ಪ್ರಲಾಪಗಳು 1:21 - ಕನ್ನಡ ಸಮಕಾಲಿಕ ಅನುವಾದ21 ನಾನು ನರಳಾಡುವುದನ್ನು ಅವರು ಕೇಳಿದರೂ, ನನ್ನನ್ನು ಆದರಿಸಲು ಅಲ್ಲಿರಲಿಲ್ಲ. ನನ್ನ ಎಲ್ಲಾ ಶತ್ರುಗಳು ನನ್ನ ಕಷ್ಟದ ವಿಷಯವನ್ನು ಕೇಳಿದರು. ನೀವು ಹಾಗೆ ಮಾಡಿದಿರೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು, ಅವರು ನನ್ನ ಹಾಗೆಯೇ ಆಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯಾರೂ ನನ್ನನ್ನು ಸಂತೈಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ; ನನ್ನ ಶತ್ರುಗಳೆಲ್ಲಾ ನನಗಾದ ಕೇಡಿನ ಸಮಾಚಾರವನ್ನು ಕೇಳಿ ಅದನ್ನು ಮಾಡಿದವನು ನೀನೇ ಎಂದು ಉಲ್ಲಾಸಪಡುತ್ತಾರೆ. ನೀನು ಮುಂತಿಳಿಸಿದ ದಿನವನ್ನು ಬರಮಾಡುವಾಗ ನನಗಾದ ಗತಿಯು ಅವರಿಗೂ ಆಗಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸಾಂತ್ವನ ತರುವವರಾರೂ ಇಲ್ಲವಲ್ಲಾ ನನಗೆ ! ನನ್ನ ನರಳಾಟದ ಸುದ್ದಿ ಮುಟ್ಟಿದೆ ವೈರಿಗಳ ಕಿವಿಗೆ. ನನಗಾದ ಕೇಡಿಗೆ ನೀನೇ ಕಾರಣನೆಂಬ ಸಂತಸ ಶತ್ರುವಿಗೆ. ನೀ ಮುಂತಿಳಿಸಿದ ಮೇರೆಗೆ ನನಗಾದ ಗತಿ ಬರಲಿ ಅವರಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯಾರೂ ನನ್ನನ್ನು ಸಂತೈಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ; ನನ್ನ ಶತ್ರುಗಳೆಲ್ಲಾ ನನಗಾದ ಕೇಡಿನ ಸಮಾಚಾರವನ್ನು ಕೇಳಿ ಅದನ್ನು ಮಾಡಿದವನು ನೀನೇ ಎಂದು ಉಲ್ಲಾಸಪಡುತ್ತಾರೆ. ನೀನು ಮುಂತಿಳಿಸಿದ ದಿನವನ್ನು ಬರಮಾಡುವಾಗ ನನಗಾದ ಗತಿಯು ಅವರಿಗೂ ಆಗಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ನಾನು ನರಳಾಡುತ್ತಿದ್ದೇನೆ. ಅದಕ್ಕಾಗಿ ನನ್ನ ಮಾತುಗಳಿಗೆ ಕಿವಿಗೊಡು; ನನ್ನನ್ನು ಸಂತೈಸುವವರು ಯಾರೂ ಇಲ್ಲ. ನನ್ನ ಎಲ್ಲ ವೈರಿಗಳು ನನ್ನ ಕಷ್ಟಗಳ ಬಗ್ಗೆ ಕೇಳಿದ್ದಾರೆ. ಅವರು ಸಂತೋಷಪಡುತ್ತಿದ್ದಾರೆ. ನೀನು ನನಗೆ ಈ ಸ್ಥಿತಿಯನ್ನು ತಂದದ್ದಕ್ಕಾಗಿ ಅವರು ಸಂತೋಷಪಡುತ್ತಲಿದ್ದಾರೆ. ನೀನು ಪ್ರಕಟಿಸಿದ ಆ ದಿನವನ್ನು ಬರಮಾಡು. ಆ ದಿನ ನನ್ನ ಶತ್ರುಗಳ ಸ್ಥಿತಿ ನನ್ನ ಇಂದಿನ ಸ್ಥಿತಿಯಂತೆ ಆಗಲಿ. ಅಧ್ಯಾಯವನ್ನು ನೋಡಿ |