Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:17 - ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರು ತಾವು ಸಂಕಲ್ಪಿಸಿದ್ದನ್ನು ಮಾಡಿದ್ದಾರೆ. ಅವರು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತಮ್ಮ ವಾಕ್ಯವನ್ನು ಪೂರೈಸಿದ್ದಾರೆ. ಅವರು ಕೆಡವಿ ಕನಿಕರಿಸಲಿಲ್ಲ. ಅವರು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿದ್ದಾರೆ. ಆತನು ನಿನ್ನ ವೈರಿಗಳ ಕೊಂಬನ್ನು ಎತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ ನಿನ್ನನ್ನು ಕೆಡವಿ, ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರ ಸಿದ್ಧಿಗೆ ತಂದಿದ್ದಾನೆ ತನ್ನ ಸಂಕಲ್ಪವನ್ನು ಈಡೇರಿಸಿದ್ದಾನೆ ಪುರಾತನ ಕಾಲದಲ್ಲಿ ತಾನು ನುಡಿದುದನ್ನು. ನಿನ್ನನ್ನು ಧ್ವಂಸಮಾಡಿದ್ದಾನೆ ದಯೆದಾಕ್ಷಿಣ್ಯವಿಲ್ಲದೆ. ಆನಂದ ತಂದಿದ್ದಾನೆ ವೈರಿಗಳಿಗೆ ಕೋಡುಮೂಡಿಸಿದ್ದಾನೆ ವಿರೋಧಿಗಳಿಗೆ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ [ನಿನ್ನನ್ನು] ಕೆಡವಿ ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನು ತಾನು ನಿಯೋಜಿಸಿದಂತೆ ಮಾಡಿದನು. ತಾನು ಮಾಡುತ್ತೇನೆಂದು ಹೇಳಿದ್ದನ್ನು ಆತನು ಮಾಡಿದ್ದಾನೆ. ಪುರಾತನ ಕಾಲದಿಂದ ತಾನು ವಿಧಿಸಿದ್ದನ್ನು ಆತನು ಮಾಡಿದ್ದಾನೆ. ಆತನು ನಿಷ್ಕರುಣೆಯಿಂದ ನಾಶಮಾಡಿದ್ದಾನೆ. ನಿನಗೆ ಸಂಭವಿಸಿದವುಗಳ ಮೂಲಕವಾಗಿ ಆತನು ನಿನ್ನ ವೈರಿಗಳನ್ನು ಸಂತೋಷಪಡಿಸಿದ್ದಾನೆ. ಆತನು ನಿನ್ನ ವೈರಿಗಳ ಸಾಮರ್ಥ್ಯವನ್ನು ಹೆಚ್ಚಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:17
28 ತಿಳಿವುಗಳ ಹೋಲಿಕೆ  

ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ.


ಅವನ ವೈರಿಗಳ ಬಲಗೈ ಉನ್ನತವಾಗಿದೆ. ಅವನ ವೈರಿಗಳೆಲ್ಲಾ ಆನಂದಿಸುತ್ತಿದ್ದಾರೆ.


ಆದ್ದರಿಂದ ನಾನು ಸಹ ರೋಷದಿಂದಲೇ ಇರುವೆನು. ನಾನು ಅವರನ್ನು ಕನಿಕರಿಸುವುದೂ ಇಲ್ಲ, ನಾನು ಅವರನ್ನು ಉಳಿಸುವುದೂ ಇಲ್ಲ. ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರುಚಿದರೂ, ನಾನು ಅವರನ್ನು ಕೇಳಿಸಿಕೊಳ್ಳುವುದೂ ಇಲ್ಲ,” ಎಂದನು.


ಆಕೆಯ ವೈರಿಗಳು ಆಕೆಯ ಯಜಮಾನರಾಗಿದ್ದಾರೆ. ಆಕೆಯ ಶತ್ರುಗಳು ನೆಮ್ಮದಿಯಿಂದ ಇದ್ದಾರೆ. ಏಕೆಂದರೆ ಆಕೆಯ ಅನೇಕ ಪಾಪಗಳ ನಿಮಿತ್ತ ಯೆಹೋವ ದೇವರು ಆಕೆಯನ್ನು ಸಂಕಟಪಡಿಸಿದ್ದಾರೆ. ಆಕೆಯ ಮಕ್ಕಳು ಶತ್ರುವಿನ ಮುಂದೆ ಸೆರೆಗೆ ಹೋಗಿದ್ದಾರೆ.


ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ, “ಇಗೋ, ನಾನು ಈ ವಂಶಕ್ಕೆ ವಿರೋಧವಾಗಿ ನಾಶನವನ್ನು ಯೋಚಿಸುತ್ತೇನೆ. ಇದರಿಂದ ನೀವು ನಿಮ್ಮನ್ನು ರಕ್ಷಿಸಿಕೊಳ್ಳಲಾರಿರಿ. ಅಹಂಕಾರವಾಗಿ ನಡೆಯದೆ ಇರುವಿರಿ. ಇದು ವಿಪತ್ತಿನ ಕಾಲವೇ,


ನಾವಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.


ಯೆಹೋವ ದೇವರು ಚೀಯೋನಿನ ಗೋಡೆಯನ್ನು ನಾಶಮಾಡಬೇಕೆಂದು ಉದ್ದೇಶಿಸಿದ್ದಾರೆ. ಅಳತೆಯ ಗೆರೆಯನ್ನು ಎಳೆದಿದ್ದಾರೆ. ತನ್ನ ಕೈಯನ್ನು ಕೆಡಿಸುವುದರಿಂದ ಹಿಂದೆಗೆಯಲಿಲ್ಲ. ಆದ್ದರಿಂದ ಕಲ್ಲಿನ ಪ್ರಾಕಾರವನ್ನು ಮತ್ತು ಗೋಡೆಯನ್ನು ಗೋಳಾಡುವಂತೆ ಆತನು ಮಾಡಿದ್ದಾನೆ. ಅವೆರಡೂ ಜೊತೆಯಾಗಿ ಕುಸಿದು ಹೋಗಿವೆ.


“ಹೀಗಿರುವುದರಿಂದ ಈಗ ಯೆಹೂದದ ಮನುಷ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ. ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ. ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂದಿರುಗಿರಿ. ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ಒಳ್ಳೆಯದಾಗಿ ಮಾಡಿರಿ.


ಏಕೆಂದರೆ ನಾನು, “ಅವರು ನನಗೋಸ್ಕರ ಸಂತೋಷಪಡದೆ ಇರಲಿ ನನ್ನ ಪಾದ ಜಾರುವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಳ್ಳದಿರಲಿ,” ಎಂದುಕೊಂಡೆನು.


ಯೆಹೋವ ದೇವರೇ, ನನ್ನ ದೇವರೇ, ನಿಮ್ಮ ನೀತಿಯ ಪ್ರಕಾರ ನನಗೆ ನ್ಯಾಯತೀರಿಸಿರಿ; ಅವರು ನನ್ನ ವಿರುದ್ಧ ಸಂತೋಷಪಡದೆ ಇರಲಿ.


ನನ್ನ ಕೇಡಿನಲ್ಲಿ ಸಂತೋಷಪಡುವವರು ನಾಚಿಕೊಂಡು ಒಟ್ಟಿಗೆ ಕಳವಳಗೊಳ್ಳಲಿ; ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊಂದಲಿ.


ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದು ಹೋಯಿತೆಂದು ನೀವು ಉಲ್ಲಾಸಿಸಬೇಡಿರಿ. ಏಕೆಂದರೆ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಫಲವು ಹಾರುವ ವಿಷಸರ್ಪವೇ.


ಇದರ ನಿಮಿತ್ತ ಭೂಮಿಯು ದುಃಖಿಸುವುದು. ಮೇಲಿರುವ ಆಕಾಶವು ಕಪ್ಪಾಗುವುದು. ಏಕೆಂದರೆ ನಾನು ಅದನ್ನು ಹೇಳಿದ್ದರಿಂದ ನಿಶ್ಚಯಿಸಿದ್ದೇನೆ. ಮಾನಸಾಂತರ ಪಡುವುದಿಲ್ಲ. ಇಲ್ಲವೆ ಅದರಿಂದ ಹಿಂದಿರುಗುವುದಿಲ್ಲ.”


ಕೋಪದಲ್ಲಿ ನಮ್ಮನ್ನು ಮುಚ್ಚಿ ಹಿಂಸಿಸಿದ್ದೀರಿ. ಕನಿಕರಿಸದೆ ಕೊಂದು ಹಾಕಿರುವಿರಿ.


ಯೆಹೋವ ದೇವರು ತಮ್ಮ ರೋಷವನ್ನು ತೀರಿಸಿದ್ದಾರೆ. ಅವರು ತಮ್ಮ ಉಗ್ರವಾದ ಕೋಪವನ್ನು ಸುರಿದಿದ್ದಾರೆ. ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.


ಅವರು ನಮಗೂ, ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾವು ಹೇಳಿದ ಮಾತುಗಳನ್ನು ನೆರವೇರಿಸಿ, ನಮ್ಮ ಮೇಲೆ ದೊಡ್ಡ ವಿನಾಶ ಬರುವ ಹಾಗೆ ಮಾಡಿದ್ದಾರೆ. ಯೆರೂಸಲೇಮಿನಲ್ಲಿ ನಡೆದ ಹಾಗೆ ಇಡೀ ಆಕಾಶದ ಕೆಳಗೆ ಎಲ್ಲೂ ನಡೆಯಲಿಲ್ಲ.


ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿ, ನನ್ನ ವಾಕ್ಯಗಳೂ, ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿಲ್ಲವೋ? “ಆಗ ಅವರು ತಿರುಗಿಕೊಂಡು, ‘ಸೇನಾಧೀಶ್ವರ ಯೆಹೋವ ದೇವರು ನಮಗೆ ಮಾಡುವುದಕ್ಕೆ ಯೋಚಿಸಿದ ಹಾಗೆಯೇ, ನಮ್ಮ ಮಾರ್ಗಗಳ ಪ್ರಕಾರವಾಗಿಯೂ, ನಮ್ಮ ಕ್ರಿಯೆಗಳ ಪ್ರಕಾರವಾಗಿಯೂ ನಮಗೆ ಮಾಡಿದ್ದಾರೆ,’ ಎಂದು ಹೇಳಿದರು.”


ಆಗ ನಾನು ಇಸ್ರಾಯೇಲಿಗೆ ಕೊಟ್ಟ ದೇಶದೊಳಗಿಂದ ಅವರನ್ನು ತೆಗೆದುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಇಸ್ರಾಯೇಲರು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಗುರಿಯಾಗುವರು.


ಅವನ ಖಡ್ಗದ ಮೊನೆ ಮೊಂಡಾಗಿದೆ. ಯುದ್ಧದಲ್ಲಿ ನೀವು ಅವನನ್ನು ನಿಲ್ಲುವಂತೆ ಮಾಡಲಿಲ್ಲ.


ನೀವು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಆತನ ಮಾತುಗಳನ್ನು ಕೇಳದೆ ಹೋದದ್ದರಿಂದಲೇ ಈ ಕಾರ್ಯವು ನಿಮಗೆ ಸಂಭವಿಸಿದೆ.


ಯೆಹೋವ ದೇವರು ಹೇಳುವುದೇನೆಂದರೆ, “ನಾನು ದೇಶದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶಮಾಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು