Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:10 - ಕನ್ನಡ ಸಮಕಾಲಿಕ ಅನುವಾದ

10 ಚೀಯೋನಿನ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಶಬ್ದವಾಗಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳು ಹಾಕಿಕೊಂಡಿದ್ದಾರೆ. ಅವರು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಯೆರೂಸಲೇಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬಗ್ಗಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು, ಗೋಣಿ ತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇಮಿನ ಕನ್ಯೆಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ತಲೆಯ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸೊಂಟಕ್ಕೆ ಸುತ್ತಿಕೊಂಡು ಕುಕ್ಕರಿಸಿಹರು ಸಿಯೋನ್ ನಗರಿಯ ಪ್ರಮುಖರು ತಲೆ ತಗ್ಗಿಸಿಹರು ಜೆರುಸಲೇಮಿನ ಯುವತಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇವಿುನ ಯುವತಿಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಚೀಯೋನಿನ ಹಿರಿಯರು ನೆಲದ ಮೇಲೆ ಮೌನವಾಗಿ ಕುಳಿತುಕೊಂಡಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಜೆರುಸಲೇಮಿನ ತರುಣಿಯರು ದುಃಖದಿಂದ ತಲೆ ತಗ್ಗಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:10
26 ತಿಳಿವುಗಳ ಹೋಲಿಕೆ  

ಚೀಯೋನ್ ಬಾಗಿಲುಗಳಲ್ಲಿ ಪ್ರಲಾಪವು, ದುಃಖವು ತುಂಬಿರುವುದು. ಅವಳು ನಿರ್ಗತಿಕಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.


ಅವರು ತಮ್ಮ ಬೀದಿಗಳಲ್ಲಿ ಗೋಣಿತಟ್ಟನ್ನು ತಾವೇ ಸುತ್ತಿಕೊಳ್ಳುವರು. ಪ್ರತಿಯೊಬ್ಬನು ತನ್ನ ಮನೆಯ ಮೇಲೆಯೂ, ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕದಿಂದ ಗೋಳಾಡುವನು.


“ಆ ದಿನದಲ್ಲಿ ದೇವಾಲಯದ ಹಾಡುಗಳು ವಿಲಾಪವಾಗುವುವು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. “ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವುವು. ಮೌನವಾಗಿರಿ!”


ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡುವುದು. ಎಲ್ಲಾ ಮುಖಗಳ ಮೇಲೆ ನಾಚಿಕೆಯೂ, ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವುವು.


ಅವನು ಒಂಟಿಯಾಗಿ ಕುಳಿತು ಮೌನವಾಗಿರಲಿ. ಏಕೆಂದರೆ ಯೆಹೋವ ದೇವರೇ ಅದನ್ನು ಅವನ ಮೇಲೆ ಹೊರಿಸಿದ್ದಾರೆ.


ಚೀಯೋನಿನ ಮಾರ್ಗಗಳು ದುಃಖಿಸುತ್ತವೆ. ಏಕೆಂದರೆ ಆಕೆಯ ನಿರ್ಧರಿತ ಹಬ್ಬಗಳಿಗೆ ಯಾರೂ ಬರಲಿಲ್ಲ. ಆಕೆಯ ಎಲ್ಲಾ ಬಾಗಿಲುಗಳು ಹಾಳು ಬಿದ್ದಿವೆ. ಆಕೆಯ ಯಾಜಕರು ನರಳುತ್ತಾರೆ. ಆಕೆಯ ಕನ್ಯೆಯರು ದುಃಖಿಸುತ್ತಾರೆ. ಆಕೆಯು ಕಹಿ ವೇದನೆಯಲ್ಲಿದ್ದಾಳೆ.


ಜನಭರಿತವಾಗಿದ್ದ ನಗರಿಯು ಹೇಗೆ ಬರಿದಾಗಿ ಹೋಗಿದೆ! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ, ಈಗ ಹೇಗೆ ವಿಧವೆಯಾಗಿದ್ದಾಳೆ! ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ, ಹೇಗೆ ಈಗ ದಾಸಿಯಂತಾಗಿದ್ದಾಳೆ!


ಬಾಬಿಲೋನಿನ ಪುತ್ರಿಯಾದ ಕನ್ನಿಕೆಯೇ, ಕೆಳಕ್ಕೆ ಇಳಿದುಬಂದು, ಧೂಳಿನಲ್ಲಿ ಕುಳಿತುಕೋ! ಕಸ್ದೀಯರ ಪುತ್ರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಏಕೆಂದರೆ ಇನ್ನು ಮೇಲೆ ನಿನ್ನನ್ನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯುವುದಿಲ್ಲ.


ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡನು. ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಂಜೆಯವರೆಗೆ ಯೆಹೋವ ದೇವರ ಮಂಜೂಷದ ಮುಂದೆ ನೆಲದ ಮೇಲೆ ಬೋರಲು ಬಿದ್ದರು.


ಆಗ ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು ಅಳುತ್ತಾ ದುಃಖಿಸುತ್ತಾ ಹೀಗೆ ಕೂಗುವರು: “ ‘ಅಯ್ಯೋ! ಅಯ್ಯೋ! ದುಃಖಭರಿತ ಮಹಾನಗರಿಯೇ, ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಆಕೆಯ ವೈಭವದಿಂದಲೇ ಐಶ್ವರ್ಯವಂತರಾದರಲ್ಲಾ! ಒಂದು ತಾಸಿನಲ್ಲಿ ಆಕೆ ಹಾಳಾದಳಲ್ಲಾ?’


“ಆ ದಿನದಲ್ಲಿ, “ಸೌಂದರ್ಯವತಿಯರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹದಿಂದ ಕುಗ್ಗಿ ಹೋಗುವರು.


ಆದ್ದರಿಂದ ಆ ಕಾಲದಲ್ಲಿ ಬುದ್ಧಿವಂತನು ಮೌನವಾಗಿರುವನು, ಏಕೆಂದರೆ ಅದು ಕೆಟ್ಟ ಕಾಲವಾಗಿದೆ.


ಯೌವನದ ಗಂಡನಿಗೋಸ್ಕರ ಗೋಣಿತಟ್ಟು ಧರಿಸಿ, ಕನ್ಯೆಯ ಹಾಗೆ ಪ್ರಲಾಪಿಸು.


ನಿನಗಾಗಿ ತಲೆ ಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.


ಪಟ್ಟಣದ ದ್ವಾರದಿಂದ ಹಿರಿಯರು ಹೋಗಿದ್ದಾರೆ. ಯುವಜನರು ತಮ್ಮ ಸಂಗೀತವನ್ನು ನಿಲ್ಲಿಸಿದ್ದಾರೆ.


ರಾಜಕುಮಾರರ ಕೈಗಳನ್ನು ಗಲ್ಲಿಗೆ ನೇತುಹಾಕಿದ್ದಾರೆ. ಹಿರಿಯರಿಗೆ ಗೌರವವಿಲ್ಲ.


ಯೆಹೋವ ದೇವರ ಕೋಪವು ಅವರನ್ನು ಚದುರಿಸಿತು. ಅವರು ಇನ್ನು ಅವರನ್ನು ಲಕ್ಷಿಸುವುದಿಲ್ಲ. ಅವರು ಯಾಜಕರನ್ನು ಗೌರವಿಸಲಿಲ್ಲ. ಅವರು ಹಿರಿಯರಿಗೆ ದಯೆ ತೋರಿಸಲಿಲ್ಲ.


ರುಚಿಯಾದವುಗಳನ್ನು ಒಮ್ಮೆ ತಿಂದವರು ಬೀದಿಗಳಲ್ಲಿ ಹಾಳಾಗಿದ್ದಾರೆ. ಚಿಕ್ಕಂದಿನಿಂದಲೂ ಶ್ರೇಷ್ಠ ವಸ್ತ್ರವನ್ನು ತೊಡುತ್ತಿದ್ದವರು, ತಿಪ್ಪೆಗಳಲ್ಲಿ ಬಿದ್ದುಕೊಂಡಿದ್ದಾರೆ.


ನಾವು ಏಕೆ ಸುಮ್ಮನೆ ಕೂತುಕೊಳ್ಳುತ್ತೇವೆ? ನೀವು ಕೂಡಿಕೊಳ್ಳಿರಿ, ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ನಾಶವಾಗೋಣ. ಏಕೆಂದರೆ, ನಾವು ನಮ್ಮ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ ಕಾರಣ, ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ನಾಶಮಾಡಿ, ನಮಗೆ ವಿಷದ ನೀರನ್ನು ಕುಡಿಯಲು ಕೊಟ್ಟಿದ್ದಾರೆ.


ಕಸ್ದೀಯರ ಪುತ್ರಿಯೇ, “ಮೌನವಾಗಿ ಕುಳಿತುಕೋ, ಕತ್ತಲೆಯೊಳಗೆ ಹೋಗು. ಏಕೆಂದರೆ ಇನ್ನು ಮೇಲೆ ನಿನ್ನನ್ನು ರಾಜ್ಯಗಳ ರಾಣಿ ಎಂದು ಕರೆಯುವುದಿಲ್ಲ.


ಆಗ ಅರಮನೆಯ ಮೇಲ್ವಿಚಾರಕನಾದ ಹಿಲ್ಕೀಯನ ಮಗ ಎಲ್ಯಾಕೀಮನೂ ಕಾರ್ಯದರ್ಶಿಯಾದ ಶೆಬ್ನನೂ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬವನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಸೈನ್ಯಾಧಿಕಾರಿಯಾದ ರಬ್ಷಾಕೆ ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.


ಆಗ ತಾಮಾರಳು ತನ್ನ ತಲೆಯ ಮೇಲೆ ಬೂದಿಯನ್ನು ಹಾಕಿಕೊಂಡು, ತಾನು ಧರಿಸಿಕೊಂಡಿದ್ದ ವಿವಿಧ ಬಣ್ಣದ ವಸ್ತ್ರವನ್ನು ಹರಿದು, ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಗಟ್ಟಿಯಾಗಿ ಅಳುತ್ತಾ ಹೋದಳು.


ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ನಡುಪಟ್ಟಿಗೆ ಬದಲಾಗಿ ಹಗ್ಗ, ಜಡೆಯ ಬದಲಾಗಿ ಬೋಳುತಲೆ, ರೇಷ್ಮೆಬಟ್ಟೆಗೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಬರೆ, ಇವೆಲ್ಲ ಅವರಿಗೆ ಬಂದೊದಗುವುದು.


ನಿನ್ನ ನಿಮಿತ್ತ ಧ್ವನಿಗೈದು ದುಃಖದಿಂದ, ತಲೆಗೆ ಧೂಳೆರಚಿಕೊಂಡು, ಬೂದಿಯಲ್ಲಿ ಹೊರಳಾಡಿ,


ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ, ಅವನು ತನ್ನ ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯಲ್ಲಿ ಕುಳಿತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು