Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:11 - ಕನ್ನಡ ಸಮಕಾಲಿಕ ಅನುವಾದ

11 ನನ್ನ ಕಣ್ಣುಗಳು ಕಣ್ಣೀರಿನಿಂದ ಕುಂದಿ ಹೋಗುತ್ತವೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನೆಲದ ಮೇಲೆ ಹರಡಿದೆ. ಏಕೆಂದರೆ ನನ್ನ ಜನರು ನಾಶವಾಗಿದ್ದಾರೆ. ಮಕ್ಕಳೂ ಶಿಶುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕಂಬನಿಗರೆದು ಇಂಗಿಹೋಗಿದೆ ಕಣ್ಣು ಕುದಿಯುತ್ತಿದೆ ನನ್ನೊಳಗೆ ಕರುಳು ! ನನ್ನ ಜನತೆಯೆಂಬ ಯುವತಿ ಹಾಳಾಗಿ ಮಕ್ಕಳು ಹಾದಿಬೀದಿಗಳಲ್ಲಿ ಮೂರ್ಛೆಹೋಗಿ ನನ್ನ ಕರುಳು ಕರಗಿಹೋಗಿದೆ ನೀರಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀರು ಸುರಿದು ಸುರಿದು ನನ್ನ ಕಣ್ಣು ಇಂಗಿಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಯುವತಿಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದದರಿಂದ ನನ್ನ ಕರುಳು ಕರಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕಂಬನಿ ಸುರಿದು ನನ್ನ ಕಣ್ಣುಗಳು ಇಂಗಿಹೋಗಿವೆ. ನನ್ನ ಕರುಳು ತಳಮಳಗೊಂಡಿದೆ. ನನ್ನ ಹೃದಯವನ್ನು ನೆಲಕ್ಕೆ ಚೆಲ್ಲಲಾಗಿದೆ ಎಂದೆನಿಸುತ್ತಿದೆ. ನನ್ನ ಜನರ ವಿನಾಶದಿಂದ ನನಗೆ ಹೀಗಾಗಿದೆ. ಮಕ್ಕಳು ಮತ್ತು ಶಿಶುಗಳು ಮೂರ್ಛೆ ಹೋಗುತ್ತಿದ್ದಾರೆ. ಅವರು ನಗರದ ಕೇಂದ್ರ ಸ್ಥಳಗಳಲ್ಲಿ (ಚೌಕಗಳಲ್ಲಿ) ಮೂರ್ಛೆಹೋಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:11
26 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ ನೋಡು, ಏಕೆಂದರೆ ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನನ್ನೊಂದಿಗೆ ತಿರುಗಿಕೊಂಡಿದೆ. ಏಕೆಂದರೆ ನಾನು ಘೋರವಾಗಿ ಬಿದ್ದಿದ್ದೇನೆ. ಹೊರಗೆ ಖಡ್ಗದಿಂದ ಸಂಹಾರ, ಮನೆಯೊಳಗೆ ಮರಣ.


ಇವುಗಳ ನಿಮಿತ್ತ ನಾನು ಅಳುತ್ತೇನೆ. ನನ್ನ ಕಣ್ಣೀರು ಕಣ್ಣಿನಿಂದ ತುಂಬಿ ಹರಿಯುತ್ತದೆ. ಏಕೆಂದರೆ ನನ್ನನ್ನು ಆದರಿಸುವವರೂ, ನನ್ನ ಪ್ರಾಣವನ್ನು ಬದುಕಿಸುವ ಆದರಿಕರೂ ನನ್ನಿಂದ ದೂರವಾಗಿದ್ದಾರೆ. ನನ್ನ ಮಕ್ಕಳು ಹಾಳಾಗಿದ್ದಾರೆ. ಏಕೆಂದರೆ ನನ್ನ ಶತ್ರುವು ಜಯಿಸಿದ್ದಾನೆ.


ದೇವರ ಬಾಣಗಳು ನನ್ನನ್ನು ಸುತ್ತುವರಿದಿವೆ; ನಾನು ಕರುಣೆಯಿಲ್ಲದೆ ನೆಲದ ಮೇಲೆ ಪಿತ್ತವನ್ನು ಸುರಿದು ಬಿದ್ದವನಂತೆ ಇದ್ದೇನೆ. ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾರೆ.


ಓ, ನನ್ನ ಕರುಳು, ನನ್ನ ಕರುಳು! ನಾನು ನೋವಿನಿಂದ ನರಳುತ್ತೇನೆ. ನನ್ನ ಹೃದಯವು ನನ್ನಲ್ಲಿ ತಳಮಳಗೊಂಡಿದೆ. ನಾನು ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿ ಶಬ್ದವನ್ನೂ, ಯುದ್ಧದ ಆರ್ಭಟವನ್ನೂ ಕೇಳುತ್ತಿರುವೆ.


ಹೀಗಿರಲು ನಾನು ಹೀಗೆ ಹೇಳಿದೆನು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ. ಬಹು ಸಂಕಟದಿಂದ ನಾನು ಅಳುವೆನು. ಏಕೆಂದರೆ ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.”


ನಾನು ಚೆಲ್ಲಿದ ನೀರಿನಂತಿದ್ದೇನೆ, ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿ ಹೋಗಿದೆ. ನನ್ನ ಹೃದಯವು ಮೇಣದ ಹಾಗೆ ನನ್ನೊಳಗೆ ಕರಗಿಹೋಗಿದೆ.


ದುಃಖದಿಂದ ನನ್ನ ಕಣ್ಣುಗಳು ಬಲಹೀನವಾಗಿವೆ, ನನ್ನ ಸಕಲ ವೈರಿಗಳಿಂದ ಅವು ಮೊಬ್ಬಾಗಿವೆ.


ಏಕೆಂದರೆ, ‘ಇಗೋ, ಬಂಜೆಯರೂ ಹೆರದವರೂ ಹಾಲು ಕುಡಿಸದವರೂ ಧನ್ಯರು,’ ಎಂದು ಜನರು ಹೇಳುವ ದಿವಸಗಳು ಬರುತ್ತವೆ.


“ಆದ್ದರಿಂದ ಈಗ ಇಸ್ರಾಯೇಲಿನ ದೇವರೂ, ಸರ್ವಶಕ್ತರಾಗಿರುವ ಯೆಹೋವ ದೇವರೂ ಹೇಳುವುದೇನೆಂದರೆ: ಏಕೆ ನಿಮಗೆ ಉಳಿದಿರುವವರನ್ನು ಮಿಗಿಸದ ಹಾಗೆ ನೀವು ಗಂಡಸರನ್ನೂ, ಹೆಂಗಸರನ್ನೂ, ಮಗುವನ್ನೂ, ಮೊಲೆ ಕೂಸನ್ನೂ ಯೆಹೂದದೊಳಗಿಂದ ಕಡಿದುಬಿಟ್ಟು, ನಿಮ್ಮ ಪ್ರಾಣಗಳಿಗೆ ದೊಡ್ಡ ಕೇಡನ್ನು ಮಾಡಿಕೊಳ್ಳುತ್ತೀರಿ?


“ಆದ್ದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು. “ ‘ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ. ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ಏಟಿನಿಂದಲೂ, ದೊಡ್ಡ ಪೆಟ್ಟಿನಿಂದಲೂ ಗಾಯಗೊಂಡಿದ್ದಾಳೆ.


ದೂರದೇಶದಿಂದ ನನ್ನ ಜನರು ಕೂಗುವ ಮೊರೆಯಿದು: “ಯೆಹೋವ ದೇವರು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ?” ಎಂಬುದೇ ಆದರೂ ಅವರು ತಮ್ಮ ವಿಗ್ರಹಗಳಿಂದಲೂ, ವಿಚಿತ್ರವಾದ ವ್ಯರ್ಥತ್ವಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಏಕೆ?


ನಾನು ಮೊರೆಯಿಟ್ಟು ದಣಿದಿದ್ದೇನೆ. ನನ್ನ ಗಂಟಲು ಒಣಗಿದೆ. ನಾನು ದೇವರನ್ನು ಎದುರು ನೋಡುವುದರಿಂದ ನನ್ನ ಕಣ್ಣು ಕ್ಷೀಣವಾಗಿವೆ.


ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಇಕ್ಕಟ್ಟಿನಲ್ಲಿದ್ದೇನೆ; ನನ್ನ ಕಣ್ಣೂ ನನ್ನ ಪ್ರಾಣವೂ ನನ್ನ ದೇಹವೂ ದುಃಖದಿಂದ ಕ್ಷೀಣವಾಗಿವೆ.


ಆಗ ದಾವೀದನೂ, ಅವನ ಸಂಗಡ ಇದ್ದ ಜನರೂ ಅಳುವುದಕ್ಕೆ ತಮ್ಮಲ್ಲಿ ಶಕ್ತಿಯಿಲ್ಲದೆ ಹೋಗುವವರೆಗೂ ತಮ್ಮ ಸ್ವರವನ್ನೆತ್ತಿ ಅತ್ತರು.


ನಾನು ಬಾನಕ್ಕಿಯಂತೆಯೂ, ಬಕದಂತೆಯೂ ಕೀಚುಗುಟ್ಟಿದೆನು. ಪಾರಿವಾಳದಂತೆ ಗುಬ್ಬಳಿಸುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವುದರಿಂದ ಕ್ಷೀಣವಾದವು. ಕರ್ತದೇವರೇ, ನಾನು ಬಾಧೆಪಡುತ್ತಿದ್ದೇನೆ, ನೀವು ನನಗೆ ಆಶ್ರಯರಾಗಿರಿ.”


ನನ್ನ ಹೃದಯವು ಯಾವಾಗಲೂ ಅಶಾಂತಿಯಿಂದ ಕುದಿಯುತ್ತಿದೆ; ಸಂಕಟಗಳ ದಿವಸಗಳು ನನ್ನನ್ನು ಎದುರಿಸುತ್ತಿವೆ.


ಬಲಹೀನನಾಗಿದ್ದೇನೆ, ಬಹಳ ಜಜ್ಜಿ ಹೋಗಿದ್ದೇನೆ; ನನ್ನ ಹೃದಯದ ವೇದನೆಯಿಂದ ನರಳುತ್ತಾ ಇದ್ದೇನೆ.


ನನ್ನ ಕಣ್ಣುಗಳು ನಿಮ್ಮ ವಾಗ್ದಾನಕ್ಕಾಗಿ ಕಾಯುತ್ತಾ ಮಂದವಾಗುತ್ತಿವೆ; “ನೀವು ಯಾವಾಗ ನನಗೆ ಆದರಣೆ ನೀಡುವಿರಿ?” ಎಂದು ನಾನು ಕೇಳುತ್ತಿರುವೆನು.


ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ. ಏಕೆಂದರೆ ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.


ನಿನ್ನ ಪುತ್ರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ, ಎಲ್ಲಾ ಬೀದಿಗಳು ಕೂಡುವ ಚೌಕಗಳಲ್ಲಿ ಅವರು ಬಿದ್ದಿದ್ದಾರೆ. ಅವರು ಯೆಹೋವ ದೇವರ ರೋಷದಿಂದಲೂ, ನಿನ್ನ ದೇವರ ಗದರಿಕೆಯಿಂದಲೂ ತುಂಬಿದ್ದಾರೆ.


ಅವಳ ಜನರೆಲ್ಲರು ನರಳಾಡುತ್ತಾರೆ. ಅವರು ರೊಟ್ಟಿ ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು, ಅವರು ಆಹಾರಕ್ಕಾಗಿ ತಮ್ಮ ಬೊಕ್ಕಸಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ “ಯೆಹೋವ ದೇವರೇ, ನೋಡು, ಲಕ್ಷಿಸಿ; ಏಕೆಂದರೆ ನಾನು ಭ್ರಷ್ಠಳಾದೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು