ಪ್ರಲಾಪಗಳು 1:19 - ಕನ್ನಡ ಸಮಕಾಲಿಕ ಅನುವಾದ19 ನಾನು ನನ್ನ ಪ್ರಿಯರನ್ನು ಕರೆದೆನು. ಆದರೆ ಅವರು ನನ್ನನ್ನು ಮೋಸಗೊಳಿಸಿದರು. ನನ್ನ ಯಾಜಕರು, ನನ್ನ ಹಿರಿಯರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ರೊಟ್ಟಿಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾನು ಕೂಗಿಕೊಂಡರೂ ನನ್ನ ನಲ್ಲರಿಂದ ನನಗೆ ಮೋಸವಾಯಿತು, ನನ್ನ ಯಾಜಕರೂ ಮತ್ತು ಹಿರಿಯರೂ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದು ಆಹಾರವನ್ನು ಹುಡುಕುವುದರಲ್ಲಿಯೇ ಪಟ್ಟಣದೊಳಗೆ ಪ್ರಾಣಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ನನ್ನ ಪ್ರಿಯರನ್ನು ಕರೆದೆ; ಅವರೇ ಮೋಸಮಾಡಿದರೆನಗೆ. ನನ್ನ ಯಾಜಕರೂ ಪ್ರಮುಖರೂ ಪಟ್ಟಣದಲ್ಲೇ ಪ್ರಾಣತೆತ್ತರು, ಉಸಿರನ್ನು ಉಳಿಸಿಕೊಳ್ಳಲು ಊಟವನ್ನು ಹುಡುಕುತ್ತಿರಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾನು ಕೂಗಿಕೊಂಡರೂ ನನ್ನ ನಲ್ಲರಿಂದ ನನಗೆ ಮೋಸವಾಯಿತು, ನನ್ನ ಯಾಜಕರೂ ಹಿರಿಯರೂ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದು ಆಹಾರವನ್ನು ಹುಡುಕುವದರಲ್ಲಿಯೇ ಪಟ್ಟಣದೊಳಗೆ ಪ್ರಾಣಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಾನು ನನ್ನ ಪ್ರಿಯತಮರನ್ನು ಕೂಗಿ ಕರೆದೆ. ಆದರೆ ಅವರು ನನಗೆ ಮೋಸ ಮಾಡಿದರು. ನನ್ನ ಯಾಜಕರು ಮತ್ತು ಹಿರಿಯರು ನಗರದಲ್ಲಿ ಸತ್ತುಹೋದರು. ಅವರು ತಮಗಾಗಿ ಆಹಾರವನ್ನು ಹುಡುಕುತ್ತಿದ್ದರು. ಅವರು ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳ ಬಯಸಿದರು. ಅಧ್ಯಾಯವನ್ನು ನೋಡಿ |
ಆಗ ನೀನು ನಿರ್ಜನನಾದಾಗ ಏನು ಮಾಡುವೆ? ನೀನು ಕಡುಕೆಂಪು ಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡರೇನು? ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು? ನೀವು ವ್ಯರ್ಥವಾಗಿ ನಿನ್ನನ್ನು ಅಲಂಕರಿಸಿಕೊಳ್ಳುತ್ತಿ. ನಿನ್ನ ಪ್ರೇಮಿಗಳು ನಿನ್ನನ್ನು ತಿರಸ್ಕರಿಸುತ್ತಾರೆ; ಅವರು ನಿನ್ನನ್ನು ಕೊಲ್ಲಲು ಬಯಸುತ್ತಾರೆ.