Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:4 - ಕನ್ನಡ ಸಮಕಾಲಿಕ ಅನುವಾದ

4 ಚೀಯೋನಿನ ಮಾರ್ಗಗಳು ದುಃಖಿಸುತ್ತವೆ. ಏಕೆಂದರೆ ಆಕೆಯ ನಿರ್ಧರಿತ ಹಬ್ಬಗಳಿಗೆ ಯಾರೂ ಬರಲಿಲ್ಲ. ಆಕೆಯ ಎಲ್ಲಾ ಬಾಗಿಲುಗಳು ಹಾಳು ಬಿದ್ದಿವೆ. ಆಕೆಯ ಯಾಜಕರು ನರಳುತ್ತಾರೆ. ಆಕೆಯ ಕನ್ಯೆಯರು ದುಃಖಿಸುತ್ತಾರೆ. ಆಕೆಯು ಕಹಿ ವೇದನೆಯಲ್ಲಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾರೂ ಮಹೋತ್ಸವಗಳಿಗೆ ಬಾರದೆ ಇರುವುದರಿಂದ ಚೀಯೋನಿಗೆ ಹೋಗುವ ದಾರಿಗಳು ಬಿಕೋ ಎನ್ನುತ್ತಿವೆ; ಅದರ ಬಾಗಿಲುಗಳೆಲ್ಲಾ ಹಾಳು ಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಕನ್ಯೆಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕದಿಂದ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬಿಕೋ ಎನ್ನುತ್ತಿವೆ ಸಿಯೋನಿಗೆ ತೆರಳುವ ಮಾರ್ಗಗಳು ಮಹೋತ್ಸವಕ್ಕೆ ಇನ್ನು ಬರುತ್ತಿಲ್ಲ ಯಾತ್ರಿಕರಾರು ಪಾಳುಬಿದ್ದಿವೆ ಅದರ ಬಾಗಿಲುಗಳು ನಿಟ್ಟುಸಿರಿಡುತ್ತಿರುವರು ಅದರ ಯಾಜಕರು ವ್ಯಥೆಪಡುತ್ತಿರುವರು ಅದರ ಯುವತಿಯರು ನಗರಕ್ಕೆ ನಗರವೇ ದುಃಖದಲ್ಲಿ ಮುಳುಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾರೂ ಮಹೋತ್ಸವಗಳಿಗೆ ಬಾರದೆ ಇರುವದರಿಂದ ಚೀಯೋನಿಗೆ ಹೋಗುವ ದಾರಿಗಳು ಬಣಬಣ ಎನ್ನುತ್ತವೆ; ಅದರ ಬಾಗಿಲುಗಳೆಲ್ಲಾ ಹಾಳುಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಯುವತಿಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಚೀಯೋನಿಗೆ ಹೋಗುವ ದಾರಿಗಳು ದುಃಖಿಸುತ್ತಿವೆ. ಅವುಗಳು ದುಃಖಿಸುತ್ತಿವೆ; ಏಕೆಂದರೆ ಯಾರೂ ಈಗ ಉತ್ಸವಗಳಿಗಾಗಿ ಚೀಯೋನಿಗೆ ಬರುವದಿಲ್ಲ. ಚೀಯೋನಿನ ಎಲ್ಲ ಹೆಬ್ಬಾಗಿಲುಗಳು ನಿರ್ಜನವಾಗಿವೆ. ಚೀಯೋನಿನ ಎಲ್ಲ ಯಾಜಕರು ನರಳಾಡುತ್ತಿದ್ದಾರೆ. ಚೀಯೋನಿನ ತರುಣಿಯರನ್ನು ತೆಗೆದುಕೊಂಡು ಹೋಗಲಾಗಿದೆ. ಇದೆಲ್ಲ ಚೀಯೋನಿಗೆ ಅತಿ ದುಃಖವನ್ನುಂಟುಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:4
19 ತಿಳಿವುಗಳ ಹೋಲಿಕೆ  

ಯೆರೂಸಲೇಮನ್ನು ದಿಬ್ಬಗಳಾಗಿಯೂ, ನರಿಗಳ ಸ್ಥಾನವಾಗಿಯೂ ಮಾಡುತ್ತೇನೆ. ಯೆಹೂದದ ಪಟ್ಟಣಗಳನ್ನು ನಿವಾಸವಿಲ್ಲದೆ ಹಾಳು ಮಾಡುತ್ತೇನೆ.


“ಯೆಹೂದವು ದುಃಖಪಡುತ್ತದೆ. ಅವಳ ನಗರಗಳು ಸೊರಗುತ್ತವೆ; ಅವರು ಭೂಮಿಗಾಗಿ ಗೋಳಾಡುತ್ತಾರೆ, ಯೆರೂಸಲೇಮಿನ ಕೂಗು ಏರಿ ಬಂತು.


ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವುದಕ್ಕೂ, ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೂ, ಸುದ್ದಿಯ ಶಬ್ದವೂ, ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.


ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.


ಅವರು ಯೌವನಸ್ಥರನ್ನು ಅರೆಯುವುದಕ್ಕೆ ತೆಗೆದುಕೊಂಡರು ಮತ್ತು ಹುಡುಗರು ಕಟ್ಟಿಗೆಯ ಕೆಳಗೆ ಬಿದ್ದರು.


ಚೀಯೋನ್ ಬಾಗಿಲುಗಳಲ್ಲಿ ಪ್ರಲಾಪವು, ದುಃಖವು ತುಂಬಿರುವುದು. ಅವಳು ನಿರ್ಗತಿಕಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.


ನಾನು ನರಳಾಡುವುದನ್ನು ಅವರು ಕೇಳಿದರೂ, ನನ್ನನ್ನು ಆದರಿಸಲು ಅಲ್ಲಿರಲಿಲ್ಲ. ನನ್ನ ಎಲ್ಲಾ ಶತ್ರುಗಳು ನನ್ನ ಕಷ್ಟದ ವಿಷಯವನ್ನು ಕೇಳಿದರು. ನೀವು ಹಾಗೆ ಮಾಡಿದಿರೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು, ಅವರು ನನ್ನ ಹಾಗೆಯೇ ಆಗುವರು.


ಕಾಡುಮೃಗಗಳು ನಿಮ್ಮ ಮೇಲೆ ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದವರನ್ನಾಗಿ ಮಾಡಿ, ನಿಮ್ಮ ದನಗಳನ್ನು ತಿಂದುಬಿಡುವವು. ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವುವು. ನಿಮ್ಮ ಮಾರ್ಗಗಳು ಹಾಳಾಗಿ ಹೋಗುವುವು.


ಪಟ್ಟಣದ ದ್ವಾರದಿಂದ ಹಿರಿಯರು ಹೋಗಿದ್ದಾರೆ. ಯುವಜನರು ತಮ್ಮ ಸಂಗೀತವನ್ನು ನಿಲ್ಲಿಸಿದ್ದಾರೆ.


ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಅವಳ ಪ್ರೇಮಿಗಳ ಹಿಂದೆ ಹೋಗಿ, ಬಾಳ್ ದೇವತೆಗಳಿಗೆ ಧೂಪ ಸುಟ್ಟ ದಿವಸಗಳಿಗಾಗಿ ನಾನು ಅವಳನ್ನು ದಂಡಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು