Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:6 - ಕನ್ನಡ ಸಮಕಾಲಿಕ ಅನುವಾದ

6 ಚೀಯೋನ್ ಪುತ್ರಿಯ ಎಲ್ಲಾ ವೈಭವವು ಅವಳನ್ನು ಬಿಟ್ಟುಹೋಯಿತು. ಅವಳ ಪ್ರಧಾನರು ಹುಲ್ಲುಗಾವಲು ಕಾಣದ ಜಿಂಕೆಗಳ ಹಾಗಾದರು, ಅವರು ಹಿಂದಟ್ಟುವವನ ಮುಂದೆ ತ್ರಾಣವಿಲ್ಲದವರ ಹಾಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಚೀಯೋನ್ ನಗರಿಯ ವೈಭವವೆಲ್ಲಾ ಕಳೆದುಹೋಗಿದೆ; ಅಲ್ಲಿನ ಪ್ರಧಾನರು ಮೇವಿಲ್ಲದ ಜಿಂಕೆಗಳಂತೆ ಬಲಗುಂದಿ ಹಿಡಿಯಲು ಬೆನ್ನತ್ತಿದವರಿಗೆ ಬೆನ್ನುಕೊಟ್ಟು ಓಡಿಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕಳೆದುಹೋಗಿದೆಯಲ್ಲಾ ಸಿಯೋನ್ ನಗರಿಯ ವೈಭವವೆಲ್ಲಾ ! ಮೇವಿಲ್ಲದೆ ಬಡಕಲಾದ ಜಿಂಕೆಗಳಂತೆ ಅದರ ನಾಯಕರೆಲ್ಲಾ ಓಡಿಹೋದರು ಬೆಂಗೊಟ್ಟು ಅಟ್ಟಿಬಂದವರಿಗೆಲ್ಲಾ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಚೀಯೋನ್ ನಗರಿಯ ವ್ಯೆಭವವೆಲ್ಲಾ ಕಳೆದುಹೋಗಿದೆ; ಅಲ್ಲಿನ ಪ್ರಧಾನರು ಮೇವಿಲ್ಲದ ಜಿಂಕೆಗಳಂತೆ ಬಲಗುಂದಿ ಅಟ್ಟುವವರಿಗೆ ಬೆಂಗೊಟ್ಟು ಓಡಿಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಚೀಯೋನಿನ ಮಗಳ ಸೌಂದರ್ಯವು ಹೊರಟುಹೋಗಿದೆ. ಅವಳ ರಾಜಕುಮಾರರು ಹುಲ್ಲುಗಾವಲನ್ನು ಕಂಡುಕೊಂಡಿಲ್ಲದ ಜಿಂಕೆಯಂತಾಗಿದ್ದಾರೆ. ಅವರು ಬಲಹೀನರಾಗಿ ಓಡಿಹೋದರು. ಬೆನ್ನಟ್ಟಿ ಬಂದ ಜನರಿಗೆ ಬೆಂಗೊಟ್ಟು ಓಡಿಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:6
31 ತಿಳಿವುಗಳ ಹೋಲಿಕೆ  

“ಮನುಷ್ಯಪುತ್ರನೇ, ಅವರ ಮಹತ್ತರ ಸಂತೋಷವನ್ನೂ ಅವರ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವುದನ್ನೂ ಅವರ ಪುತ್ರಪುತ್ರಿಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ ದಿನದಲ್ಲಿ,


ಇಸ್ರಾಯೇಲರ ಮನೆತನದವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ ಎಂದು ಹೇಳು: ಇಗೋ, ನಾನು ನನ್ನ ಪವಿತ್ರಾಲಯವನ್ನೂ, ನಿಮ್ಮ ಮುಖ್ಯಬಲವನ್ನೂ, ನಿಮ್ಮ ನೇತ್ರಾನಂದಕರವಾದದ್ದನ್ನೂ, ನಿಮ್ಮ ಮನಸ್ಸು ಅಭಿಲಾಷಿಸುವುದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳು ಖಡ್ಗದಿಂದ ಬೀಳುವರು.


ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು.


ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ, ಬಾಬಿಲೋನಿಗೆ ತೆಗೆದುಕೊಂಡುಹೋಗಿ, ಜೀವನಾವಧಿಯವರೆಗೆ ಅವನನ್ನು ಸೆರೆಯಲ್ಲಿಟ್ಟನು.


ಕೆರೀಯೋತ್ ಅವನಿಗೆ ವಶವಾಗುವುದು; ಬಲವಾದ ಕೋಟೆಗಳು ಅವನ ಕೈವಶವಾಗುವುವು; ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ ಹೆರುವ ಹೆಣ್ಣಿನ ಎದೆಯದಂತೆ ಅದರುವುದು.


ಅವನ ಬಲವಾದ ಕುದುರೆಗಳ ಗೊರಸುಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಅವನ ಚಕ್ರಗಳ ಧ್ವನಿಯಿಂದಲೂ ತಂದೆಗಳು ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂದಿರುಗಿ ನೋಡರು.


ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಯೆರೂಸಲೇಮಿನಿಂದ ಬಾಬಿಲೋನಿಗೆ ನಾನು ಕರೆದೊಯ್ದ ಸೆರೆಯವರೆಲ್ಲರಿಗೆ ಹೇಳುವುದೇನೆಂದರೆ:


ರಾಜನಿಗೂ ರಾಜಮಾತೆಗೂ ಹೀಗೆ ಹೇಳಿರಿ, “ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ.”


ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.”


ಆಗ ಯೆಹೋವ ದೇವರು ಚೀಯೋನ್ ಪರ್ವತದ ಪ್ರತಿಯೊಂದು ನಿವಾಸದ ಮೇಲೂ, ಅದರ ಸಭೆಗಳ ಮೇಲೂ, ಹಗಲಿನಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಿನಲ್ಲಿ ಪ್ರಜ್ವಲಿಸುವ ಅಗ್ನಿಪ್ರಕಾಶವನ್ನು ಉಂಟುಮಾಡುವರು. ಏಕೆಂದರೆ ದೇವರ ಮಹಿಮೆ ಎಲ್ಲದರ ಮೇಲೆ ಚಪ್ಪರದಂತೆಯೂ ಆವರಿಸುವುದು.


ನಂಬಿಗಸ್ತಿಕೆಯ ಪಟ್ಟಣವು ವ್ಯಭಿಚಾರದ ಪಟ್ಟಣವಾಗಿದೆಯಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆಯಾಗಿತ್ತು. ಆದರೆ ಈಗ ಕೊಲೆಗಾರರಿಂದ ತುಂಬಿದೆ.


ಪರಿಶುದ್ಧತೆ ಎಂಬ ಭೂಷಣದೊಡನೆ ಯೆಹೋವ ದೇವರನ್ನು ಆರಾಧಿಸಿರಿ; ಸಮಸ್ತ ಭೂನಿವಾಸಿಗಳೇ, ಅವರ ಮುಂದೆ ಭಯಪಡಿರಿ.


ಪರಿಪೂರ್ಣ ಸೌಂದರ್ಯದ ಚೀಯೋನಿನಿಂದ ದೇವರು ಪ್ರಕಾಶಿಸುತ್ತಿದ್ದಾರೆ.


ಅವನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: “ ‘ಕನ್ನಿಕೆಯಾದ ಚೀಯೋನ್ ಪುತ್ರಿಯು ನಿನ್ನನ್ನು ತಿರಸ್ಕರಿಸಿ, ನಿನಗೆ ಅಪಹಾಸ್ಯ ಮಾಡುತ್ತಾಳೆ. ಯೆರೂಸಲೇಮಿನ ಪುತ್ರಿಯು ನೀನು ಓಡಿ ಹೋಗುವಾಗ ತನ್ನ ತಲೆಯಾಡಿಸುತ್ತಾಳೆ.


ಇಸ್ರಾಯೇಲ್ ರಕ್ಷಣಾಬಂಡೆ ಅವರನ್ನು ಮಾರಿ, ಯೆಹೋವ ದೇವರು ಅವರನ್ನು ಕೈಬಿಟ್ಟ ಹೊರತು, ಒಬ್ಬನು ಹೇಗೆ ಸಾವಿರ ಮಂದಿಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?


ಯೆಹೋವ ದೇವರು ನಿಮ್ಮನ್ನು ನಿಮ್ಮ ಶತ್ರುಗಳ ಮುಂದೆ ಸೋಲಿಸಿಬಿಡುವರು. ನೀವು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ದಾಳಿಮಾಡಲು ಹೊರಟು, ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗುವಿರಿ. ಭೂಮಿಯ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವವು.


ಆಗ ಪಟ್ಟಣದ ಗೋಡೆ ಮುರಿಯಲಾಯಿತು. ಸೈನಿಕರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನ ಮಾರ್ಗವಾಗಿ ಹೊರಟು, ಬಾಬಿಲೋನಿನವರು ಪಟ್ಟಣದ ಬಳಿಯಲ್ಲಿ ಇದ್ದದ್ದರಿಂದ ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.


ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಅವನನ್ನು ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು