Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:7 - ಕನ್ನಡ ಸಮಕಾಲಿಕ ಅನುವಾದ

7 ಯೆರೂಸಲೇಮು ಕಷ್ಟದ ಮತ್ತು ಸಂಕಟದ ದಿನಗಳಲ್ಲಿ ಪೂರ್ವದಿನಗಳಲ್ಲಿ ತನಗಿದ್ದ ಸಂಪತ್ತೆಲ್ಲವನ್ನು ಜ್ಞಾಪಕ ಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ, ಅವಳಿಗೆ ಯಾರೂ ಸಹಾಯ ಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ನಾಶನದ ವಿಷಯವಾಗಿ ಅಪಹಾಸ್ಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ವೈಭವವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜೆರುಸಲೇಮ್ ದಿಕ್ಕುಪಾಲಾಗಿ ಕಷ್ಟಪಡುವಾಗ ನೆನಸಿಕೊಳ್ಳುತ್ತಾಳೆ ತನ್ನ ಪ್ರಾಚೀನ ವೈಭವಗಳನ್ನೆಲ್ಲಾ. ತನ್ನ ಜನತೆ ವೈರಿಗಳ ವಶವಾದಾಗ ಆಕೆಗೆ ಸಿಗಲಿಲ್ಲ ಯಾರೊಬ್ಬರ ಬೆಂಬಲ. ಆಕೆಯಾ ಹೀನಸ್ಥಿತಿ ನೋಡಿ ವೈರಿಗಳು ಮಾಡಿದರು ಪರಿಹಾಸ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ಭೋಗ್ಯ ವಸ್ತುಗಳನ್ನು ಜ್ಞಾಪಿಸಿಕೊಳ್ಳುತ್ತಾಳೆ; ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜೆರುಸಲೇಮ್ ಹಿಂದಿನ ದಿನಗಳ ಬಗ್ಗೆ ಯೋಚಿಸುತ್ತಾಳೆ; ತಾನು ಮನೆಯನ್ನು ಕಳೆದುಕೊಂಡ ಮತ್ತು ಹಿಂಸೆಗೊಳಗಾದ ಕಾಲವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಹಿಂದೆ ಅವಳಿಗಿದ್ದ ಎಲ್ಲ ಭೋಗ್ಯ ವಸ್ತುಗಳನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಹಳೆಯ ಕಾಲದಲ್ಲಿ ಲಭ್ಯವಿದ್ದ ಎಲ್ಲ ಉತ್ತಮ ವಸ್ತುಗಳನ್ನು ಅವಳು ಸ್ಮರಿಸಿಕೊಳ್ಳುತ್ತಾಳೆ. ತನ್ನ ಜನರನ್ನು ವೈರಿಗಳು ವಶಪಡಿಸಿಕೊಂಡ ಸಂಗತಿಯನ್ನು ಅವಳು ಸ್ಮರಿಸುತ್ತಾಳೆ. ಆಗ ತನಗೆ ಸಹಾಯ ಮಾಡಲು ಯಾರೂ ಇರಲಿಲ್ಲವೆಂಬುದನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಅವಳ ಶತ್ರುಗಳು ಅವಳನ್ನು ನೋಡಿ ನಕ್ಕರು. ಅವಳು ಹಾಳಾದುದನ್ನು ನೋಡಿ ಅವರು ನಕ್ಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:7
23 ತಿಳಿವುಗಳ ಹೋಲಿಕೆ  

ನಾವು ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.


ಜನಸಮೂಹದೊಂದಿಗೆ ನಾನು ಉತ್ಸಾಹದಿಂದಲೂ ಸ್ತೋತ್ರದಿಂದಲೂ ಹಬ್ಬವನ್ನಾಚರಿಸಲು ದೇವರ ಆಲಯಕ್ಕೆ ಹೋಗಿದ್ದನ್ನು ನೆನಪಿಸಿಕೊಳ್ಳುತ್ತಾ ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.


“ಆದರೆ ಅಬ್ರಹಾಮನು, ‘ಮಗನೇ, ನೀನು ನಿನ್ನ ಜೀವಮಾನದಲ್ಲಿ ಒಳ್ಳೆಯವುಗಳನ್ನು ಹೊಂದಿದೆಯಲ್ಲಾ, ಲಾಜರನು ಕೆಟ್ಟವುಗಳನ್ನು ಅನುಭವಿಸಿದ್ದನ್ನು ನೆನಪಿಗೆ ತಂದುಕೋ, ಈಗ ಅವನು ಆದರಣೆ ಹೊಂದುತ್ತಿದ್ದಾನೆ. ನೀನು ಯಾತನೆಪಡುತ್ತಿದ್ದೀ.


“ಆಗ ಅವನಿಗೆ ಬುದ್ಧಿ ಬಂದು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿಯೂ ಉಳಿಯುವಷ್ಟು ಆಹಾರವಿದೆಯಲ್ಲಾ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ!


ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ. ಅವರು, “ಯೆರೂಸಲೇಮನ್ನು ಕೆಡಿಸೋಣ. ಚೀಯೋನಿನ ನಾಶನವನ್ನು ಕಣ್ಣಾರೆ ನೋಡೋಣ,” ಎಂದು ಹೇಳುತ್ತಾರೆ.


ಅವಳು ತನ್ನ ಪ್ರೇಮಿಗಳನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವುದಿಲ್ಲ. ಹುಡುಕಿದರೂ ಅವರು ಸಿಕ್ಕುವುದಿಲ್ಲ. ಆಗ ಅವಳು ಹೀಗೆ ಎಂದುಕೊಳ್ಳುವಳು, ‘ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು. ಏಕೆಂದರೆ ಆಗ ನನ್ನ ಸ್ಥಿತಿ ಪ್ರಸ್ತುತ ಸ್ಥಿತಿಗಿಂತ ಉತ್ತಮವಾಗಿತ್ತು.’


ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು. ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.


“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನೆಂದರೆ, ಇಗೋ, ನಿಮ್ಮ ಸಹಾಯಕ್ಕೆ ಹೊರಟ, ‘ಫರೋಹನ ಸೈನ್ಯವು, ಅದರ ಸ್ವದೇಶವಾದ ಈಜಿಪ್ಟಿಗೆ ಹಿಂದಿರುಗುವುದು.


ನಾನು ವ್ಯಥೆಪಡುತ್ತಿರುವಾಗ, ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿಸುವುದರಿಂದ ನನ್ನ ಆತ್ಮವು ಬಳಲಿ ಹೋಯಿತು.


“ಕಳೆದುಹೋದ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಒಳ್ಳೆಯದು; ಆಗ ದೇವರು ನನ್ನನ್ನು ಕಾಪಾಡುತ್ತಿದ್ದರಲ್ಲವೆ?


ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಶೃಂಗಾರವಾದ ದೇವಾಲಯ ಬೆಂಕಿಯಿಂದ ಸುಟ್ಟುಹೋಯಿತು. ನಮ್ಮ ಅಮೂಲ್ಯ ವಸ್ತುಗಳೆಲ್ಲ ನಾಶವಾದವು.


ಏಕೆಂದರೆ ನಿನ್ನೊಳಗೆ ಇಸ್ರಾಯೇಲೂ ಹಾಸ್ಯಕ್ಕಾಗಿರಲಿಲ್ಲವೋ? ಅದು ಕಳ್ಳರೊಳಗೆ ಸಿಕ್ಕಿತೇನೋ, ಏಕೆಂದರೆ ನೀನು ಅದರ ವಿಷಯ ಯಾವಾಗ ಮಾತನಾಡಿದಂದಿನಿಂದ ತಲೆ ಅಲ್ಲಾಡಿಸಿದ್ದೀಯಲ್ಲಾ.


ನಿನ್ನ ಪರಿಶುದ್ಧ ಪಟ್ಟಣಗಳು ಅಡವಿಯಾದವು. ಚೀಯೋನು ಅಡವಿಯಾಯಿತು. ಯೆರೂಸಲೇಮು ಹಾಳಾಯಿತು.


ಅಮ್ಮೋನ್ಯರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನೀವು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಪಡಿಸಿದಾಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ನೀವು “ಆಹಾ!” ಅಂದದ್ದರಿಂದ


ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ನೀವು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶದವರನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಅದರ ಸ್ಥಿತಿಗೆ ಸಂತೋಷಪಟ್ಟದ್ದರಿಂದ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು