ಯೆರೂಸಲೇಮು ಅವರ ನಡುವೆ ಹೊಲೆಯಾಗಿ ಬಿದ್ದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಚೀಯೋನು ತನ್ನ ಕೈಗಳನ್ನು ಚಾಚಿದಳು. ಅವಳನ್ನು ಸಂತೈಸುವವರೇ ಇರಲಿಲ್ಲ. ಯಾಕೋಬನಿಗೆ ವೈರಿಗಳಾಗಬೇಕೆಂದು ಅವನ ನೆರೆಹೊರೆಯವರಿಗೆ ಯೆಹೋವನು ಆಜ್ಞಾಪಿಸಿದ್ದನು. ಜೆರುಸಲೇಮ್ ಒಂದು ಹೊಲಸು ವಸ್ತುವಾಗಿದ್ದಾಳೆ. ಆ ವೈರಿಗಳ ಮಧ್ಯದಲ್ಲಿ ಅವಳು ಒಂದು ಹೊಲಸು ವಸ್ತುವಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:17
29 ತಿಳಿವುಗಳ ಹೋಲಿಕೆ  

ಏಕೆಂದರೆ ಪ್ರಸವವೇದನೆ ಪಡುವವಳಂತೆ, ಚೊಚ್ಚಲನ್ನು ಹೆರುವವಳ ಸಂಕಟಕ್ಕೆ ಸಮಾನವಾಗಿರುವ ಚೀಯೋನಿನ ಮಗಳ ಕಿರಿಚುವ ಕೂಗನ್ನು ಕೇಳಿದ್ದೇನೆ. ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ, “ಅಯ್ಯೋ, ನನಗೀಗ ಕಷ್ಟ! ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ,” ಎಂದು ಅರಚಿಕೊಳ್ಳುತ್ತಾಳೆ.


ನೀವು ಪ್ರಾರ್ಥಿಸಲು ನಿಮ್ಮ ಕೈಗಳನ್ನು ಚಾಚುವಾಗ, ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು. “ನಿಮ್ಮ ಕೈಗಳು ರಕ್ತದಿಂದ ತೊಯ್ದಿವೆ!


ಅವಳ ಅಶುದ್ಧವು ಅವಳ ನೆರಿಗೆಗೆ ಅಂಟಿಕೊಂಡಿದೆ. ಅವಳು ತನ್ನ ಭವಿಷ್ಯವನ್ನು ಜ್ಞಾಪಕಮಾಡಿಕೊಳ್ಳುವುದಿಲ್ಲ. ಆದ್ದರಿಂದ ಅವಳು ಭಯಂಕರವಾಗಿ ಇಳಿದು ಬಂದಳು. ಅವಳನ್ನು ಆದರಿಸುವವರು ಯಾರೂ ಇಲ್ಲ. “ಓ ಯೆಹೋವ ದೇವರೇ, ನನ್ನ ಸಂಕಟವನ್ನು ನೋಡಿರಿ, ಶತ್ರುವು ಜಯಿಸಿದ್ದಾನೆ.”


ನಾನು ನನ್ನ ಪ್ರಿಯರನ್ನು ಕರೆದೆನು. ಆದರೆ ಅವರು ನನ್ನನ್ನು ಮೋಸಗೊಳಿಸಿದರು. ನನ್ನ ಯಾಜಕರು, ನನ್ನ ಹಿರಿಯರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ರೊಟ್ಟಿಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.


ಇವುಗಳ ನಿಮಿತ್ತ ನಾನು ಅಳುತ್ತೇನೆ. ನನ್ನ ಕಣ್ಣೀರು ಕಣ್ಣಿನಿಂದ ತುಂಬಿ ಹರಿಯುತ್ತದೆ. ಏಕೆಂದರೆ ನನ್ನನ್ನು ಆದರಿಸುವವರೂ, ನನ್ನ ಪ್ರಾಣವನ್ನು ಬದುಕಿಸುವ ಆದರಿಕರೂ ನನ್ನಿಂದ ದೂರವಾಗಿದ್ದಾರೆ. ನನ್ನ ಮಕ್ಕಳು ಹಾಳಾಗಿದ್ದಾರೆ. ಏಕೆಂದರೆ ನನ್ನ ಶತ್ರುವು ಜಯಿಸಿದ್ದಾನೆ.


ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯ ಸಮೇತ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿಸಿದನು.


ಇಸ್ರಾಯೇಲನ್ನು ಕಬಳಿಸಲಾಗಿದೆ. ಅವರು ಜನಾಂಗಗಳಲ್ಲಿ ಬೇಡವಾದ ಪಾತ್ರೆಯ ಹಾಗೆ ಇದ್ದಾರೆ.


“ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.


ಅವರು ಜನರಿಗೆ, ನೀವು ದೂರ ಹೋಗಿರಿ, ನೀವು ಅಶುದ್ಧವಾಗಿದ್ದೀರಿ; ದೂರ ಹೋಗಿರಿ, ದೂರ ಹೋಗಿರಿ, ಮುಟ್ಟಬೇಡಿರಿ, ಎಂದು ಕೂಗಿಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರುವಾಗ, ಅವರು ಇನ್ನು ಮೇಲೆ ಅಲ್ಲಿ ವಾಸಮಾಡುವುದಿಲ್ಲ, ಎಂದು ಬೇರೆ ಜನಾಂಗಗಳೊಳಗೆ ಹೇಳಿದರು.


ನಾನು ನರಳಾಡುವುದನ್ನು ಅವರು ಕೇಳಿದರೂ, ನನ್ನನ್ನು ಆದರಿಸಲು ಅಲ್ಲಿರಲಿಲ್ಲ. ನನ್ನ ಎಲ್ಲಾ ಶತ್ರುಗಳು ನನ್ನ ಕಷ್ಟದ ವಿಷಯವನ್ನು ಕೇಳಿದರು. ನೀವು ಹಾಗೆ ಮಾಡಿದಿರೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು, ಅವರು ನನ್ನ ಹಾಗೆಯೇ ಆಗುವರು.


ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ, ಆಕೆಯ ಕಣ್ಣೀರು, ಆಕೆಯ ಕೆನ್ನೆಗಳ ಮೇಲಿದೆ. ಆಕೆಯ ಎಲ್ಲಾ ಪ್ರಿಯರಲ್ಲಿ, ಆಕೆಯನ್ನು ಸಂತೈಸುವವರು ಒಬ್ಬರೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ, ಆಕೆಗೆ ವಂಚನೆಮಾಡಿ, ಆಕೆಗೆ ಶತ್ರುಗಳಾದರು.


ಯೆಹೋವ ದೇವರು ಹೇಳುತ್ತಾರೆ, ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರುಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ, ಅದನ್ನು ಹಿಡಿದು ಬೆಂಕಿಯಿಂದ ಸುಡುವರು ಮತ್ತು ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗಿ ಮಾಡುವೆನು.”


ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು. ಅವರಿಗೆ ಸಮಾಧಿಯಾಗುವುದಿಲ್ಲ, ಅವರಿಗೋಸ್ಕರ ಯಾರೂ ತಮ್ಮನ್ನು ಕೊಯ್ದುಕೊಳ್ಳುವುದಿಲ್ಲ, ತಮ್ಮ ತಲೆ ಬೋಳಿಸಿಕೊಳ್ಳುವುದೂ ಇಲ್ಲ.


ಕುರುಬರು ತಮ್ಮ ಮಂದೆಗಳ ಸಂಗಡ ಅವಳ ವಿರುದ್ಧ ಬರುವರು. ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು. ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.”


ನಿಮ್ಮ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಒಬ್ಬ ಮನುಷ್ಯನಾದರೂ ತನ್ನ ಹೃದಯದ ವೇದನೆಯಿಂದ, ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿ, ಯಾವ ಪ್ರಾರ್ಥನೆಯನ್ನಾದರೂ, ವಿಜ್ಞಾಪನೆಯನ್ನಾದರೂ ಮಾಡಿದರೆ,


ಆಗ ಸೊಲೊಮೋನನು ಇಸ್ರಾಯೇಲಿನ ಸಮಸ್ತ ಸಮೂಹದವರ ಸಮ್ಮುಖದಲ್ಲಿ ಯೆಹೋವ ದೇವರ ಬಲಿಪೀಠದ ಮುಂದೆ ನಿಂತು, ಆಕಾಶದೆಡೆಗೆ ತನ್ನ ಕೈಗಳನ್ನು ಚಾಚಿ,


ದುಃಖದ ನಿಮಿತ್ತ ನನ್ನನ್ನು ಆಧರಿಸಿ ಕೊಳ್ಳಲು ನಾನು ಮನಸ್ಸು ಮಾಡಿದಾಗ, ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ.


ನನ್ನ ಸೊತ್ತು ನನಗೆ ಚಿತ್ರವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಹದ್ದುಗಳು ಅದಕ್ಕೆ ವಿರೋಧವಾಗಿವೆ. ಬನ್ನಿ, ಕಾಡುಮೃಗಗಳನ್ನೆಲ್ಲಾ ಕೂಡಿಸಿರಿ, ನುಂಗುವುದಕ್ಕೆ ಅವುಗಳನ್ನು ತನ್ನಿರಿ.


ಯೆರೂಸಲೇಮು ಘೋರ ಪಾಪಮಾಡಿದೆ. ಆದ್ದರಿಂದ ಅವಳು ಅಶುದ್ಧಳಾಗಿದ್ದಾಳೆ. ಅವಳನ್ನು ಸನ್ಮಾನಿಸಿದವರೆಲ್ಲರೂ, ಅವಳನ್ನು ಹೀನೈಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ. ಹೌದು, ಅವಳು ನರಳುತ್ತಾ ಹಿಂದಕ್ಕೆ ತಿರುಗುತ್ತಾಳೆ.


ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: ಹಿಂಸೆಗೊಂಡವರ ಕಣ್ಣೀರನ್ನೂ, ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ.


ಸಂಕಟಕ್ಕೊಳಗಾದವಳೇ! ಬಿರುಗಾಳಿಯಿಂದ ಬಡಿಯಲಾಗಿ ಆದರಣೆ ಹೊಂದದವಳೇ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು, ನಿನ್ನ ಅಸ್ತಿವಾರವನ್ನು ನೀಲಮಣಿಗಳಿಂದ ಹಾಕಿ ಗಾರೆಯಿಂದ ಕಟ್ಟುವೆನು.


“ಯೆರೂಸಲೇಮೇ, ನಿನ್ನ ಮೇಲೆ ಯಾರು ಕನಿಕರಪಡುವರು, ನಿನಗೋಸ್ಕರ ಯಾರು ದುಃಖಿಸುವರು? ನಿನ್ನ ಕ್ಷೇಮವನ್ನು ಕುರಿತು ಕೇಳುವುದಕ್ಕೆ ಯಾರು ಹೋಗುವರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು