ಪ್ರಲಾಪಗಳು 1:2 - ಕನ್ನಡ ಸಮಕಾಲಿಕ ಅನುವಾದ2 ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ, ಆಕೆಯ ಕಣ್ಣೀರು, ಆಕೆಯ ಕೆನ್ನೆಗಳ ಮೇಲಿದೆ. ಆಕೆಯ ಎಲ್ಲಾ ಪ್ರಿಯರಲ್ಲಿ, ಆಕೆಯನ್ನು ಸಂತೈಸುವವರು ಒಬ್ಬರೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ, ಆಕೆಗೆ ವಂಚನೆಮಾಡಿ, ಆಕೆಗೆ ಶತ್ರುಗಳಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡುವುದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಯ ಮಿತ್ರರೆಲ್ಲಾ ದ್ರೋಹಮಾಡಿ ಶತ್ರುಗಳಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇರುಳೆಲ್ಲ ಅತ್ತಳು ಬಿಕ್ಕಿಬಿಕ್ಕಿ ಕೆನ್ನೆ ಮೇಲೆ ನೋಡಿ, ಕಣ್ಣೀರ ಕೋಡಿ ! ಆಕೆಯ ಹಲವಾರು ಪ್ರಿಯರಲ್ಲಿ ಸಂತೈಸುವವರೇ ಇಲ್ಲ ಮಿತ್ರರಾಗಿದ್ದವರೇ ದ್ರೋಹವೆಸಗಿ ಶತ್ರುಗಳಾಗಿರುವರಲ್ಲಾ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುವದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಗೆ ವಿುತ್ರರೆಲ್ಲಾ ಶತ್ರುಗಳಾಗಿ ದ್ರೋಹ ಮಾಡಿದ್ದಾರೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ರಾತ್ರಿಯಲ್ಲಿ ಅವಳು ಬಿಕ್ಕಿಬಿಕ್ಕಿ ಅಳುತ್ತಾಳೆ. ಅವಳ ಕೆನ್ನೆಗಳ ಮೇಲೆ ಕಣ್ಣೀರು ಹರಿಯುತ್ತಿದೆ. ಅವಳನ್ನು ಸಂತೈಸುವವರು ಯಾರೂ ಇಲ್ಲ. ಅವಳ ಮಿತ್ರ ರಾಷ್ಟ್ರಗಳಲ್ಲಿ ಒಂದೂ ಕೂಡ ಅವಳನ್ನು ಸಂತೈಸುವುದಿಲ್ಲ. ಅವಳ ಸ್ನೇಹಿತರೆಲ್ಲಾ ಅವಳಿಗೆ ದ್ರೋಹ ಮಾಡಿದರು. ಅವಳ ಸ್ನೇಹಿತರೆಲ್ಲಾ ಅವಳಿಗೆ ದ್ರೋಹ ಮಾಡಿದರು. ಅವಳ ಸ್ನೇಹಿತರೆಲ್ಲಾ ಅವಳಿಗೆ ಶತ್ರುಗಳಾದರು. ಅಧ್ಯಾಯವನ್ನು ನೋಡಿ |
ಆಗ ನೀನು ನಿರ್ಜನನಾದಾಗ ಏನು ಮಾಡುವೆ? ನೀನು ಕಡುಕೆಂಪು ಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡರೇನು? ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು? ನೀವು ವ್ಯರ್ಥವಾಗಿ ನಿನ್ನನ್ನು ಅಲಂಕರಿಸಿಕೊಳ್ಳುತ್ತಿ. ನಿನ್ನ ಪ್ರೇಮಿಗಳು ನಿನ್ನನ್ನು ತಿರಸ್ಕರಿಸುತ್ತಾರೆ; ಅವರು ನಿನ್ನನ್ನು ಕೊಲ್ಲಲು ಬಯಸುತ್ತಾರೆ.